ತುಮಕೂರು | ಬಿಎಂಟಿಸಿ ಅಧ್ಯಕ್ಷರಾಗಿ ನಿಕೇತ್ ರಾಜ್ ಮೌರ್ಯ ನೇಮಕ

Date:

Advertisements

ಕರ್ನಾಟಕ ಸರ್ಕಾರದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯ ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಕಾಂಗ್ರೆಸ್ ಸರ್ಕಾರದಲ್ಲಿ ಈಗ ನಿಗಮ ಮಂಡಳಿಗಳು ಹಾಗೂ ಪ್ರಾಧಿಕಾರಗಳ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ನೇಮಕ ಪ್ರಕ್ರಿಯೆ ನಡೆಯುತ್ತಿದ್ದು, ಅದರಲ್ಲಿ ಕೆಪಿಸಿಸಿ ಮುಖ್ಯ ವಕ್ತಾರರಾದ ನಿಕೇತ್ ರಾಜ್ ಮೌರ್ಯ ಅವರಿಗೆ ಬಿಎಂಟಿಸಿ ಅಧ್ಯಕ್ಷ ಪಟ್ಟ ಒಲಿದು ಬಂದಿದೆ. 

ನಿಕೇತ್ ರಾಜ್ ಮೌರ್ಯ ಅವರು ಮೂಲತಃ ತುಮಕೂರು ಜಿಲ್ಲೆಯ ಮಧುಗಿರಿ ತಾಲ್ಲೂಕಿನ ಮಿಡಿಗೇಶಿಯವರಾಗಿದ್ದು, ಕಾಂಗ್ರಸ್‌ನ ಗುಡ್ ಸ್ಪೋಕ್ ಪರ್ಸನ್ ಎಂಬ ಖ್ಯಾತಿ ಪಡೆದವರು. 2024ರಲ್ಲಿ ತುಮಕೂರು ಲೋಕಸಭಾ ಕ್ಷೇತ್ರದ ಪ್ರಬಲ ಆಕಾಂಕ್ಷಿಯಾಗಿದ್ದರು‌. ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರ ಪ್ರೀತಿ ಪಾತ್ರರಾಗಿ ಗುರುತಿಸಿಕೊಂಡಿದ್ದ ಅವರು, ಕೆ.ಎನ್.ರಾಜಣ್ಣನವರ ಆಪ್ತವಲಯದಲ್ಲಿದ್ದರು. 

2023ರ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಜಿಲ್ಲೆಯ 11 ವಿಧಾನಸಭಾ ಮತಕ್ಷೇತ್ರಗಳಲ್ಲಿ ಕಾಂಗ್ರೆಸ್ 7 ಸ್ಥಾನ ಪಡೆಯುವಲ್ಲಿ ನಿಕೇತ್ ರಾಜ್ ಅವರು ಮಹತ್ತರ ಪಾತ್ರವಹಿಸಿದ್ದರು. 

ರಾಜ್ಯ ಮಟ್ಟದಲ್ಲಿ ಕಾಂಗ್ರಸ್ ಪಕ್ಷವನ್ನು ಮತ್ತು ಸಾಧನೆಗಳನ್ನು ಸಮರ್ಥಿಸಿಕೊಳ್ಳುವಲ್ಲಿ ಮುಂಚೂಣಿ ವಕ್ತಾರರಾಗಿದ್ದರು. ಕಾಂಗ್ರೆಸ್‌ನ ಸಮಾಜವಾದಿ ಮತ್ತು ಪ್ರಗತಿಪರ, ಅಭಿವೃದ್ಧಿ ಕಾರ್ಯಗಳು, ಸೌಹಾರ್ದತೆಗೆ ಕಾಂಗ್ರಸ್ ನೀಡಿದ ಕೊಡುಗೆ ಬಗ್ಗೆ ತಮ್ಮದೇ ಶೈಲಿಯಲ್ಲಿ ಪ್ರಸ್ತುತ ಪಡಿಸುತ್ತಿದ್ದ ರೀತಿ ಕೋಮುವಾದಿಗಳನ್ನು ಹಾಗೂ ಬಿಜೆಪಿ ಪಕ್ಷವನ್ನು ನಿದ್ದೆಗೆಡಿಸಿತ್ತು.

ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಗಳಲ್ಲಿ‌ ರಾಜ್ಯಾದ್ಯಂತ ಸಂಚರಿಸಿ ಪಕ್ಷ ಸಂಘಟನೆಗೆ ನಿರಂತರವಾಗಿ ಶ್ರಮಿಸಿದ್ದರು. ನಿಕೇತ್ ರಾಜ್ ಅವರ ಈ ಶ್ರಮಕ್ಕೆ ಕಾಂಗ್ರೆಸ್ ನಿಂದ ಬುಹುಮಾನ ದೊರೆತಂತಾಗಿದೆ. ತುಮಕೂರು ಜಿಲ್ಲೆಯ ಯುವಜನರ ಮನಸ್ಸಿನಲ್ಲಿ ಸಂತಸದ ಸಂಚಲನ ಮೂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X