ವಿಜಯಪುರ | ಸಂಪೂರ್ಣ ಸರ್ಕಾರಿ ವೈದ್ಯಕೀಯ ಕಾಲೇಜಿಗಾಗಿ ಮುಂದುವರೆದ ಹೋರಾಟ; ಸ್ಥಳಕ್ಕೆ ಸಂಸದ ರಮೇಶ್‌ ಜಿಗಜಿಣಗಿ ಭೇಟಿ

Date:

Advertisements

ವಿಜಯಪುರ ನಗರದ ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಯುತ್ತಿರುವ, ಖಾಸಗಿ ಸಹಭಾಗಿತ್ವವನ್ನು ಕೈಬಿಟ್ಟು ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಬೇಕೆಂದು ಆಗ್ರಹಿಸಿ ನಡೆಯುತ್ತಿರುವ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ಮುಂದುವರೆದಿದ್ದು, ಸ್ಥಳಕ್ಕೆ ಸಂಸದ ರಮೇಶ ಜಿಗಜಿಣಗಿ ಭೇಟಿ ನೀಡಿ ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿದರು.

“ಜಿಲ್ಲೆಯ ಜನತೆ ಎಲ್ಲಾ ಒಂದಾಗಿ ಖಾಸಗಿ ಸಹಭಾಗಿತ್ವ (ಪಿಪಿಪಿ) ಯೋಜನೆಯನ್ನು ವಿರೋಧಿಸಿ ಹೋರಾಟ ಕೈಗೊಂಡಿದ್ದೀರಿ. ಅದು ಬೇಡವೆಂಬುದು ಎಲ್ಲರ ಮನಸ್ಸಿನಲ್ಲಿದೆ ಎಂದರು. ಅಲ್ಲದೇ ಈ ಕುರಿತು ನಾನು ಈಗಾಗಲೇ ಪ್ರಧಾನ ಮಂತ್ರಿಗಳ ಗಮನಕ್ಕೆ ತರುವ ಕೆಲಸ ಮಾಡಿದ್ದು. ಹಾಗೆಯೇ ಕೇಂದ್ರ ಆರೊಗ್ಯ ಸಚಿವರಿಗೂ ಯಾವುದೇ ಕಾರಣಕ್ಕೂ ಕಾರಣಕ್ಕೂ ನಮ್ಮ ಜನತೆ ಪಿಪಿಪಿ ಯನ್ನು ಒಪ್ಪುವದಿಲ್ಲ ಯಾವ ಕಾರಣಕ್ಕೂ ವಿಜಯಪುರ ದಲ್ಲಿ ಪಿಪಿಪಿ ಯೋಜನೆಯಲ್ಲಿ ವೈದ್ಯಕೀಯ ಕಾಲೇಜು ಸ್ಥಾಪಿಸಬಾರದು ಎಂದು ಮನವಿ ಮಾಡಲಾಗಿದೆ” ಎಂದರು.

“ಸರಕಾರಿ ವೈದ್ಯಕೀಯ ಕಾಲೇಜು ಬಡವರಿಗೆ ಸಾಮಾನ್ಯ ಜನರಿಗೆ ಎಲ್ಲರಿಗೂ ಇದು ಉಪಯೋಗವಾಗುವಂತಹದ್ದಾಗಿದೆ. ಜಿಲ್ಲೆಯಲ್ಲಿ ಸಂಪೂರ್ಣವಾಗಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸಲು ಪಕ್ಷದ ನಾಯಕದೊಂದಿಗೆ ಚರ್ಚಿಸಿ ಪ್ರಾಮಾಣಿಕವಾಗಿ ಪ್ರಯತ್ನ ಮಾಡುತ್ತೇನೆ. ಅಲ್ಲದೆ ಜಿಲ್ಲೆಗೆ ಏಮ್ಸ್ ತರುವುದೇ ನನ್ನ ಉದ್ದೇಶವಾಗಿದೆ. ಅದಕ್ಕೆ ಸದಾ ಸಿದ್ಧನಿದ್ದೇನೆ” ಎಂದು ಭರವಸೆ ನೀಡಿದರು.

ಮಾಜಿ ವಿದಾನಪರಿಷತ್ ಮಾಜಿ ಸದಸ್ಯ ಅರುಣ ಶಹಾಪುರ, ಚಂದ್ರಶೇಖರ ಕವಟಗಿ, ಗುರಲಿಂಗಪ್ಪ ಅಂಗಡಿ, ಸುರೇಶ ಬಿರಾದಾರ, ಉಮೇಶ ಕಾರಜೋಳ, ಭೋಗೇಶ ಸೋಲಾಪುರ, ಉಮೇಶ ಕೋಳೂಕರ, ನವಸ್ಫೂರ್ತಿ ಸಂಘದ ಅಧ್ಯಕ್ಷ ಶಬ್ಬಿರ ಕಾಗಜಕೋಟ, ಮಲ್ಲಿಕಾರ್ಜುನ ಮಲ್ಲಿಕಾರ್ಜುನ ಹಿರೇಮಠ, ಕಾಶಿಬಾಯಿ ಜನಗೊಂಡ, ಪ್ರವೀಣ ಚಿಕ್ಕಲಕಿ, ಗಿರೀಶ ಕಲಘಟಗಿ, ಲಕ್ಷಣ ಕಂಬಾಗಿ, ಉಮೇಶ ವಾಲಿಕಾರ, ಲಂಕೇಶ ತಳವಾರ ಮುಂತಾದವರು ಮಾತನಾಡಿದರು.

ಇದನ್ನೂ ಓದಿ: ವಿಜಯಪುರ | ಕೇಂದ್ರ ಸರ್ಕಾರ ಸರ್ಕಾರಿ ಆಸ್ಪತ್ರೆಗಳನ್ನು ಖಾಸಗೀಕರಣಗೊಳಿಸುವ ಹುನ್ನಾರ ನಡೆಸಿದೆ: ಅಮೂಲ್ಯ ನಿಧಿ

ಪ್ರತಿಭಟನಾ ಧರಣಿಯಲ್ಲಿ ಅನಿಲ ಹೊಸಮನಿ, ಅರವಿಂದ ಕುಲಕರ್ಣಿ, ಫಯಾಜ್ ಕಲಾದಗಿ, ಶ್ರೀನಾಥ ಪೂಜಾರಿ, ಸಿದ್ದರಾಮ ಹಳ್ಳೂರ ಪ್ರಭುಗೌಡ ಪಾಟೀಲ, ಮಲ್ಲಿಕಾರ್ಜುನ ಕೆಂಗಿನಾಳ, ಮಲ್ಲಿಕಾರ್ಜುನ ಬಟಗಿ, ದಸ್ತಗೀರ್ ಉಕ್ಕಲಿ, ಸಿದ್ದನಗೌಡ ಪಾಟೀಲ, ಶಿವಬಾಳನ್ನ ಕೊಂಡ ಗೂಳಿ, ಮಹಾದೇವಿ ಧರ್ಮಶೆಟ್ಟಿ, ಶರಣಬಸಪ್ಪ ಗಂಗಶೆಟ್ಟಿ, ನವಸ್ಫೂರ್ತಿ ಸಂಘದ ಪದಾಧಿಕಾರಿಗಳಾದ ಗುಲಾಬ್, ರೇಣುಕಾ ಶಾಂತಗೌಡ ಯಮನವ್ವ ಸೇರಿದಂತೆ ನೂರಾರು ಜನರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X