ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಸೆ.17 ಮತ್ತು 18 ರಂದು ಎಸ್.ಐ.ಟಿ ನಡೆಸಿದ ಕಾರ್ಯಾಚರಣೆ ವೇಳೆ ಪತ್ತೆಯಾದ ಏಳು ಅಸ್ಥಿಪಂಜರಗಳಲ್ಲಿ ಒಂದು ಅಸ್ಥಿಪಂಜರದ ಗುರುತನ್ನು 2ನೇ ದಿನದಲ್ಲಿ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಪತ್ತೆ ಹಚ್ಚಲಾಗಿತ್ತು. ಇದೀಗ ಮತ್ತೊಬ್ಬನ ಐಡಿ ಕಾರ್ಡ್ ಮೂಲಕ ಕುಟುಂಬ ಸದಸ್ಯರನ್ನು ಎಸ್.ಐ.ಟಿ ಪತ್ತೆ ಹಚ್ಚಿ ಕಚೇರಿಗೆ ಕರೆದು ಮಾಹಿತಿ ಕಲೆ ಹಾಕಿದೆ.
2-10-2013 ರಂದು ಬೆಂಗಳೂರಿನ ಬಾರಿನಲ್ಲಿ ಕೆಲಸಕ್ಕೆ ಮಾಡುತ್ತಿದ್ದ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ದಾಸರಕಲ್ಲಹಳ್ಳಿ ನಿವಾಸಿ ಬೋಜಪ್ಪ ಮತ್ತು ಚೆನ್ನಮ್ಮ ಎಂಬವರ ಪುತ್ರ ಆದಿಶೇಷ ನಾರಾಯಣ(27) ಎಂಬಾತ ಮನೆಬಿಟ್ಟು ನಾಪತ್ತೆಯಾಗಿದ್ದು, ಅಸ್ಥಿಪಂಜರದ ಸಮೀಪ ಎಸ್.ಐ.ಟಿ ತಂಡಕ್ಕೆ ಡ್ರೈವಿಂಗ್ ಲೈಸೆನ್ಸ್ ಕಾರ್ಡ್ ಸಿಕ್ಕಿದ್ದು ಅದರ ಆಧಾರದ ಮೇಲೆ ಆದಿಶೇಷನ ಅಕ್ಕಂದಿರಾದ ಲಕ್ಷ್ಮಿ, ಪದ್ಮ ಹಾಗೂ ಕುಟಂಬದ ಸದಸ್ಯರನ್ನು ಸೆ.25 ರಂದು ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಕರೆಸಿದ್ದು ಕಚೇರಿಗೆ ಬಂದ ಇವರು ಡ್ರೈವಿಂಗ್ ಲೈಸೆನ್ಸ್ ತಮ್ಮನದ್ದು ಎಂದು ಗುರುತಿಸಿದ್ದಾರೆ.
ನಾಪತ್ತೆ ಬಗ್ಗೆ ಮಾಹಿತಿ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಡಿ.ಎನ್.ಎ ಮಾಡಿಸುವುದಾಗಿಯೂ ಎಸ್.ಐ.ಟಿ ಅಧಿಕಾರಿಗಳು ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆದಿಶೇಷ ನಾರಾಯಣ ಪದೇ ಪದೇ ಮನೆ ಬಿಟ್ಟು ಹೋಗಿ ವಾಪಸ್ ಬರುತ್ತಿದ್ದ ಕಾರಣದಿಂದ ನಾಪತ್ತೆಯಾಗಿರುವ ಬಗ್ಗೆ ಕುಟುಂಬ ಸದಸ್ಯರು ಯಾರು ಕೂಡ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿಲ್ಲ ಎಂದು ತಿಳಿದುಬಂದಿದೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಿರೋಧದ ನಡುವೆಯೂ ಕಾವೇರಿಗೆ ಕಾಂಗ್ರೆಸ್ಸಿಗರ ಮೊಂಡಾರತಿ