ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ʼಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್ʼ ಕಾರ್ಯಾಗಾರ

Date:

Advertisements

ವಿಜಯಪುರ ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಪರೀಕ್ಷಾ ವಿಭಾಗದ ಜಂಟಿ ಸಹಯೋಗದಲ್ಲಿ ‘ಅಕಾಡೆಮಿಕ್ ಬ್ಯಾಂಕ್ ಆಫ್ ಕ್ರೆಡಿಟ್ಸ್’ ಎಂಬ ವಿಷಯದ ಕುರಿತು ಒಂದು ದಿನದ ಕಾರ್ಯಗಾರ ಆಯೋಜಿಸಲಾಗಿತ್ತು.

ಈ ಕಾರ್ಯಾಗಾರದಲ್ಲಿ ವಿವಿಯ ಕುಲಪತಿ ಪ್ರೊ. ವಿಜಯಾ ಕೋರಿಶೆಟ್ಟಿ ಮಾತನಾಡಿ, “ವಿದ್ಯಾರ್ಥಿಗಳು ಪದವಿ ಪಡೆಯುವಲ್ಲಿ ಜ್ಞಾನದ ಜತೆಗೆ ವಿವಿಧ ವಿಶ್ವವಿದ್ಯಾಲಯಗಳು ನೀಡುವ ಪಠ್ಯಕ್ರಮಗಳ ಕ್ರೆಡಿಟ್‌ಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸುವ ಸಾಧ್ಯತೆ ದೊರೆಯುತ್ತದೆ. ಈ ಕಾರ್ಯಾಗಾರವನ್ನು ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ತು, ಕರ್ನಾಟಕ ಸರ್ಕಾರ, ಬೆಂಗಳೂರು ಹಾಗೂ ಪಿಓ ಯುಎನ್‌ಒ, ಉನ್ನತ ಶಿಕ್ಷಣ ಸಚಿವಾಲಯ, ಭಾರತ ಸರ್ಕಾರ ಇವರ ಆರ್ಥಿಕ ನೆರವಿನಿಂದ ಆಯೋಜಿಸಲಾಗಿದೆ. ಇದರ ಪ್ರಯೋಜನವನ್ನು ವಿದ್ಯಾರ್ಥಿನಿಯರು ಪಡೆಯಬೇಕು” ಎಂದರು.

ವಿವಿ ಕುಲಸಚಿವ ಶಂಕರಗೌಡ ಸೋಮನಾಳ ಕಾರ್ಯಗಾರದ ಲಾಭಗಳನ್ನು ವಿದ್ಯಾರ್ಥಿನಿಯರು ಪಡೆದುಕೊಳ್ಳವಂತೆ ಕರೆನೀಡಿ, ರಸಪ್ರಶ್ನೆ ಕಾರ್ಯಕ್ರಮವನ್ನು ನಡೆಸಿಕೊಟ್ಟರು.

ಇದನ್ನೂ ಓದಿ: ವಿಜಯಪುರ | ಭೀಮಾ ನದಿಯ ರೌದ್ರ ರೂಪ; ತಗ್ಗು ಪ್ರದೇಶಗಳಿಗೆ ನುಗ್ಗಿದ ನೀರು

ಕಾರ್ಯಾಗಾರದಲ್ಲಿ ಹಿರಿಯ ನೋಡಲ್ ಅಧಿಕಾರಿ ಪ್ರೊ. ಜಿ ಬಿ ಸೋನಾರ, ಗಣಕ ವಿಜ್ಞಾನ ವಿಭಾಗದ ಹಿರಿಯ ಪ್ರಾಧ್ಯಾಪಕ ಪ್ರೊ. ಜೆ ಜಿ ರಜಪೂತ, ತುಮಕೂರು ವಿಶ್ವವಿದ್ಯಾಲಯದ ಗ್ರಾಂಥಾಲಯ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ರೂಪೇಶ ಕುಮಾರ ಹಾಗೂ ಬಿಎಲ್‌ಡಿಐ ಸಂಸ್ಥೆಯ ಎಸ್‌ಬಿ ಕಲಾ ಹಾಗೂ ಕೆಸಿಪಿ ವಿಜ್ಞಾನ ಕಲೇಜಿನ ಸಹಾಯಕ ಪ್ರಾಧ್ಯಾಪಕ ಡಾ. ಅನೀಲ ಕುಮಾರ ಪಾಟೀಲ, ಇಐಕ್ಯೂಎಸಿ ನಿರ್ದೇಶಕ ಪ್ರೊ. ಪಿ ಜಿ ತಡಸದ, ಉಪ ನಿರ್ದೇಶಕಿ ಡಾ. ಶ್ವೇತಾ ಬೆಂಗಾರೆ ಹಾಗೂ 400ಕ್ಕೂ ಹೆಚ್ಚು ಸ್ನಾತಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X