BREAKING NEWS | ಲಡಾಖ್ ಹಿಂಸಾಚಾರ: ಹೋರಾಟಗಾರ ಸೋನಮ್ ವಾಂಗ್‌ಚುಕ್ ಬಂಧನ

Date:

Advertisements

ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ಸೇರಿದಂತೆ ಪ್ರಮುಖ ನಾಲ್ಕು ಬೇಡಿಕೆಗಳನ್ನು ಮುಂದಿಟ್ಟು ನಡೆದ ಪ್ರತಿಭಟನೆ ವೇಳೆ ಲೇಹ್‌ನಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಪರಿಸರವಾದಿ, ಲಡಾಖ್ ಹೋರಾಟ ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಲಾಗಿದೆ. ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಬಂಧನ ಮಾಡಲಾಗಿದೆ.

ಲಡಾಖ್‌ನ ಭೂಮಿ, ಸಂಸ್ಕೃತಿ ಮತ್ತು ಸಂಪನ್ಮೂಲಗಳ ರಕ್ಷಣೆಗಾಗಿ ಲಡಾಖ್‌ ಅನ್ನು ಆರನೇ ಪರಿಚ್ಛೇದಕ್ಕೆ ಸೇರ್ಪಡೆ ಮಾಡಬೇಕು, ಲಡಾಖ್‌ಗೆ ರಾಜ್ಯತ್ವ ಸ್ಥಾನಮಾನ ನೀಡಬೇಕು, ಸಾರ್ವಜನಿಕ ಸೇವಾ ಆಯೋಗ(ಪಿಎಸ್‌ಎ) ರಚಿಸಬೇಕು, ಲೇಹ್ ಮತ್ತು ಕಾರ್ಗಿಲ್‌ಗೆ ತಲಾ ಒಂದು ಲೋಕಸಭೆ ಸ್ಥಾನ ನೀಡಬೇಕು ಎಂಬ ಬೇಡಿಕೆಗಳನ್ನು ಮುಂದಿಟ್ಟುಕೊಂಡು 2019ರ ನಂತರದಿಂದ ಲಡಾಖ್‌ನಲ್ಲಿ ದೀರ್ಘ ಹೋರಾಟ ನಡೆಯುತ್ತಿದೆ.

ಇದನ್ನು ಓದಿದ್ದೀರಾ? ಸೋನಮ್ ವಾಂಗ್‌ಚುಕ್ ಬಂಧನದ ವಿರುದ್ದ ಪಿಐಎಲ್

ಸೋನಮ್ ವಾಂಗ್‌ಚುಕ್ ಅವರು ಸೆಪ್ಟೆಂಬರ್ 10ರಿಂದ ಉಪವಾಸ ಸತ್ಯಾಗ್ರಹವನ್ನೂ ಆರಂಭಿಸಿದ್ದರು. ಈ ಪ್ರತಿಭಟನಾ ಸ್ಥಳದ ಹೊರಭಾಗದಲ್ಲಿ ಬುಧವಾರ(ಸೆ.24) ಹಿಂಸಾಚಾರ ನಡೆದಿದ್ದು, ಕನಿಷ್ಠ ಐವರು ಸಾವನ್ನಪ್ಪಿದ್ದಾರೆ. 70ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಬಿಜೆಪಿ ಕಚೇರಿಯನ್ನೂ ಧ್ವಂಸ ಮಾಡಲಾಗಿದೆ. ಈ ಹಿಂಸೆಗೆ ಪ್ರಚೋದನೆ ನೀಡಿದ ಆರೋಪವನ್ನು ಶಾಂತವಾಗಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ಅವರ ಮೇಲೆ ಕೇಂದ್ರ ಸರ್ಕಾರ ಹೊರಿಸಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Bihar SIR | ಬಿಜೆಪಿ-ಚುನಾವಣಾ ಆಯೋಗದ ಕುತಂತ್ರಕ್ಕೆ 47 ಲಕ್ಷ ಮತದಾರರು ಬಲಿ

ಚುನಾವಣೆಯ ಹೊಸ್ತಿಲಿನಲ್ಲಿರುವ ಬಿಹಾರದಲ್ಲಿ ಚುನಾವಣಾ ಆಯೋಗವು ಮತದಾರರ ಪಟ್ಟಿಯ ವಿಶೇಷ ತೀವ್ರ...

Download Eedina App Android / iOS

X