ಅನರ್ಹ ಫಲಾನುಭವಿಗಳಿಗೆ ವಿವಿಧ ಸರ್ಕಾರಿ ಯೋಜನೆಗಳನ್ನು ನೀಡಿರುವುದು ಬೆಳಕಿಗೆ ಬಂದಿದೆ. ಭ್ರಷ್ಟಾಚಾರ ಆರೋಪದಲ್ಲಿ ಗದಗ ಉಪ ತಹಸೀಲ್ದಾರ್ ಡಿ ಟಿ ವಾಲ್ಮೀಕಿ ಅವರನ್ನು ಅಮಾನತು ಮಾಡಲಾಗಿದೆ.
ಗದಗ ತಹಶೀಲ್ದಾರರ ಕಚೇರಿಯಲ್ಲಿ ಸಂಧ್ಯಾ ಸುರಕ್ಷಾ, ವಿಧವಾ ವೇತನ, ವೃದ್ಧಾಪ್ಯ ವೇತನ ಕುರಿತಂತೆ ಸಾಮಾಜಿಕ ಭದ್ರತಾ ಯೋಜನೆಗಳಡಿ ಅನರ್ಹರಿಗೆ ಮಂಜೂರಾತಿ ಆರೋಪದಡಿ ಉಪ ತಹಶೀಲ್ದಾರ ಡಿ.ಟಿ.ವಾಲ್ಮೀಕಿ ಅವರನ್ನು ಅಮಾನತ್ತು ಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.
ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಇಂದು ನಾನೇ ಖುದ್ದಾಗಿ ಕಚೇರಿಗೆ ಹೋಗಿ ಪರಿಶೀಲನೆ ನಡೆಸಲಾಗಿ ಅನರ್ಹರಿಗೆ ಪಿಂಚಣಿ ಮಂಜೂರು ಮಾಡಿರುವ ಕುರಿತು ಕಂಡು ಬಂದ ಹಿನ್ನೆಲೆಯಲ್ಲಿ ಅಮಾನತ್ತು ಕ್ರಮ ವಹಿಸಲಾಗಿದೆ.
“ಜಿಲ್ಲೆಯಲ್ಲಿ 17,997 ಅನರ್ಹರಿಗೆ ಪಿಂಚಣಿ ಮಂಜೂರಾತಿ ಆಗಿರುವುದು ತಿಳಿದು ಬಂದಿದ್ದು ಇದರ ಸತ್ಯಾಸತ್ಯತೆಗಾಗಿ ಸಂಪೂರ್ಣ ತನಿಖೆಗೆ ಸೂಚಿಸಲಾಗಿದೆ. ಅನರ್ಹರಿಗೆ ವಿತರಣೆಯಾಗುತ್ತಿರುವ ಪಿಂಚಣಿ ಹಣ ತಕ್ಷಣ ನಿಲ್ಲಿಸಬೇಕೆಂದು ಈಗಾಗಲೇ ಸೂಚನೆ ನೀಡಲಾಗಿದೆ. ಜಿಲ್ಲಾಧಿಕಾರಿಗಳು ಈ ಕುರಿತು ಸಾಕಷ್ಟು ವಿಚಾರಣೆ ನಡೆಸಿ ಅನರ್ಹರಿಗೆ ಕೊಡುವಂತಹ ಸೌಲಭ್ಯ ನಿಲ್ಲಿಸುವ ಕುರಿತು ಇಲಾಖೆಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ” ಎಂದು ಹೇಳಿದರು.
ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಪ್ರಾದಿಕಾರದ ಅಧ್ಯಕ್ಷ ಅಕ್ಬರಸಾಬ ಬಬರ್ಜಿ, ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ ಇದ್ದರು.