ಮಂಗಳೂರು | ಜಿಎಸ್‌ಟಿ ಕಡಿತಕ್ಕೆ ಬಿಜೆಪಿ ಸಂಭ್ರಮಾಚರಣೆ ಮಾಡುವ ಅಗತ್ಯವಿಲ್ಲ: ಶಾಸಕ ಮಂಜುನಾಥ್‌ ಭಂಡಾರಿ

Date:

Advertisements

ಕೇಂದ್ರ ಬಿಜೆಪಿ ಸರ್ಕಾರ ಜಿಎಸ್‌ಟಿ ಜಾರಿಗೆ ತಂದು ಜನಸಾಮಾನ್ಯರಿಗೆ ಈಗಾಗಲೇ ಸಾಕಷ್ಟು ತೊಂದರೆ ನೀಡಿದೆ. ಕಳೆದ 8 ವರ್ಷಗಳಲ್ಲಿ ಬಡ ಮತ್ತು ಮಧ್ಯಮ ವರ್ಗದ ಜನರು ಇದರಿಂದ ತತ್ತರಿಸಿ ಹೋಗಿದ್ದಾರೆ. ಜಿಎಸ್‌ಟಿ ಹೆಚ್ಚು ಮಾಡಿದ್ದು ಅವರೇ; ಈಗ ಕಡಿಮೆ ಮಾಡುವುದು ಅವರೇ. ಇದಕ್ಕೆಲ್ಲಾ ಸಂಭ್ರಮದ ಆಚರಣೆಯ ಅಗತ್ಯ ಇದ್ಯಾ? ಎಂದು ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿ ಪ್ರಶ್ನೆ ಮಾಡಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜಿಎಸ್‌ಟಿಯಿಂದ ಅದೆಷ್ಟೋ ಸಂಖ್ಯೆಯ ಕಂಪೆನಿಗಳು ನೆಲ ಕಚ್ಚಿವೆ. ಉದ್ದಿಮೆಗಳು ನಷ್ಟ ಅನುಭವಿಸಿವೆ. ಆವಾಗ್ಲೇ ಜಿಎಸ್‌ಟಿಯನ್ನು ಸರಳೀಕರಣ ಮಾಡಿದ್ದರೆ ಆರ್ಥಿಕತೆ ಸುಧಾರಣೆ ಕಾಣುತ್ತಿತ್ತು. ಕಳೆದ 8 ವರ್ಷಗಳಲ್ಲಿ ಜನರಿಂದ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಸಂಗ್ರಹ ಮಾಡಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರ ವಹಿಸಿದ್ದರೆ ಜಿಎಸ್‌ಟಿಯನ್ನು ಜಾರಿಗೆ ತರುತ್ತಿತ್ತು. ಚುನಾವಣೆಯ ಪ್ರಣಾಳಿಕೆಯಲ್ಲಿಯೂ ಈ ವಿಷಯಗಳಿದ್ದವು. ಇದು ಮಹಾನ್ ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರ ಕನಸಿನ ಕೂಸು ಕೂಡ ಆಗಿತ್ತು. ಆದರೆ ಮನಮೋಹನ್ ಸಿಂಗ್ ಅವರ ಪರಿಕಲ್ಪನೆಯ ಜಿಎಸ್‌ಟಿಗೂ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿಗೂ ಹಲವಾರು ವ್ಯತ್ಯಾಸಗಳಿವೆ” ಎಂದರು.

ಇದನ್ನೂ ಓದಿ: ಮಂಗಳೂರು | ಕೆಲಸ ನಿರಾಕರಣೆ; ಪ್ರತಿಭಟನೆಗಿಳಿದ ಹಳೆ ಬಂದರು ಹಮಾಲಿ ಕಾರ್ಮಿಕರು

“ಮುಂದೆ ಬಿಹಾರ ಸೇರಿದಂತೆ ಇತರೆ ರಾಜ್ಯಗಳಲ್ಲಿ ಚುನಾವಣೆಗಳು ನಡೆಯಲಿದೆ. ಎಲ್ಲಿ ಚುನಾವಣೆಯಲ್ಲಿ ಕಡಿಮೆ ಮತ ಸಿಗುತ್ತೋ ಎಂಬ ಭಯದಲ್ಲಿ ಜಿಎಸ್‌ಟಿ ಕಡಿಮೆ ಮಾಡಲಾಗಿದೆ” ಎಂದು ವ್ಯಂಗ್ಯವಾಡಿದರು.

ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂಎಸ್ ಮುಹಮ್ಮದ್, ಜಿಲ್ಲಾ ಕಾಂಗ್ರೆಸ್ ಮುಂಚೂಣಿ ಘಟಕದ ಜಿಲ್ಲಾಧ್ಯಕ್ಷ ಸಾಹುಲ್ ಹಮೀದ್, ಎಸ್ ಅಪ್ಪಿ, ಇಬ್ರಾಹಿಂ ನವಾಜ್, ಸುಹಾನ್ ಆಳ್ವಾ, ಶುಭಶ್ಚಂದ್ರ ಶೆಟ್ಟಿ ಕೊಲ್ನಾಡ್, ಚಿತ್ತಾರಂಜನ್ ಶೆಟ್ಟಿ, ವಿಕಾಸ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X