ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಹಾರೂಗೇರಿ ಕ್ರಾಸ್ ಸಮೀಪ ರಸ್ತೆ ಅಪಘಾತ ಸಂಭವಿಸಿದೆ.
ಮಹಾರಾಷ್ಟ್ರದ ಪಂಡರಾಪುರಕ್ಕೆ ಪಾದಯಾತ್ರೆ ಮಾಡುತ್ತಿದ್ದ ಯಾತ್ರಿಕರ ಗುಂಪಿಗೆ ವೇಗವಾಗಿ ಬಂದ ಸ್ವಿಫ್ಟ್ ಕಾರು (ನಂಬರ: KA 59 M 0730) ಡಿಕ್ಕಿ ಹೊಡೆದ ಪರಿಣಾಮ 7 ಮಂದಿ ಪಾದಯಾತ್ರಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಗಾಯಾಳುಗಳನ್ನು ತಕ್ಷಣವೇ ಹಾರೂಗೇರಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನಾ ಸ್ಥಳಕ್ಕೆ ಹಾರೂಗೇರಿ ಪೊಲೀಸ್ ಠಾಣೆಯ ಪಿಎಸ್‌ಐ ಮಾಳಪ್ಪ ಪೂಜೇರಿ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣದ ತನಿಖೆ ಮುಂದುವರಿಸುತ್ತಿದ್ದಾರೆ.