ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ

Date:

Advertisements

ಚಿಕ್ಕಬಳ್ಳಾಪುರ: ರಾಜ್ಯ ಸರಕಾರ ರಾಜ್ಯ ನಿಗಮಮಂಡಳಿಗಳ ನೇಮಕ ಮಾಡಿದ್ದು, ರಾಜ್ಯ ಸರಕಾರದ ಶಿಫಾರಸಿನಂತೆ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿ ಅಧ್ಯಕ್ಷಗಿರಿ ಭಾಗ್ಯ ಸಿಕ್ಕಿದೆ.ಚಿಕ್ಕಬಳ್ಳಾಪುರ ವಿಧಾನಸಭೆ ಕ್ಷೇತ್ರದಿಂದ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷರಾಗಿದ್ದ ನಂದಿ ಆಂಜಿನಪ್ಪ ಅವರನ್ನು ಕರ್ನಾಟಕ ರಾಜ್ಯ ಬೀಜ ನಿಗಮದ ಅಧ್ಯಕ್ಷರಾಗಿ ನೇಮಿಸಿ ಸರಕಾರ ಆದೇಶ ಹೊರಡಿಸಿದೆ.

ಇದನ್ನು ಓದಿದ್ದೀರಾ..? ಕೋಲಾರದ https://eedina.com/karnataka/ಕೋಲಾರದ-ಎಸ್-ಎನ್-ಆರ್-ಜಿಲ್ಲಾ/2025-09-25/ಎಸ್ ಎನ್ ಆರ್ ಜಿಲ್ಲಾಸ್ಪತ್ರೆ ವೈದ್ಯರು ಲಂಚ ಕೇಳಿ ಚಿಕಿತ್ಸೆ ವಿಳಂಬದ ಮಾಡಿದ ಆರೋಪ

ವಿಧಾನಸಭೆ ಚುನಾವಣೆಗಳಲ್ಲೂ ಸ್ಪರ್ಧಿಸಿದ್ದ ಆಂಜಿನಪ್ಪ ಕಾಂಗ್ರೆಸ್ ಪಕ್ಷದ ಕಟ್ಟಾಳು ಆಗಿ ಗುರುತಿಸಿಕೊಂಡಿದ್ದು,ಕೊನೆಗೂ ಅವರಿಗೆ ರಾಜ್ಯ ಸರಕಾರ ಮಣೆ ಹಾಕಿದೆ. ಮತ್ತೊಂದೆಡೆ ಬಾಗೇಪಲ್ಲಿವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ ಎನ್.ಸಂಪಂಗಿ ಅವರಿಗೆ ಕರ್ನಾಟಕ ರಾಜ್ಯ ಉಗ್ರಾಣ ನಿಗಮ ಅಧ್ಯಕ್ಷಸ್ಥಾನಕ್ಕೆ ನೇಮಕ ಮಾಡಲಾಗಿದೆ. ಬಾಗೇಪಲ್ಲಿ ಶಾಸಕರಾಗಿ ಸೇವೆ ಸಲ್ಲಿಸಿರುವ ಇವರು, ಹಲವು ಏಳುಬೀಳುಗಳ ನಡುವೆಯೂ ಕಾಂಗ್ರೆಸ್ ಪಕ್ಷದಲ್ಲೇ ಇದ್ದು ಪಕ್ಷಕ್ಕೆ ನಿಷ್ಠೆ ಪ್ರದರ್ಶಿಸಿದ್ದರು.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X