ಕೋಲಾರ : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಕೋಲಾರ ಜಿಲ್ಲೆಯಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಯುತ್ತಿದ್ದು, ಜಿಲ್ಲಾಧಿಕಾರಿ ಡಾ. ಎಂ ಆರ್ ರವಿ ಅವರು ಖುದ್ದಾಗಿ ಸಮೀಕ್ಷಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಇಂದು ಅವರು ಕೋಲಾರ ಜಿಲ್ಲೆಯ ಮಾಲೂರು ತಾಲ್ಲೂಕಿನ ತೋರ್ನಹಳ್ಳಿ, ಮುಳಬಾಗಿಲು ತಾಲ್ಲೂಕಿನ ಆವಣಿ ಹಾಗೂ ಕೋಲಾರ ನಗರದ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಸಮೀಕ್ಷಾ ಕಾರ್ಯವನ್ನು ಪರಿಶೀಲಿಸಿದ ಅವರು, ಗಣತಿದಾರರು ಮನೆ-ಮನೆಗೆ ತೆರಳಿ ಮಾಹಿತಿಯನ್ನು ನಿಖರವಾಗಿ ದಾಖಲಿಸುತ್ತಿರುವುದನ್ನು ಗಮನಿಸಿದರು. ಸಮೀಕ್ಷೆಯ ವೇಳೆ ಎದುರಾಗುವ ತಾಂತ್ರಿಕ ಸಮಸ್ಯೆಗಳ ಕುರಿತು ಗಣತಿದಾರರೊಂದಿಗೆ ಚರ್ಚಿಸಿ, ಸಮೀಕ್ಷಾ ಕಾರ್ಯವನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಬೇಕೆಂದು ನಿರ್ದೇಶಿಸಿದರು.
ಇದನ್ನು ಓದಿದ್ದೀರಾ..? ಚಿಕ್ಕಬಳ್ಳಾಪುರ ಜಿಲ್ಲೆಯ ಇಬ್ಬರಿಗೆ ನಿಗಮ ಮಂಡಳಿಯಲ್ಲಿ ಸ್ಥಾನ
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್ ಪಿ. ಬಾಗೇವಾಡಿ, ಅಪರ ಜಿಲ್ಲಾಧಿಕಾರಿ ಮಂಗಳ,ಉಪವಿಭಾಗಾಧಿಕಾರಿ ಡಾ. ಮೈತ್ರಿ, ನಗರಸಭೆ ಮುಖ್ಯ ಅಧಿಕಾರಿ ನವೀನ್ ಚಂದ್ರ, ಜಿಲ್ಲಾ ಸಾಂಖ್ಯೆಕಾ ಅಧಿಕಾರಿ ರಮೇಶ್, ಹಿಂದುಳಿದ ವರ್ಗಗಳ ಇಲಾಖೆ ಅಧಿಕಾರಿ ಗೀತಮ್ಮ ತಾಲೂಕು ಅಧಿಕಾರಿ ಮಂಜುಳ, ಸೇರಿದಂತೆ ಮತ್ತಿತರ ಗಣತಿದಾರರು ಉಪಸ್ಥಿತರಿದ್ದರು.

ಕೋಲಾರದಲ್ಲಿ ಸಮೀಕ್ಷಾ ಕಾರ್ಯ ಸ್ಥಳಕ್ಕೆ ಜಿಲ್ಲಾಧಿಕಾರಿ ಭೇಟಿ : ಪರಿಶೀಲನೆ
Date:
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.
ಪೋಸ್ಟ್ ಹಂಚಿಕೊಳ್ಳಿ: