ಮತಗಳ್ಳತನದ ವಿರುದ್ಧ ದೇಶದಾದ್ಯಂತ ಸಂಚಲನ ಮೂಡಿಸಿರುವ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನಡೆಸುತ್ತಿರುವ ಹೋರಾಟ ಮತ್ತು ಜನಜಾಗೃತಿ ಅಭಿಯಾನದ ಭಾಗವಾಗಿ ಶೃಂಗೇರಿ ಕ್ಷೇತ್ರದಲ್ಲಿ ಮಂಗಳವಾರ ಅಭಿಯಾನ ಮತ್ತು ಪ್ರತಿಭಟನೆ ನಡೆಯಲಿದೆ.
ಯುವ ಕಾಂಗ್ರೆಸ್, ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಸಮಿತಿಯಿಂದ ಸೆ.30ರ ಮಂಗಳವಾರ ಮಧ್ಯಾಹ್ನ 3ಗಂಟೆಗೆ ಕೊಪ್ಪ ಬಸ್ ನಿಲ್ದಾಣದಲ್ಲಿ ಬೃಹತ್ ಸಹಿ ಸಂಗ್ರಹ ಅಭಿಯಾನ ಮತ್ತು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಹಾಗೆಯೇ, ಶೃಂಗೇರಿ ಶಾಸಕ ಟಿ.ಡಿ.ರಾಜೇಗೌಡ, ಕೆಪಿಸಿಸಿ ಪ್ರಚಾರ ಸಮಿತಿ ರಾಜ್ಯ ಮುಖ್ಯ ಸಂಯೋಜಕ ಸುಧೀರ್ ಕುಮಾರ್‌ಮುರೊಳ್ಳಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಯುವ ಕಾಂಗ್ರೆಸ್ ಉಸ್ತುವಾರಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಜಿತ್ ವಡ್ಡರ್ಸೆ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಶ್ರೀಜಿತ್ ದಂಡಿನ ಮಕ್ಕಿ, ಕೊಪ್ಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕುಕ್ಕುಡಿಗೆ ರವೀಂದ್ರ, ಯುವ ಮತ್ತು ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಗಳು ಮುಂಚೂಣಿ ಘಟಕಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ ಎಂದು ಶೃಂಗೇರಿ ಯುವ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದುರ್ಗಾಚರಣ್ ಕುಂಚೂರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಹದಗೆಟ್ಟ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ; ಸುಮೊಟೊ ಪ್ರಕರಣ ದಾಖಲು
ಈ ಸಂದರ್ಭದಲ್ಲಿ ಯುವ ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಯೀಬ್ ಕೊಪ್ಪ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷ ವಿಜಯಾನಂದ ಗ್ಯಾರಂಟಿ ಸಮಿತಿ ಸದಸ್ಯ ರಾಘವೇಂದ್ರ ತಲಮಕ್ಕಿ ಹಾಗೂ ಇನ್ನಿತರರಿದ್ದರು.