ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಅದರಲ್ಲೂ, ಉತ್ತರ ಕರ್ನಾಟಕ ಭಾಗದ ಹಲವಾರು ಪ್ರದೇಶಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಅನಾಹುತಗಳು ಸಂಭವಿಸಿವೆ. ವಿಜಯಪುರ, ಕಲಬುರಗಿ ಜಿಲ್ಲೆಗಳಲ್ಲಿ ಮಳೆಯಾಗಿಂದ ಸಾಕಷ್ಟ ಅವಾಂತರಗಳು ಸೃಷ್ಟಿಯಾಗಿವೆ. ಇನ್ನೂ 4 ದಿನಗಳ ಕಾಲ ರಾಜ್ಯದ 8 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ರಾಜ್ಯದ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುತ್ತಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿದೆ. ಜಿಲ್ಲೆಗಳಲ್ಲಿ ಹರಿಯುವ ಕೃಷ್ಣ ಮತ್ತು ಭೀಮಾ ನದಿಗಳು ತುಂಬಿ ಹರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಅಗತ್ಯ ರಕ್ಷಣಾ ಮತ್ತು ಪರಿಹಾರ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.
ಭಾರೀ ಮಳೆಯಿಂದಾಗಿ ವಿಜಯಪುರ ಜಿಲ್ಲೆಯಲ್ಲಿ ಹಲವರು ಹಳ್ಳಿಗಳು ಜಲಾವೃತಗೊಂಡಿವೆ. ಸುಮಾರು 45 ಮನೆಗಳಿಗೆ ಹಾನಿಯಾಗಿದೆ. ಕಲಬುರಗಿ ಜಿಲ್ಲೆಯಲ್ಲಿಯೂ ಧಾರಾಕಾರ ಮಳೆ ಸುರಿಯುತ್ತಿದ್ದು, ಪ್ರವಾಹ ಭೀತಿ ಎದುರಾಗಿದೆ. ಕಲಬುರಗಿ ಜಿಲ್ಲೆಯಲ್ಲಿ ಶನಿವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಮಳೆಯ ಪರಿಸ್ಥಿತಿ ನೋಡಿದರೆ, ಸೋಮವಾರವೂ ರಜೆ ಘೋಷಿಸುವ ಸಾಧ್ಯತೆಗಳಿವೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳು ಸೇರಿದಂತೆ ಹಲವು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೊಡಕವಿದ ವಾತಾವರಣವಿದೆ.