ಹಾವೇರಿ | ಹಿಂದಿ ಹೇರಿಕೆ ವಿರೋಧ; ಕರವೇ ಕಾರ್ಯಕರ್ತರ ಬಂಧಿಸಿದವರನ್ನು ಬಿಡುಗಡೆ ಮಾಡುವಂತೆ ಪ್ರತಿಭಟನೆ

Date:

Advertisements

“ರಾಜ್ಯದಲ್ಲಿ ಒತ್ತಾಯ ಪೂರ್ವಕವಾಗಿ ಹಿಂದಿ ಹೇರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಹೋರಾಟ ಮಾಡಿದ ಕರವೇ ಕಾರ್ಯಕರ್ತರನ್ನು ಬಂಧಿಸಿರುವ ಪೊಲೀಸ ಕ್ರಮವನ್ನು ಖಂಡಿಸುತ್ತೇವೆ. ಕೂಡಲೇ ಬಿಡುಗಡೆ ಮಾಡಬೇಕು” ಎಂದು ಕರವೇ ಜಿಲ್ಲಾಧ್ಯಕ್ಷ ಗಿರೀಶ ಬಾರ್ಕಿ ಆಗ್ರಹಿಸಿದರು.

ಹಾವೇರಿ ಪಟ್ಟಣದ ಸಿದ್ದಪ್ಪ ಕಂಬಳಿ ವೃತ್ತದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ರಾಜ್ಯದಲ್ಲಿ ಹಿಂದಿ ಹೇರಿಕೆಯನ್ನು ವಿರೋಧಿಸಿ 41 ಜನರ ಕರವೇ ಕಾರ್ಯಕರ್ತರ ಬಂದಿಸಿರುವವರನ್ನು ಬಿಡುಗಡೆ ಮಾಡುವಂತೆ  ಪ್ರತಿಭಟನೆಯಲ್ಲಿ ಮಾತನಾಡಿದರು.

“ಸ್ವಾತಂತ್ರ್ಯಾನಂತರ ಇದೇ ರಾಜಾಭಾಷಾ ಆಯೋಗ/ಸಮಿತಿ ಹಿಂದಿಯೇತರ ರಾಜ್ಯಗಳ ಮೇಲೆ ಹಿಂದಿಯನ್ನು ಬಲವಂತವಾಗಿ ಹೇರುವ ವ್ಯವಸ್ಥಿತ ಕುತಂತ್ರ ನಡೆಸುತ್ತಾ ಬಂದಿದೆ. ಮೊಟ್ಟ ಮೊದಲ ಬಾರಿ ಈ ರಾಜಭಾಷಾ ಸಮಿತಿಗೆ ನೇರವಾಗಿ ಬಿಸಿ ಮುಟ್ಟಿಸುವ ಕಾರ್ಯವನ್ನು ಕರ್ನಾಟಕ ರಕ್ಷಣಾ ವೇದಿಕೆ ನಡೆಸಿದೆ” ಎಂದರು.

ದೇಶದಲ್ಲಿರುವುದು ಪ್ರಜಾಪ್ರಭುತ್ವ. ಜನರ ಆಳ್ವಿಕೆಯ ಕಾಲದಲ್ಲಿ ನಾವು ಇದ್ದೇವೆ. ರಾಜಪ್ರಭುತ್ವ ಹೋಗಿ ಎಷ್ಟೋ ದಶಕಗಳಾಗಿವೆ. ರಾಜರೇ ಇಲ್ಲದ ಕಾಲದಲ್ಲಿ ರಾಜಭಾಷೆ ಇರಲು ಹೇಗೆ ಸಾಧ್ಯ? ದೇಶದಲ್ಲಿ ಈಗ ಯಾವುದೇ ರಾಜಭಾಷೆಗಳು ಇಲ್ಲ, ಇರುವುದು ನೆಲದ ಭಾಷೆಗಳು, ಜನರ ಭಾಷೆಗಳು. ರಾಜಭಾಷೆ ಎಂಬುದೇ ಪ್ರಜಾಪ್ರಭುತ್ವ ವಿರೋಧಿ” ಎಂದು ಕಿಡಿಕಾರಿದರು.

“ಒಕ್ಕೂಟ ಸರ್ಕಾರ ರಾಜಭಾಷಾ ಸಮಿತಿ/ಆಯೋಗವನ್ನು ಈ ಕೂಡಲೇ ರದ್ದುಪಡಿಸಬೇಕು. ರಾಜಭಾಷೆಯ ಹೆಸರಲ್ಲಿ ಹಿಂದಿ ಹೇರುವುದನ್ನು ನಾವು ಸಹಿಸುವುದಿಲ್ಲ. ಹಿಂದಿ ಹೇರಿಕೆ ದೇಶಕ್ಕೆ ಮಾರಕ ಮಾತ್ರವಲ್ಲ, ಭಾರತದ ಐಕ್ಯತೆಗೆ ಧಕ್ಕೆ ತರುತ್ತಿದೆ” ಎಂದು ಹೇಳಿದರು.

ನಂತರ ರಾಜ್ಯ ಕಾರ್ಯದರ್ಶಿ ಕರಿಬಸಯ್ಯ ಎಸ್ ಬಿ, ಮಾತನಾಡಿ, “ನಿನ್ನೆ ನಡೆದ ಪ್ರತಿಭಟನೆ ಹಿನ್ನೆಲೆಯಲ್ಲಿ ನಮ್ಮ ಮುಖಂಡರು/ಕಾರ್ಯಕರ್ತರ ಮೇಲೆ ಸುಳ್ಳು ಆರೋಪಗಳನ್ನು ಹೊರೆಸಿ ಮೊಕದ್ದಮೆ ದಾಖಲಿಸಿ ಜೈಲಿಗೆ ಕಳುಹಿಸಲಾಗಿದೆ. ನಾವು ಪೊಲೀಸರ ಕೇಸು, ಜೈಲಿಗೆ ಹೆದರುವುದಿಲ್ಲ. ಹೆದರಿಸಿ ನಮ್ಮ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

“ಇನ್ನು ಮುಂದೆ ರಾಜ್ಯದದಲ್ಲಿ ಹಿಂದಿ ಪ್ರಚಾರಕ್ಕೆ ಯಾವುದೇ ಸಂಸ್ಥೆ ಕಾರ್ಯಕ್ರಮ ಮಾಡಲು ಮುಂದಾದರೆ ಅದರ ಪರಿಣಾಮವನ್ನು ಅವರೇ ಎದುರಿಸಬೇಕಾಗುತ್ತದೆ. ನಮ್ಮ ಸಹನೆ ಮಿತಿ ಮೀರಿದೆ. ಇನ್ನು ನಾವು ಉಗ್ರ ಸ್ವರೂಪದ ಹೋರಾಟ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

“ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರ ಮೇಲೆ ಹೂಡಲಾಗಿರುವ ಸುಳ್ಳು ಮೊಕದ್ದಮೆಗಳನ್ನು ರಾಜ್ಯ ಸರ್ಕಾರ ಈ ಕೂಡಲೇ ಹಿಂದಕ್ಕೆ ಪಡೆದು, ಅವರನ್ನು ಬಿಡುಗಡೆ ಮಾಡಬೇಕು. ಇಲ್ಲವಾದಲ್ಲಿ ಇಡೀ ಜಿಲ್ಲಾಧ್ಯಂತ ನಾವು ಚಳವಳಿ ಸಂಘಟಿಸುತ್ತೇವೆ” ಎಂದು ಎಚ್ಚರಿಕೆ ನೀಡಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾ ಮುಖಂಡರು ಸತೀಶ ಗೌಡ ಮುದಿಗೌಡ್ರು,  ಮಾರುತಿ ಪೂಜಾರ, ಸಂತೋಷ ಪಾಟೀಲ, ಸಿಕಂದರ್ ಓಲೆಕಾರ, ಬಿ ಎಚ್ ಬಣಕಾರ,  ಅಬ್ಬು ಕೋಡಮಗಿ, ನಾಗೇಶ ಪೂಜಾರ,  ಶಿವರಾಜ ಕುರುಬರ, ರಾಮಣ್ಣ ಅಗಸರ, ವಿಜಯಲಕ್ಷ್ಮಿ ಗುಡಿಮಿ, ಈರಮ್ಮ ಮಂಗಳ, ಲಕ್ಷ್ಮಿ, ರೂಪ, ಶೋಭಕ್ಕ ಹೊನ್ನಳ್ಳಿ, ಜಿಎಸ್ ಕೊಟ್ರೇಶ್, ಚೆನ್ನಪ್ಪ, ಕುತ್ನ ಸಲೀಂ ದುಕಾಂಧರ, ಮಂಜು ಕಾಯಿಕಲ್ ಇನ್ನೂ ಅನೇಕರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

Download Eedina App Android / iOS

X