415ನೇ ಶ್ರೀರಂಗಪಟ್ಟಣ ದಸರಾಗೆ ಚಾಲನೆ ನೀಡಿದ ಹಿರಿಯ ಕಲಾವಿದ ಟಿ ಎಸ್ ನಾಗಾಭರಣ

Date:

Advertisements

ಖ್ಯಾತ ಚಲನಚಿತ್ರ ನಟ, ನಿರ್ದೇಶಕ, ನಿರ್ಮಾಪಕ ಟಿ ಎಸ್ ನಾಗಾಭರಣ ಅವರು 415ನೇ ಶ್ರೀರಂಗಪಟ್ಟಣ ದಸರಾ ಉತ್ಸವವನ್ನು ಉದ್ಘಾಟಿಸಿ, ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮಂಡ್ಯ ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ಆಯೋಜಿಸಲಾಗಿರುವ ದಸಾರ ಕಾರ್ಯಕ್ರಮಕ್ಕೆ ಅಧಿಕೃತ ಚಾಲನೆ ಸಿಕ್ಕಿದೆ.

415ನೇ ಶ್ರೀರಂಗಪಟ್ಟಣ ದಸರಾ ಅಂಗವಾಗಿ ಆಯೋಜಿಸಲಾಗಿದ್ದ ಪೂಜಾಕುಣಿತ, ತಮಟೆ, ನಗಾರಿ, ಪಟ್ಟಕುಣಿತ, ಹುಲಿವೇಷ,ವೀರಗಾಸೆ, ವೀರ ಭದ್ರಕುಣಿತ, ಕಾಳಿ ಕುಣಿತ, ಕಂಸಾಳೆ,ವೀರ ಮಕ್ಕಳ ಕುಣಿತ, ಓನಕೆ ಕುಣಿತ, ಕೋಲಾಟ, ಕರಗಿದ ಕೋಲಾಟ, ಗೊಂಬೆ ಕುಣಿತ, ಡೊಳ್ಳು ಕುಣಿತ, ಬೆಂಕಿ ಭರಾಟೆ, ದೊಣ್ಣೆ ವರಸೆ, ಸೋಮನ ಕುಣಿತ, ಬೇಡರ ವೇಷ, ಹಾಲಕ್ಕಿ ಸುಗ್ಗಿ ಕುಣಿತ, ಗಾರುಡಿಗೊಂಬೆ, ಚಿಲಿಪಿಲಿಗೋಬೆ, ನಾಸಿಕ್ ಡೊಲಾಟಗಳು ನೋಡುಗರ ಗಮನ ಸೆಳೆದವು.

ತೋಟಗಾರಿಕೆ ಇಲಾಖೆಯ ಸ್ತಬ್ಧ ಚಿತ್ರಗಳು, ಕೃಷಿ ಇಲಾಖೆಯ ಸ್ತಬ್ಧಚಿತ್ರ, ಭಾರತೀಯ ಬೌದ್ಧ ಮಹಾಸಭಾ, ಕೃಷಿ ಇಲಾಖೆಯ ಸ್ತಬ್ಧಚಿತ್ರ, ಶಿಕ್ಷಣ ಇಲಾಖೆಯ ಸ್ತಬ್ಧ ಚಿತ್ರ, ರೇಷ್ಮೆ ಇಲಾಖೆಯ ಸ್ತಬ್ಧ ಚಿತ್ರ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಪಂಚ ಗ್ಯಾರಂಟಿ ಯೋಜನೆಗಳ ಸ್ತಬ್ಧ ಚಿತ್ರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಮಕ್ಕಳ ಮಾರಾಟ ನಿಷೇಧ ಮತ್ತು ಅಪರಾಧ, ಅರಣ್ಯ ಇಲಾಖೆಯ ಸ್ತಬ್ಧ ಚಿತ್ರಗಳು ನೆರೆದಿದ್ದ ಸಾರ್ವಜನಿಕರ ಚಿತ್ತವನ್ನು ತನ್ನತ್ತ ಸೆಳೆದವು.

ಇದನ್ನೂ ಓದಿ: ಮಂಡ್ಯ | ಮುಯ್ಯಾಳು ಸಂಸ್ಕೃತಿಯನ್ನು ಮತ್ತೆ ಮುನ್ನೆಲೆಗೆ ತಂದ ಕನ್ನಡದ ಮನಸ್ಸುಗಳು

ನಾಡದೇವತೆ ಚಾಮುಂಡೇಶ್ವರಿ ಹೊತ್ತ ಅಂಬಾರಿಗೆ ಪೊಲೀಸ್ ಬ್ಯಾಂಡ್ ವತಿಯಿಂದ ವಿಶೇಷ ಗೌರವ ಸಲ್ಲಿಸಲಾಯಿತು.

ಶ್ರೀರಂಗಪಟ್ಟಣ ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೃಷಿ ಸಚಿವ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚೆಲುವರಾಯಸ್ವಾಮಿ, ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತ ಅಧ್ಯಕ್ಷ ರಮೇಶ್ ಬಂಡಿಸಿದ್ದೇಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿ ಕುಮಾರ್, ಮಾಜಿ ಶಾಸಕಿ ವಿಜಯಲಕ್ಷ್ಮಿ ಬಂಡಿ ಸಿದ್ದೇಗೌಡ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಅಪರ ಜಿಲ್ಲಾಧಿಕಾರಿ ಬಿ ಸಿ ಶಿವಾನಂದ ಮೂರ್ತಿ, ಉಪವಿಭಾಗಾಧಿಕಾರಿಗಳಾದ ಶಿವಮೂರ್ತಿ, ಶ್ರೀನಿವಾಸ್, ಶ್ರೀರಂಗಪಟ್ಟಣ ತಹಶೀಲ್ದಾರ್ ಚೇತನ ಯಾದವ್ ಹಾಗೂ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X