ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು” ಎಂದು ಜಿಲ್ಲಾ ಉಸ್ತುವಾರಿ ಎಚ್.ಕೆ.ಪಾಟೀಲ ತಿಳಿಸಿದರು.
ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸೋಮವಾರ ಬೆಳೆ ಹಾನಿ ಸಮೀಕ್ಷೆ ಹಾಗೂ ಜನತಾ ದರ್ಶನ , ಪ್ರಗತಿ ಪರಿಶೀಲನೆ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಟಿಯನ್ನುದ್ದೆಶಿಸಿ ಅವರು ಮಾತನಾಡಿದರು.
ತೋಟಗಾರಿಕೆ ಇಲಾಖೆಗೆ ಸಂಬAಧಿಸಿದAತೆ 11,348 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್. ಪ್ರಕಾರ 10.36 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ 4337 ರೈತರಿಂದ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಿ ವರದಿಯಲ್ಲಿ ಅಳವಡಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ 4.36 ಕೋಟಿ ರೂ ಹಾಗೂ ತೋಟಗಾರಿಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 1 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವನೆಯಲ್ಲಿ ಸೇರಿಸಿ ಸಲ್ಲಿಸಲಾಗುವುದು” ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.