ಬೀದರ್‌ | ವೀರಶೈವ ʼಲಿಂಗಾಯತ ಧರ್ಮʼದ ಒಂದು ಉಪಪಂಗಡ : ಬಸವಲಿಂಗ ಪಟ್ಟದ್ದೇವರು

Date:

Advertisements

ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ನಡೆಯುತ್ತಿರುವ ರಂಭಾಪುರಿ ಶ್ರೀಗಳ ದಸರಾ ದರ್ಬಾರ ಕಾರ್ಯಕ್ರಮದಲ್ಲಿ ಶ್ರೀಗಳು ತ್ರಿಪುರಾಂತಕ ಕೆರೆಯ ಹೆಸರನ್ನು ಬದಲಾಯಿಸಬೇಕು ಎಂಬ ಹೇಳಿಕೆಗೆ ಬಸವಕಲ್ಯಾಣ ಅನುಭವ ಮಂಟಪದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ವಿರೋಧ ವ್ಯಕ್ತಪಡಿಸಿದ್ದಾರೆ.

ʼತ್ರಿಪುರಾಂತಕ ಕೆರೆ 12ನೇ ಶತಮಾನದ ಬಸವಾದಿ ಶರಣರ ಚರಿತ್ರೆಯಲ್ಲಿ ವಚನಗಳಲ್ಲಿ ಅತ್ಯಂತ ಮಹತ್ವ ಪಡೆದಿದೆ. ಕೆಲವು ಶರಣರ ವಚನಗಳ ಹಾಗೂ ವಚನಾಂಕಿತಗಳಲ್ಲಿ ತ್ರಿಪುರಾಂತಕ ಕೆರೆಯ ಹೆಸರನ್ನು ಉಲ್ಲೇಖಿಸಲಾಗಿದೆ. ಶರಣರ ಚರಿತ್ರೆಗೆ ತ್ರಿಪುರಾಂತಕ ಕೆರೆಗೆ ಅವಿನಾಭಾವ ಸಂಬಂಧವಿದೆ. ಹೀಗಿರುವಾಗ ರಂಭಾಪುರಿ ಶ್ರೀಗಳು ತ್ರಿಪುರಾಂತಕ ಕೆರೆಯ ಹೆಸರು ಬದಲಾಯಿಸುವ ಸಲಹೆ ನೀಡುವ ಮೂಲಕ ಶರಣರ ನಿಜಚರಿತ್ರೆಯನ್ನು ತಿರುಚುವ ಹುನ್ನಾರ ನಡೆಸುತ್ತಿರುವುದು ವಿಷಾದನೀಯ ಸಂಗತಿಯಾಗಿದೆ ಎಂದು ಸೋಮವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ʼಶರಣರ ಇತಿಹಾಸ ತಿರುಚುವ ಕಾರ್ಯಗಳನ್ನು ಯಾರೂ ಮಾಡಬಾರದು. ಶರಣರ ಸತ್ಯ ಚರಿತ್ರಗೆ ಯಾರಾದರೂ ಕೈ ಹಾಕಿದರೆ ಅದರ ಪ್ರತಿಫಲವನ್ನು ಅವರೇ ಅನುಭವಿಸುತ್ತಾರೆ ಎಂಬುದು ಮರೆಯಬಾರದು. ಲಿಂಗಾಯತ ಧರ್ಮ, ವೀರಶೈವ ಪಂಗಡ
ರಂಭಾಪುರಿ ಶ್ರೀಗಳು ವೀರಶೈವ ಲಿಂಗಾಯತ ಎರಡು ಒಂದೇ ಎಂದು ಹೇಳುತ್ತಾ ಪ್ರತ್ಯೇಕ ಧರ್ಮದ ಪ್ರತಿಪಾದನೆ ಮಾಡುತ್ತಿರುವವರನ್ನು ಅರೇಜ್ಞಾನ ಇದೆ ಎಂದು ನುಡಿದಿರುವುದು ಖಂಡನೀಯವಾಗಿದೆʼ ಎಂದರು.

ಬಸವಾದಿ ಶರಣರ ವಚನಗಳನ್ನು ಆಳವಾಗಿ ಅಧ್ಯಯನ ಮಾಡಿರುವ ಅನೇಕ ಸಾಹಿತಿಗಳು, ಸಂಶೋಧಕರು, ಮಠಾಧೀಶರು ಹಾಗೂ ಸರ್ಕಾರದ ದಾಖಲೆಗಳನ್ನು ಲಿಂಗಾಯತ ಪ್ರತ್ಯೇಕ ಧರ್ಮವೆಂದು ಸಾಕ್ಷಿ ನೀಡುತ್ತವೆ. ಎರಡೂ ಒಂದೇ ಎನ್ನುವ ಶ್ರೀಗಳು ಪ್ರತ್ಯೇಕ ಧರ್ಮದ ಹೋರಾಟವನ್ನು ಬೆಂಬಲಿಸಬೇಕೆ ವಿನಃ ಅದನ್ನು ವಿರೋಧಿಸಬಾರದು. ವೀರಶೈವ ಲಿಂಗಾಯತ ಧರ್ಮದ ಒಂದು ಉಪಪಂಗಡ. ಹಾಗಾಗಿ ಲಿಂಗಾಯತರಲ್ಲಿ ವೀರಶೈವ ಇದೆ. ಆದರೆ ವೀರಶೈವವೇ ಪ್ರಧಾನವಲ್ಲವೆಂಬುದು ಪೂಜ್ಯರು ಗಮನಿಸಬೇಕುʼ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಬೀದರ್‌ | ರಾಜ್ಯ ಸರ್ಕಾರ ರೈತರ ನೆರವಿಗೆ ಧಾವಿಸಿ ತುರ್ತು ಪರಿಹಾರ ಘೋಷಿಸಲಿ : ಬಿ.ವೈ.ವಿಜಯೇಂದ್ರ

ಈ ಮುಂಚೆ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಕೇಂದ್ರ ಸರಕಾರಕ್ಕೆ ಸಲ್ಲಿಸಿದ ಪ್ರತ್ಯೇಕ ಧರ್ಮದ ಬೇಡಿಕೆಯನ್ನು ಯಾಕೆ ತಿರಸ್ಕೃತ ಮಾಡಿದೆ ಎಂಬುದು ಶ್ರೀಗಳು ತಿಳಿದುಕೊಳ್ಳಬೇಕು. ಲಿಂಗಾಯತ ಸಮಾಜದ ಅಖಂಡತೆಗಾಗಿ ಮತ್ತು ಈ ಸಮುದಾಯದ ಮಕ್ಕಳ ಭವಿಷ್ಯಕ್ಕಾಗಿ ಲಿಂಗಾಯತ ಧರ್ಮ ಅಲ್ಪಸಂಖ್ಯಾತ ಮಾನ್ಯತೆಯ ಹೋರಾಟವನ್ನು ಬೆಂಬಿಲಿಸಬೇಕೆಂದು ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಈದಿನ
ಈ ದಿನ ಸಂಪಾದಕೀಯ
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

Download Eedina App Android / iOS

X