ಕರ್ನಾಟಕದ ವಿವಿಧ ನಿಗಮ ಮಂಡಳಿ ನೇಮಕದಲ್ಲಿ ಬಾಕಿ ಉಳಿದಿದ್ದ ಐದು ನಿಗಮ ಮಂಡಳಿಗಳಿಗೂ ಅಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ.
ಬಿಎಂಟಿಸಿ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ್ದ ನಿಕೇತ್ ರಾಜ್ ಮೌರ್ಯಗೆ ಇದೀಗ ಬಿಎಂಟಿಸಿ ಉಪಾಧ್ಯಕ್ಷ ಸ್ಥಾನ ನೀಡಲಾಗಿದ್ದು, ಬಿಎಂಟಿಸಿ ಅಧ್ಯಕ್ಷರಾಗಿ ವಿ ಎಸ್ ಆರಾಧ್ಯ ಅವರನ್ನು ನೇಮಕ ಮಾಡಲಾಗಿದೆ.
ಬಿಎಂಟಿಸಿ ಅಧ್ಯಕ್ಷರನ್ನಾಗಿ ನಿಕೇತ್ ರಾಜ್ ಮೌರ್ಯ ಅವರನ್ನು ನೇಮಕ ಮಾಡಲಾಗಿತ್ತು. ನಿಕೇತ್ ರಾಜ್ ಮೌರ್ಯ ಸಹ ಅಧಿಕಾರ ಸ್ವೀಕಾರ ಮಾಡಿದ್ದರು. ಆದರೆ, ಇದೀಗ ಅವರನ್ನು ಬಿಎಂಟಿಸಿ ಉಪಾಧ್ಯಕ್ಷರನ್ನಾಗಿ ಮರು ನೇಮಿಸಿ ಸರ್ಕಾರ ಆದೇಶಿಸಿದೆ. ಇನ್ನು ಬಿಎಂಟಿಸಿ ಉಪಾಧ್ಯಕ್ಷರಾಗಿದ್ದ ವಿ ಎಸ್ ಆರಾಧ್ಯ ಎಂಬುವರನ್ನು ಬಿಎಂಟಿಸಿ ಅಧ್ಯಕ್ಷರನ್ನಾಗಿ ಮರು ನೇಮಿಸಿ ಸರ್ಕಾರ ಆದೇಶಿಸಿದೆ.
ಇನ್ನು ಬಾಕಿ ಉಳಿದ 5 ನಿಗಮ ಮಂಡಳಿಗಳಿಗೂ ಅಧ್ಯಕ್ಷರನ್ನು ನೇಮಕ ಮಾಡಿ ಸರ್ಕಾರ ಆದೇಶಿಸಿದೆ.
ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ, ಕರ್ನಾಟಕ ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ – ಸೈಯದ್ ಮೆಹಮೂದ್ ಚಿಸ್ಟಿ
ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ ಅಧ್ಯಕ್ಷ – ಶರಣಪ್ಪ ಸಲಾದ್ ಪುರ್ .
ಕರ್ನಾಟಕ ರಾಜ್ಯ ಬೀಜ ನಿಗಮ ನಿಯಮಿತ ಅಧ್ಯಕ್ಷ- ಆಂಜನಪ್ಪ
ಕರ್ನಾಟಕ ರಾಜ್ಯ ಸಾಂಬಾರು ಅಭಿವೃದ್ಧಿ ಮಂಡ ಅಧ್ಯಕ್ಷ – ನೀಲಕಂಠರಾವ್ ಎಸ್ ಮೂಲಗೆ
ಜವಾಹರ ಬಾಲಭವನ ಸೊಸೈಟಿ ಉಪಾಧ್ಯಕ್ಷ – ಅನಿಲ್ ಕುಮಾರ್ ಜಮಾದಾರ್