ಶಿವಮೊಗ್ಗ, “ಕನ್ನಡ ಸಂಸ್ಕೃತಿ ಮತ್ತು ಅಂಬೇಡ್ಕರ್ ಚಿಂತನೆಗಳು, : ಅನುಸಂಧಾನ” ಎಂಬ ಎರಡು ದಿನಗಳ ರಾಜ್ಯ ಮಟ್ಟದ ಕಾರ್ಯಾಗಾರವನ್ನು ಕುವೆಂಪು ವಿಶ್ವವಿದ್ಯಾಲಯದ ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರವು ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್. ಅಂಬೇಡ್ಕರ್ ಸಂಶೋಧನೆ, ತರಬೇತಿ ಹಾಗೂ ವಿಸ್ತರಣಾ ಕೇಂದ್ರ, ಬೆಂಗಳೂರು ಹಾಗೂ ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಸಹಾಯೋಗದಲ್ಲಿ 2025ರ ಸೆಪ್ಟಂಬರ್ 29 ಮತ್ತು 30 ರಂದು ಏರ್ಪಡಿಸಲಾಗಿದೆ.
ಈ ಕಾರ್ಯಾಗಾರವನ್ನು ಉಚ್ಛನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರು ಉದ್ಘಾಟಿಸುವರು.
ಮುಖ್ಯ ಅತಿಥಿಗಳಾಗಿ ಡಾ. ಸಾಬೀರ ಅಹ್ಮದ್ ಮುಲ್ಲಾ ಅವರು ಭಾಗವಹಿಸುವರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಪತಿ ಪ್ರೊ. ಶರತ್ ಅನಂತಮೂರ್ತಿ ವಹಿಸುವರು.
ಕುಲಸಚಿವರಾದ ಶ್ರೀ ಎ.ಎಲ್. ಮಂಜುನಾಥ್, ಪರೀಕ್ಷಾಂಗ ಕುಲಸಚಿವರಾದ ಪ್ರೊ. ತಿಮ್ಮರಾಯಪ್ಪ, ಹಣಕಾಸು ಅಧಿಕಾರಿ ಪ್ರೊ. ಹೆಚ್.ಎನ್. ರಮೇಶ್, ದಸಂಸ ರಾಜ್ಯ ಸಂಚಾಲಕ ಎಂ.ಗುರುಮೂರ್ತಿ ಅವರು ಭಾಗವಹಿಸುವರು.

ಪದವಿ ಕಾಲೇಜು ಕನ್ನಡ ಅಧ್ಯಾಪಕರ ವೇದಿಕೆಯ ಅಧ್ಯಕ್ಷರಾದ ಪ್ರೊ. ಸಬಿತಾ ಬನ್ನಾಡಿ, ಉಪಾಧ್ಯಕ್ಷರಾದ ಪ್ರೊ. ಕುಂಸಿ ಉಮೇಶ್, ಕಾರ್ಯದರ್ಶಿ ಪ್ರೊ. ಮುತ್ತಯ್ಯ ಭಾಗವಹಿಸುವರು. ಚಿಂತಕ ಡಾ. ಸಿ.ಜಿ. ಲಕ್ಷ್ಮೀಪತಿ ಅವರು ಎರಡು ದಿನಗಳ ಕಾರ್ಯಾಗಾರದ ನಿರ್ದೇಶಕರಾಗಿ ಕಾರ್ಯನಿರ್ವಹಿಸಲಿದ್ದಾರೆ.
ಸಂಪನ್ಮೂಲ ವ್ಯಕ್ತಿಗಳಾಗಿ ಡಾ. ಆರ್.ವಿ. ಚಂದ್ರಶೇಖರ್, ಡಾ. ಆಕೈ ಪದ್ಮಶಾಲಿ, ಹರ್ಷಕುಮಾರ್ ಕುಗ್ವೆ, ಡಾ. ಅನಸೂಯ ಕಾಂಬಳೆ, ಡಾ. ಪಿಚ್ಚಳ್ಳಿ ಶ್ರೀನಿವಾಸ್, ಡಾ. ರಾಜಪ್ಪ ದಳವಾಯಿ, ಡಾ. ಬಾಲಗುರುಮೂರ್ತಿ ಭಾಗವಹಿಸುವರು.
ದಿನಾಂಕ : 30.09.2025ರ ಮಧ್ಯಾಹ್ನ 2 ಘಂಟೆಯಿಂದ ನಡೆಯುವ ಸಮಾರೋಪ ಕಾರ್ಯಕ್ರಮದಲ್ಲಿ ಖ್ಯಾತ ಸಾಹಿತಿ ಮತ್ತು ಸಂಸ್ಕೃತಿ ಚಿಂತಕರಾದ ಕೋಟಿಗಾನಹಳ್ಳಿ ರಾಮಯ್ಯ ಅವರು ಸಮಾರೋಪ ನುಡಿಗಳನ್ನು ಆಡಲಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ 150ಕ್ಕೂ ಹೆಚ್ಚು ಶಿಬಿರಾರ್ಥಿಗಳು ಭಾಗವಹಿಸುವರೆಂದು ಡಾ. ಬಿ.ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರದ ನಿರ್ದೇಶಕರಾದ ಪ್ರೊ. ನೆಲ್ಲಿಕಟ್ಟೆ ಎಸ್. ಸಿದ್ದೇಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ