ಮೋದಿ ಉಪನಾಮ ವಿವಾದ | ಮೊಹಮದ್ ನಲಪಾಡ್‌ ವಿರುದ್ಧ ಪ್ರಕರಣ

Date:

Advertisements
  • ನಲಪಾಡ್ ವಿರುದ್ಧ ಸಖರಾಯಪಟ್ಟಣದಲ್ಲಿ ದೂರು
  • ಪ್ರಕರಣ ದಾಖಲಿಸುವಂತೆ ಸವಾಲು ಹಾಕಿದ್ದ ಯುವ ನಾಯಕ

ಮೋದಿ ಉಪನಾಮದ ಕುರಿತ ರಾಹುಲ್ ಗಾಂಧಿ ಹೇಳಿಕೆಯನ್ನೇ ಪುನರುಚ್ಚರಿಸಿದ್ದ ಯುವ ಕಾಂಗ್ರೆಸ್‌ ರಾಜ್ಯ ಘಟಕದ ಅಧ್ಯಕ್ಷ ಮೊಹಮದ್‌ ಹ್ಯಾರಿಸ್‌ ನಲಪಾಡ್‌ ವಿರುದ್ಧ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾರ್ಚ್‌ 23ರಂದು ನಡೆದ ಕಾರ್ಯಕ್ರಮದಲ್ಲಿ ನಲಪಾಡ್‌ ಹೇಳಿಕೆ ನೀಡಿದ್ದರು. ಈ ಕುರಿತು ಕಡೂರು ತಾಲ್ಲೂಕು ಹಸ್ತಿನಾಪುರದ ಬಿಜೆಪಿ ಕಾರ್ಯಕರ್ತ ಎಚ್‌ ಬಿ ಪ್ರದೀಪ್‌ ನಾಯಕ್‌ ಸಖರಾಯಪಟ್ಟಣ ದೂರು ನೀಡಿದ್ದರು.

ಆದರೆ, ಮೊಹಮದ್ ನಲಪಾಡ್‌ ವಿರುದ್ಧ ಎಫ್‌ಐಆರ್‌ ದಾಖಲಿಸಲು ಪೊಲೀಸರು ನಿರಾಕರಿಸಿದ್ದಾರೆ ಎಂದು ಎಚ್ ಬಿ ನಾಯಕ್‌ ನ್ಯಾಯಾಲಯದ ಬಾಗಿಲು ತಟ್ಟಿದ್ದರು.

Advertisements

ಈ ಕುರಿತು ಅರ್ಜಿ ವಿಚಾರಣೆ ನಡೆಸಿದ ಕಡೂರು ಜೆಎಂಎಫ್‌ಸಿ ನ್ಯಾಯಾಲಯ ಎಫ್‌ಐಆರ್‌ ದಾಖಲಿಸಿ ತನಿಖೆ ನಡೆಸುವಂತೆ ಆದೇಶಿಸಿದೆ.

ಈ ಸುದ್ದಿ ಓದಿದ್ದೀರಾ? ಗಿಫ್ಟ್‌ ಪಾಲಿಟಿಕ್ಸ್‌ | ಬೆಳ್ಳಿ ಎಂದು ನಕಲಿ ಬೆಳ್ಳಿ ಲಕ್ಷ್ಮಿ ಫೋಟೋ ಕೊಟ್ಟ ಬಿಜೆಪಿ ಶಾಸಕ

2019ರ ಲೋಕಸಭಾ ಚುನಾವಣೆ ವೇಳೆ ರಾಹುಲ್ ಗಾಂಧಿ, “ಎಲ್ಲ ಕಳ್ಳರೂ ಮೋದಿ ಉಪನಾಮವನ್ನೇಕೆ ಇಟ್ಟುಕೊಂಡಿದ್ದಾರೆ” ಎಂದು ಕೇಳಿದ್ದರು. ನಲಪಾಡ್‌ ಸಹ ಇದೇ ಹೇಳಿಕೆಯನ್ನು ಪುನರುಚ್ಚರಿದ್ದರು. ಸಾಲದೆಂಬಂತೆ ನನ್ನ ವಿರುದ್ಧವೂ ಪ್ರಕರಣ ದಾಖಲಿಸಿ ಎಂದು ಸವಾಲು ಹಾಕಿದ್ದರು.

ಮೋದಿ ಉಪನಾಮದ ಹೇಳಿಕೆಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ಈ ನಡುವೆ ಯೂತ್ ಕಾಂಗ್ರೆಸ್ ನಾಯಕ ನಲಪಾಡ್‌ ವಿರುದ್ಧವೂ ಪ್ರಕರಣ ದಾಖಲಾಗಿದೆ.

ಮೊಹಮದ್ ಹ್ಯಾರಿಸ್‌ ಅವರು ಉದ್ಯಮಿ, ಶಾಂತಿ ನಗರ ವಿಧಾನಸಭಾ ಕ್ಷೇತ್ರದ ಶಾಸಕ ಎನ್‌ ಎ ಹ್ಯಾರಿಸ್‌ ಅವರ ಪುತ್ರರಾಗಿದ್ದಾರೆ. ಹ್ಯಾರಿಸ್‌ 2008ರಿಂದ ಕರ್ನಾಟಕ ವಿಧಾನಸಭೆಯಲ್ಲಿ ಶಾಂತಿ ನಗರ ವಿಧಾನಸಭಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ಏನಿದು ಮೋದಿ ಉಪನಾಮ ವಿವಾದ

2019ರ ಏಪ್ರಿಲ್ 19ರಂದು ರಾಹುಲ್ ಗಾಂಧಿ ಅವರು ಕರ್ನಾಟಕದ ಕೋಲಾರದಲ್ಲಿ ನಡೆದ ಲೋಕಸಭಾ ಚುನಾವಣಾ ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಉಪನಾಮದ ಕುರಿತು ವ್ಯಂಗ್ಯವಾಡಿದ್ದರು. 

“ಎಲ್ಲಾ ಕಳ್ಳರು, ಎಂದರೆ; ಅದು ನೀರವ್ ಮೋದಿ, ಲಲಿತ್ ಮೋದಿ ಅಥವಾ ನರೇಂದ್ರ ಮೋದಿ ಇವರೆಲ್ಲರೂ ಮೋದಿ ಎಂಬ ಉಪನಾಮನ್ನೇಕೆ ಹೊಂದಿದ್ದಾರೆ” ಎಂದು ಪ್ರಶ್ನಿಸಿದ್ದರು.

ರಾಹುಲ್ ಗಾಂಧಿ ಅವರ ಹೇಳಿಕೆ ಬಿಜೆಪಿಯ ಕೆಂಗಣ್ಣಿಗೆ ಗುರಿಯಾಗಿತ್ತು. ಬೆನ್ನಲ್ಲೇ ಗುಜರಾತಿನ ಮಾಜಿ ಸಚಿವ ಪೂರ್ಣೇಶ್ ಮೋದಿ ಅವರು ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್ 499 ಮತ್ತು 500 ಅಡಿ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಈದಿನ ವಿಶೇಷ | ಧರ್ಮಸ್ಥಳ: ಉತ್ತರ ನೀಡಿದ ಗೃಹ ಸಚಿವರು; ಈಗಲೂ ಉಳಿದ ಹಲವು ಪ್ರಶ್ನೆಗಳು

ಸದನದಲ್ಲಿ ನಿಂತು ಷಡ್ಯಂತ್ರ ಎನ್ನುವವರಿಗೆ, ಎಸ್‌ಐಟಿ ರಚನೆಯಾಗಿದ್ದೇಕೆ? ಕಾನೂನು ಏನು ಹೇಳುತ್ತೆ?...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಪಟ್ಟಣ ಪಂಚಾಯತ್ ಚುನಾವಣೆ: ಮೂರರಲ್ಲಿ ಕಾಂಗ್ರೆಸ್‌ಗೆ ಮೇಲುಗೈ; ಎರಡರಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿಗೆ ಜಯ

ಕರ್ನಾಟಕದಲ್ಲಿ ಐದು ಪ್ರದೇಶಗಳು ತಾಲೂಕು ಸ್ಥಾನಕ್ಕೇರಿದ ಬಳಿಕ ರಚನೆಯಾದ ಪಟ್ಟಣ ಪಂಚಾಯಿತಿಗೆ...

Download Eedina App Android / iOS

X