ಸಾಮಾಜಿಕ ಹಾಗೂ ಶೈಕ್ಷಣಿಕ ಸ್ಥಿತಿಗತಿ ಕುರಿತು ಸಮೀಕ್ಷೆಗೆ ನಿಯೋಜನೆ ಮಾಡಿದ್ದರೂ ಸಮೀಕ್ಷೆಗೆ ಹಾಜರಾಗದ ಶಿಕ್ಷಕನನ್ನು ಕರ್ತವ್ಯಲೋಪದ ಮೇಲೆ ಅಮಾನತು ಮಾಡಿ ಕೊಪ್ಪಳ ಜಿಲ್ಲಾಧಿಕಾರಿ ಸುರೇಶ ಇಟ್ನಾಳ್ ಆದೇಶ ಹೊರಡಿಸಿದ್ದಾರೆ.
ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಜೂಲಕುಂಟಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಾಯಕ ಶಿಕ್ಷಕ ರಾಮಪ್ಪ ತಳವಾರ ಅಮಾನತುಗೊಂಡವರು. ಸಮೀಕ್ಷೆಯಲ್ಲಿ ಶೂನ್ಯ ಪ್ರಗತಿ ಸಾಧಿಸಿದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ: ಕೊಪ್ಪಳ | ಟಣಕನಕಲ್ಲ ಗ್ರಾಮದ ದಲಿತ ಕಾಲೋನಿಯ ಬೇಡಿಕೆ ಈಡೇರಿಕೆಗೆ ಒತ್ತಾಯ
ಕೆಲವು ದಿನಗಳಿಂದ ರಾಮಪ್ಪ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದರು. ಇದುವರೆಗೆ ಯಾವುದೇ ಮನೆ ಸಮೀಕ್ಷೆಗೆ ತೆರಳದೆ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಹೇಳಲಾಗುತ್ತಿದೆ.