ಉಡುಪಿ | ಜಿಲ್ಲೆಯಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡಲು ನಿಯಮಾನುಸಾರ ಕ್ರಮವಹಿಸಿ : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

Date:

Advertisements

ಉಡುಪಿ ಜಿಲ್ಲೆಯಲ್ಲಿ ದೀಪಾವಳಿ ಹಬ್ಬ ಆಚರಣೆ ಸಂದರ್ಭದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಾಡುವವರು ಸಂಬಂಧಪಟ್ಟ ಇಲಾಖೆಗಳಿಂದ ನಿರಾಕ್ಷೇಪಣಾ ಪತ್ರವನ್ನು ಪಡೆದು, ನಿಯಮಾನುಸಾರ ಮಾರ್ಗಸೂಚಿಗಳನ್ನು
ಪಾಲಿಸುವುದರೊಂದಿಗೆ ಯಾವುದೇ ಅನಾಹುತಗಳು ಸಂಭವಿಸದಂತೆ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ದೀಪಾವಳಿ ಹಬ್ಬದ ಸಮಯದಲ್ಲಿ ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಕುರಿತು ಚರ್ಚಿಸುವ ಸಲುವಾಗಿ ಆಯೋಜಿಸಲಾದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ದೀಪಾವಳಿ ಹಬ್ಬ ಹಿನ್ನೆಲೆ ಜಿಲ್ಲಾ ವ್ಯಾಪ್ತಿಯಲ್ಲಿ ನಿಗಧಿಪಡಿಸಿರುವ ತೆರೆದ ಪ್ರದೇಶಗಳಲ್ಲಿ ಹೊಸದಾಗಿ ಪಟಾಕಿ ಮಾರಾಟ ಮಳಿಗೆಗಳನ್ನು ತೆರೆಯುವವರಿಗೆ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ರ ವರೆಗೆ ಕಾಲಾವಕಾಶ ಕಲ್ಪಿಸಲಾಗಿದೆ. ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಅಗ್ನಿಶಾಮಕ, ಪೊಲೀಸ್ ಇಲಾಖೆ, ತಹಶೀಲ್ದಾರರ ಕಛೇರಿ ಹಾಗೂ ಸ್ಥಳೀಯ ಸಂಸ್ಥೆಗಳಿಂದ ಪಡೆದ ನಿರಾಕ್ಷೇಪಣಾ ಪತ್ರವನ್ನು ಕಡ್ಡಾಯವಾಗಿ ಸಲ್ಲಿಸಬೇಕು ಎಂದರು.

PATAAKI 3

ತಾತ್ಕಾಲಿಕ ಸುಡುಮದ್ದು ಮಾರಾಟ ಮಳಿಗೆಗಳನ್ನು ತೆರೆಯಲು ಅನುಮತಿ ನೀಡುವ ಮೊದಲು ತಹಶೀಲ್ದಾರರ ನೇತೃತ್ವದ ಸಮಿತಿಯು ಖುದ್ದು ಸ್ಥಳ ಪರಿಶೀಲನೆ ನಡೆಸುವುದರೊಂದಿಗೆ, ಅಂಗಡಿ ಮುಂಗಟ್ಟುಗಳ ಸಮೀಪದಲ್ಲಿ, ಜನನಿಬಿಡ ಪ್ರದೇಶಗಳಲ್ಲಿ, ಸಂಚಾರ ವ್ಯವಸ್ಥೆಗೆ ಅಡಚಣೆಯಾಗುವ ಕಡೆಗಳಲ್ಲಿ, ಪಟಾಕಿ ಮಳಿಗೆಗಳನ್ನು ತೆರೆಯಲು ಅನುಮತಿ ನೀಡಬಾರದು ಎಂದರು. ಜಿಲ್ಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿಯು ದೀಪಾವಳಿ ಹಬ್ಬವನ್ನು ಆಚರಿಸುವ ಸಮಯದಲ್ಲಿ ರಾಜ್ಯ ಸರ್ಕಾರದ ಸೂಚನೆಯಂತೆ ಹಸಿರು ಪಟಾಕಿಗಳನ್ನು ಮಾತ್ರ ಬಳಸಬೇಕು. ಎಲ್ಲಾ ಮಳಿಗೆ ಹಾಗೂ ಗೋದಾಮುಗಳಲ್ಲಿ ಹಸಿರು ಪಟಾಕಿ ಹೊರತುಪಡಿಸಿ, ನಿಷೇಧಿತ ಪಟಾಕಿಗಳನ್ನು ದಾಸ್ತಾನು ಮಾಡುವಂತಿಲ್ಲ ತಾಲೂಕು ಸಮಿತಿಯು ಈ ಬಗ್ಗೆ ಆಗಿಂದಾಗ್ಗೆ ಪರಿಶೀಲನೆ ನಡೆಸುವಂತೆ ಸೂಚನೆ ನೀಡಿದ ಅವರು, ನಿಯಮಬಾಹಿರವಾಗಿ ಪಟಾಕಿ ದಾಸ್ತಾನು ಮಾಡಿರುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪಟಾಕಿ ಮಾರಾಟ ಮಾಡುವ ಸ್ಥಳಗಳಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ನೀಡಬೇಕು. ಈ ಸಮಯದಲ್ಲಿ ಉತ್ಪಾದನೆಯಾಗುವ ಘನತ್ಯಾಜ್ಯದ ವೈಜ್ಞಾನಿಕ ವಿಲೇವಾರಿಗೆ ಸೂಕ್ತ ಕ್ರಮ ಜರುಗಿಸಲು ಸಂಬಂಧಪಟ್ಟ ಸ್ಥಳೀಯ ಸಂಸ್ಥೆಗಳು ಕ್ರಮ ವಹಿಸಬೇಕು ಎಂದರು. ಹಸಿರು ಪಟಾಕಿಗಳ ಪ್ಯಾಕೆಟ್ ಮೇಲೆ ಹಸಿರು ಪಟಾಕಿಯ ಚಿಹ್ನೆ ಹಾಗೂ ಕ್ಯೂ ಆರ್ ಕೋಡ್ ಇದ್ದು, ಸದ್ರಿ ಚಿಹ್ನೆ ಹೊಂದಿರುವ ಬಗ್ಗೆ ಪರಿಸರ ಅಧಿಕಾರಿಗಳು ಖಚಿತಪಡಿಸಿಕೊಳ್ಳಬೇಕು. ಒಂದು ವೇಳೆ ಹಸಿರು ಪಟಾಕಿಯ ಚಿಹ್ನೆ ಇಲ್ಲದೇ ಇದ್ದಲ್ಲಿ ಅವುಗಳನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮವಹಿಸಬೇಕು ಎಂದರು.

ಜಿಲ್ಲೆಯ ಯಾವುದೇ ಶೈಕ್ಷಣಿಕ ಸಂಸ್ಥೆಗಳ ಸುತ್ತಮುತ್ತ, ಆಸ್ಪತ್ರೆಗಳ ಆವರಣ ಸೇರಿದಂತೆ ಇನ್ನಿತರೆ ನಿಷೇಧಿತ ಪ್ರದೇಶಗಳ ವ್ಯಾಪ್ತಿಯಲ್ಲಿ ಪಟಾಕಿಗಳನ್ನು ಬಳಸುವಂತಿಲ್ಲ. ಈ ಬಗ್ಗೆ ಪೊಲೀಸ್ ಹಾಗೂ ಸ್ಥಳೀಯ ಸಂಸ್ಥೆಗಳು ಸಮನ್ವಯತೆ ಹೊಂದಿ ಮೇಲ್ವಿಚಾರಣೆ ನಡೆಸಬೇಕು ಎಂದ ಅವರು, ಯಾವುದೇ ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿಯಾಗದಂತೆ, ಸಾರ್ವಜನಿಕರು ಆರೋಗ್ಯಕ್ಕೆ ಹಾಗೂ ಪರಿಸರ ಮಾಲಿನ್ಯಕ್ಕೆ ಧಕ್ಕೆ ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.
ಸಭೆಯಲ್ಲಿ ಸಹಾಯಕ ಕಮೀಷನರ್ ರಶ್ಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸುಧಾಕರ್ ನಾಯಕ್, ನಗರಸಭೆ ಆಯುಕ್ತ ಮಹಾಂತೇಶ ಹಂಗರಗಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಹಶೀಲ್ದಾರರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X