ಧಾರವಾಡ | ಮಾಜಿ ಸೈನಿಕನ ಮೇಲೆ ಪೊಲೀಸರಿಂದ ಹಲ್ಲೆ; ಹಫ್ತಾ ನೀಡದ್ದಕ್ಕೆ ಥಳಿಸಿದ್ದಾರೆ ಎಂದು ಆರೋಪ

Date:

Advertisements

ಧಾರವಾಡದ ಸಪ್ತಾಪುರದಲ್ಲಿ ಪಿಜಿ ಮತ್ತು ಮೆಸ್ ನಡೆಸುತ್ತಿದ್ದ ಸೇನೆಯಿಂದ ನಿವೃತ್ತಿ ಹೊಂದಿದ್ದ ಸೈನಿಕರೊಬ್ಬರ ಮೇಲೆ ಪೊಲೀಸರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಬೆಳಕಿಗೆ ಬಂದಿದೆ.

ರಾಮಪ್ಪ ನಿಪ್ಪಾಣಿ ಎಂಬುವವರೇ ಹಲ್ಲೆಗೊಳಗಾದ ಮಾಜಿ ಸೈನಿಕರಾಗಿದ್ದು, ಕಡಿಮೆ ದರದಲ್ಲಿ ಊಟ, ವಸತಿ ಕೊಡುತ್ತಿದ್ದರು ಎನ್ನಲಾಗಿದೆ. ಅವರ ಮೇಲೆ ಸೆ. 28ರ ರಾತ್ರಿ ದಾಳಿ ಮಾಡಿದ್ದು, ರಾತ್ರಿ 11 ಗಂಟೆಗೆ ಸಪ್ತಾಪುರ ಬಾವಿ ಬಳಿ ಇರುವ ಸೈನಿಕ್ ಮೆಸ್​ಗೆ ಆಗಮಿಸಿದ್ದ ಧಾರವಾಡ ಉಪನಗರ ಠಾಣೆಯ ಪೊಲೀಸರು ಮೆಸ್ ಗೇಟ್ ಹಾಕುವಂತೆ ರಾಮಪ್ಪಗೆ ಹೇಳಿದ್ದಾರೆ. ಇನ್ನೂ ನಾಲ್ಕೈದು ವಿದ್ಯಾರ್ಥಿಗಳು ಊಟಕ್ಕೆ ಬರುವವರಿದ್ದಾರೆ ಸರ್ ಎಂದು ರಾಮಪ್ಪ ಕೇಳಿಕೊಂಡಿದ್ದಾರೆ.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಆರೋಗ್ಯವೇ ಅಮೂಲ್ಯ ರತ್ನ; ಸ್ವಚ್ಛತೆಯೇ ಅದರ ಕವಚ: ಡಾ.ಜಮೀರಾ.

ಈ ಸಮಯದಲ್ಲಿ ರಾಮಪ್ಪ ನಿಪ್ಪಾಣಿ ಮೇಲೆ ಎಂಟರಿಂದ ಹತ್ತು ಜನ ಪೊಲೀಸರು ಹಪ್ತಾ ಕೊಡದೇ ಇದ್ದಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಹೆಲ್ಮೆಟ್ ಸೇರಿದಂತೆ ಅನೇಕ ವಸ್ತುಗಳಿಂದ ಹಿಗ್ಗಾಮುಗ್ಗಾ ಥಳಿಸಿದ್ದಲ್ಲದೇ, ಮೆಸ್​ನಲ್ಲಿ ಕೆಲಸ ಮಾಡುತ್ತಿದ್ದ ಹುಡುಗರಿಗೆ ಕೂಡಾ ಥಳಿಸಿದ್ದಾರೆ. ಮೆಸ್ನಲ್ಲಿರುವ ಟೇಬಲ್, ಕುರ್ಚಿಗಳನ್ನು ಮುರಿದು, ಸಿಸಿಟಿವಿ ಫುಟೇಜ್, ಮೊಬೈಲ್​ಗಳನ್ನು ತಗೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X