ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ವತಿಯಿಂದ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ ಭಾನುವಾರ ಆಯೋಜಿಸಿದ್ದ ಡ್ರೋನ್ ಪ್ರದರ್ಶನದಲ್ಲಿ ಮೂಡಿಬಂದ ಹುಲಿಯ ಕಲಾಕೃತಿಗೆ ವಿಶ್ವದಾಖಲೆಯ ಗೌರವ ಲಭಿಸಿದೆ.
ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಹೊಸ ಮೆರಗು ನೀಡಿದ ಅತ್ಯಾಕರ್ಷಕ ಡ್ರೋನ್ ಪ್ರದರ್ಶನ, ಬಾನಂಗಳದಲ್ಲಿ ವಿವಿಧ ಕಲಾಕೃತಿಗಳ ಬಣ್ಣಬಣ್ಣದ ಚಿತ್ತಾರಗಳನ್ನು ಬಿಡಿಸಿದ 3000 ಡ್ರೋನ್ ಗಳು ಹೊಸ ಲೋಕವನ್ನು ಸೃಷ್ಟಿಸಿತು. ಇದರೊಂದಿಗೆ 2983 ಡ್ರೋನ್ ಗಳನ್ನು ಬಳಸಿ ರಾಷ್ಟ್ರೀಯ ಪ್ರಾಣಿ ಹುಲಿಯ ಕಲಾಕೃತಿ ರಚಿಸಿ ವಿಶ್ವದಾಖಲೆ ನಿರ್ಮಿಸುವ ಮೂಲಕ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಮೈಸೂರಿನ ಆಕರ್ಷಣೆಯನ್ನು ಹೆಚ್ಚಿಸಿತು.

ಕಾರ್ಯಕ್ರಮದಲ್ಲಿ ಸಚಿವರಾದ ಡಾ. ಹೆಚ್. ಸಿ. ಮಹದೇವಪ್ಪ, ಶಾಸಕ ತನ್ವೀರ್ ಸೇಠ್, ಪರಿಷತ್ ಸದಸ್ಯ ಕೆ. ಶಿವಕುಮಾರ್, ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಪಂ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಎಸ್.ಯುಕೇಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜ್, ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ವಿಭಾಗದ ನಿರ್ದೇಶಕ ಡಿ.ಜೆ. ದಿವಾಕರ್, ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್, ಎಂಡಿಎ ಆಯುಕ್ತ ಕೆ.ಆರ್. ರಕ್ಷಿತ್, ಎಸ್ಪಿ ವಿಷ್ಣುವರ್ಧನ್, ಸೆಸ್ಕ್ ಅಧೀಕ್ಷಕ ಇಂಜಿನಿಯರ್ ಸುನೀಲ್, ದಸರಾ ದೀಪಾಲಂಕಾರ ಉಪ ಸಮಿತಿ (ಅಧಿಕಾರೇತರ) ಅಧ್ಯಕ್ಷ ರಾಘವೇಂದ್ರ ಸೇರಿದಂತೆ ಇನ್ನಿತರರು ಇದ್ದರು.
ಈ ವಿಶೇಷ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸಾಗಡೆ ಗ್ರಾಮ ಪಂಚಾಯತಿ ಸಿಬ್ಬಂದಿಗಳ ಲಂಚದಾಹ; ‘ಇ-ಸ್ವತ್ತಿ’ಗಾಗಿ ಅಲೆದಾಟ
