5 ವರ್ಷದ ಬಾಲಕನ ಶಿರಚ್ಛೇದ; ಹಂತಕನನ್ನು ಹೊಡೆದು ಕೊಂದ ಸ್ಥಳೀಯರು

Date:

Advertisements

ದುರುಳ ವ್ಯಕ್ತಿಯೊಬ್ಬ ಐದು ವರ್ಷದ ಬಾಲಕನನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಧ್ಯಪ್ರದೇಶದ ಧಾರ್ ಜಿಲ್ಲೆಯಲ್ಲಿ ನಡೆದಿದೆ. ಬಾಲಕನನ್ನು ಹೊಂದ ಹಂತಕನನ್ನು ಸ್ಥಳೀಯರು ಹೊಡೆದು ಕೊಂದಿದ್ದಾರೆ ಎಂದು ವರದಿಯಾಗಿದೆ.

ಹತ್ಯೆಗೈದು ಹತನಾದ ಆರೋಪಿಯನ್ನು ಮಹೇಶ್‌ ಎಂದು ಗುರುತಿಸಲಾಗಿದೆ. ಆತ ಮಾನಸಿಕ ಅಸ್ವಸ್ಥನಾಗಿದ್ದ ಎಂದು ಹೇಳಲಾಗಿದೆ. ಆತ ಬಾಲಕ ವಿಕಾಸ್‌ನನ್ನು ಆತನ ತಾಯಿಯ ಎದುರೇ ಶಿರಚ್ಛೇದ ಮಾಡಿ, ಕೊಂದಿರುವಾಗಿ ವರದಿಯಾಗಿದೆ.

ಬೈಕ್‌ನಲ್ಲಿ ಬಂದ ಆರೋಪ ಮಹೇಶ್‌ ಏಕಾಏಕಿ ಕಾಲೂ ಸಿಂಗ್‌ ಎಂಬವರ ಮನೆಗೆ ನುಗ್ಗಿದ್ದಾನೆ. ಮನೆಯಲ್ಲಿದ್ದ ಮಾರಕಾಸ್ತ್ರವನ್ನು ತೆಗೆದುಕೊಂಡು ಬಾಲಕನ ಮೇಲೆ ಭೀಕರ ದಾಳಿ ನಡೆಸಿದ್ದಾನೆ. ಆತನ ಹೊಡೆತದ ರಭಸಕ್ಕೆ ಬಾಲಕನ ರುಂಡ ಮತ್ತು ಮುಂಡ ಬೇರ್ಪಟ್ಟಿವೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಬಾಲಕನನ್ನು ರಕ್ಷಿಸಲು ಯತ್ನಿಸಿದ ಆತನ ತಾಯಿಗೂ ಗಾಯಗಳಾಗಿವೆ. ಸ್ಥಳೀಯರು ಮನೆಗೆ ಧಾವಿಸಿ, ಆರೋಪಿ ಮಹೇಶ್‌ನನ್ನು ಹಿಡಿದು ಥಳಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಧಾವಿಸಿ, ಮಹೇಶ್‌ನನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಆತ ದಾರಿಮಧ್ಯೆಯೇ ಮೃತಪಟ್ಟಿದ್ದಾನೆ ಎಂದು ತಿಳಿದುಬಂದಿದೆ.

ಈ ಲೇಖನ ಓದಿದ್ದೀರಾ?: ಬಿಹಾರದ ಭೂಮಿ ಲೂಟಿ: ಅದಾನಿ ಸಾಮ್ರಾಜ್ಯದ ವಿಸ್ತರಣೆಯಲ್ಲಿ ಮೋದಿ ಸರ್ಕಾರದ ನೇರ ಪಾತ್ರ

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಧಾರ್ ಎಸ್‌ಪಿ ಮಯಂಕ್ ಅವಸ್ಥಿ, “ಇದೊಂದು ಮನಕಲಕುವ ಘಟನೆ. ನಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದೇವೆ. ಪ್ರಾಥಮಿಕ ತನಿಕೆಯಲ್ಲಿ ಆರೋಪಿ ಮಹೇಶ್‌ ಮಾನಸಿಕ ಅಸ್ವಸ್ಥನಾಗಿದ್ದ. ಆತನ ಕಳೆದ ಮೂರ್ನಾಲ್ಕು ದಿನಗಳಿಂದ ತನ್ನ ಮನೆಯಿಂದ ನಾಪತ್ತೆಯಾಗಿದ್ದ ಎಂಬುದಾಗಿ ತಿಳಿದುಬಂದಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಹಬ್ಬದ ದಿನವೇ ಸಾರ್ವಜನಿಕರಿಗೆ ದರ ಏರಿಕೆಯ ಶಾಕ್‌; ಎಲ್‌ಪಿಜಿ ಸಿಲಿಂಡರ್ ದರ ಏರಿಕೆ

ಆಯುಧ ಪೂಜೆ ಹಬ್ಬದ ದಿನವೇ ತೈಲ ಮಾರುಕಟ್ಟೆ ಕಂಪನಿಗಳು ಗ್ರಾಹಕರಿಗೆ ದರ...

ಯುವತಿ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರ ಬಂಧನ

ಯುವತಿಯೊಬ್ಬರ ಮೇಲೆ ಅತ್ಯಾಚಾರವೆಸಗಿದ್ದ ಇಬ್ಬರು ಪೊಲೀಸರನ್ನು ಬಂಧಿಸಲಾಗಿದೆ. ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ...

ರೆಪೋ ದರ ಶೇ. 5.5 ಕ್ಕೆ ಸ್ಥಿರವಾಗಿರಿಸಿದ ಆರ್‌ಬಿಐ; ಸತತ ಎರಡನೇ ಬಾರಿಯೂ ಯಥಾಸ್ಥಿತಿ

ಶೇ.5.5ರ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡದೇ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ ಎಂದು...

Download Eedina App Android / iOS

X