ಕಲಬುರಗಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 27 ಹಾಗೂ 28ರಂದು ಎರಡು ದಿನಗಳ ಕಾಲ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿಗಳ ಸೂಚನೆಯಂತೆ ಡಿಡಿಪಿಐ ಸೂರ್ಯಕಾಂತ ಮದಾನೆ ಆದೇಶ ಹೊರಡಿಸಿದ್ದಾರೆ.
ಮುಂದಿನ 48 ಗಂಟೆಗಳ ಕಾಲ ಭಾರಿ ಮಳೆಯ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಜಿಲ್ಲಾದ್ಯಂತ ಆರೆಂಜ್ ಅಲರ್ಟ್ ನೀಡಿದೆ. ದಸರಾ ರಜೆಯಿಂದ ವಿನಾಯಿತಿ ಪಡೆದುಕೊಂಡು ಪಾಠ ನಡೆಸುತ್ತಿದ್ದ ಶಾಲೆಗಳಿಗೂ ಮುಂಜಾಗ್ರತಾ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸದರಿ ಅವಧಿಯ ಪಾಠ ಬೋಧನೆಯನ್ನು ಮುಂದಿನ ರಜಾದಿನಗಳಲ್ಲಿ ಸರಿದೂಗಿಸುವಂತೆ ಶಿಕ್ಷಣ ಇಲಾಖೆಯು ಶಾಲಾ ಮುಖ್ಯಸ್ಥರಿಗೆ ನಿರ್ದೇಶನ ನೀಡಿದೆ.
ಇದನ್ನೂ ಓದಿ : ಈದಿನ.ಕಾಮ್ ಗ್ರೌಂಡ್ ರಿಪೋರ್ಟ್ |ತೆವಳುತ್ತಿರುವ ಜಾತಿವಾರು ಸಮೀಕ್ಷೆ- ಸಮಸ್ಯೆಗಳ ಸುರಿಮಳೆ, ಶೇ.2ರಷ್ಟು ಗುರಿ ಮುಟ್ಟಲೂ ವಿಫಲ!