ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಅಕ್ಟೋಬರ್ 13 ರಿಂದ 17ರ ವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶ ನೀಡಲಾಗಿದ್ದು, ನಾಮಪತ್ರಗಳ ಪರಿಶೀಲನೆಯನ್ನು ಅಕ್ಟೋಬರ್ 18 ರಂದು ನಡೆಸಲಾಗುತ್ತದೆ. ಅಕ್ಟೋಬರ್ 19ರಂದು ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಅದೇ ದಿನ ಚುನಾವಣಾ ಚಿಹ್ನೆ ಹಂಚಿಕೆ ನಡೆಯಲಿದೆ.
ಅಗತ್ಯವಿದ್ದರೆ, ಅಕ್ಟೋಬರ್ 25 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಮತದಾನ ನಡೆದ ದಿನವೇ ಫಲಿತಾಂಶವೂ ಪ್ರಕಟಗೊಳ್ಳಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಈ ಸುದ್ದಿ ಓದಿದ್ದೀರಾ?:ಉತ್ತರ ಕನ್ನಡ | ಅರೆಕಾಲಿಕ ಕಾನೂನು ಸ್ವಯಂ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ
ಈ ಸಂದರ್ಭದಲ್ಲಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕ ಶ್ರೀಕಾಂತ ಭಟ್ಟ, ಸಹಕಾರಿ ಅಧಿಕಾರಿ ಅಜಿತ್ ಶಿರಹಟ್ಟಿ ಹಾಗೂ ಕಂದಾಯ ಅಧಿಕಾರಿ ಡಿ.ಆರ್.ಬೆಳ್ಳಿಮನೆ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು