- ಡಾ.ಆರ್.ಕಾವಾಲಮ್ಮ, ಡಾ. ಹೆಚ್.ಎಸ್.ಭೋಜ್ಯನಾಯ್ಕ್, ಬಸವರಾಜ್ ಮಲ್ಗೆ ಹೆಸರು ಶಿಫಾರಸು
- ಕೆಪಿಎಸ್‌ಸಿ ಅಧ್ಯಕ್ಷ, ಸದಸ್ಯರ ನೇಮಕಾತಿಯಲ್ಲಿ ಪಾರದರ್ಶಕತೆ ಬಗ್ಗೆ ಸೂಚಿಸಿದ್ದ ಹೈಕೋರ್ಟ್
ಕರ್ನಾಟಕ ಲೋಕಸೇವಾ ಆಯೋಗದಲ್ಲಿ (ಕೆಪಿಎಸ್‌ಸಿ) ಖಾಲಿ ಇರುವ ಸದಸ್ಯರ ಹುದ್ದೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೂವರು ಹೆಸರು ಶಿಫಾರಸು ಮಾಡಿದ್ದಾರೆ.
ಬೆಂಗಳೂರಿನ ಡಾ.ಆರ್.ಕಾವಾಲಮ್ಮ, ಕುವೆಂಪು ವಿಶ್ವವಿದ್ಯಾಲಯದ ಮಾಜಿ ರಿಜಿಸ್ಟ್ರಾರ್ ಡಾ. ಹೆಚ್.ಎಸ್. ಭೋಜ್ಯನಾಯ್ಕ್ ಹಾಗೂ ಬೀದರ್ನ ಬಸವರಾಜ್ ಮಲ್ಗೆ ಹೆಸರನ್ನು ಮುಖ್ಯಮಂತ್ರಿಗಳು ಶಿಫಾರಸು ಮಾಡಿದ್ದಾರೆ.
ಕೆಪಿಎಸ್‌ಸಿ ಅಧ್ಯಕ್ಷ ಮತ್ತು 11 ಮಂದಿ ಸದಸ್ಯರ ನೇಮಕಾತಿ ಆದೇಶ ರದ್ದುಪಡಿಸುವಂತೆ ಕೋರಿ ಸಾಮಾಜಿಕ ಕಾರ್ಯಕರ್ತ ಟಿ.ನರಸಿಂಹಮೂರ್ತಿ ಮತ್ತು ಶಶಿಪ್ರಸಾದ್ ಗಾಂಧಿ ಹೈಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದರು.
ಎರಡು ವಾರಗಳ ಹಿಂದೆ (ಆ.2) ವಿಚಾರಣೆ ಪೂರ್ಣಗೊಳಿಸಿದ ಮುಖ್ಯ ನ್ಯಾಯಮೂರ್ತಿ ಪಿ ಬಿ ವರಾಳೆ ಅವರು (ಆ.2) ರಂದು ಕೆಪಿಎಸ್‌ಸಿ ಅಧ್ಯಕ್ಷ ಮತ್ತು ಸದಸ್ಯರ ನೇಮಕಾತಿಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಬೇಕು ಎಂದು ರಾಜ್ಯ ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದ್ದರು. ಈ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ಕೆಪಿಎಸ್ಸಿಗೆ ಈ ಮೂವರು ಹೆಸರನ್ನು ಶಿಫಾರಸು ಮಾಡಿದ್ದಾರೆ.
