ಯುವಜನತೆಯಲ್ಲಿ ಹೃದಯಾಘಾತಕ್ಕೆ ಧೂಮಪಾನ, ಜೆನೆಟಿಕ್ ಮತ್ತು ಒತ್ತಡವೇ ಮುಖ್ಯ ಕಾರಣ : ಡಾ. ಮೋನಿಕಾ ಜೆ

Date:

Advertisements

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವತಿಯಿಂದ ವಿಶ್ವ ಹೃದಯ ದಿನದ ಪ್ರಯುಕ್ತ ಜಿಲ್ಲೆಯ ಪತ್ರಕರ್ತರಿಗೆ ಹೃದಯ ಆರೋಗ್ಯ ಮತ್ತು ತುರ್ತು ಆರೈಕೆಯ ಕುರಿತ ಮೂಲಭೂತ ಜೀವ ರಕ್ಷಣೆ (ಬಿಎಲ್‌ಎಸ್) ಮತ್ತು ಹೃದಯ ಶ್ವಾಸಕೋಶದ ಕೃತಕ ಉಸಿರಾಟದ (ಸಿಪಿಆರ್) ತರಬೇತಿ ಕಾರ್ಯಕ್ರಮವನ್ನು ಉಡುಪಿ ಪತ್ರಿಕಾ ಭವನದಲ್ಲಿ ಸೋಮವಾರ ಆಯೋಜಿಸಲಾಗಿತ್ತು.

ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಹೃದ್ರೋಗ ತಜ್ಞೆ ಡಾ.ಮೋನಿಕಾ ಜೆ. ಮಾತನಾಡಿ, ಯುವಜನತೆಯಲ್ಲಿ ಹೆಚ್ಚಾಗಿ ಹೃದಯಾಘಾತ ಸಂಭವಿಸಲು ಧೂಮಪಾನ, ಜೆನೆಟಿಕ್ ಹಾಗೂ ಒತ್ತಡವೇ ಮುಖ್ಯ ಕಾರಣ. ಕೊರೋನಾ ಸೇರಿದಂತೆ ಎಲ್ಲ ರೀತಿಯ ವೈರಸ್‌ಗಳು ಕೂಡ ಹೃದಯಕ್ಕೆ ಅಪಾಯ ತಂದೊಡ್ಡುತ್ತದೆ. ಕೊರೋನಾ ಲಸಿಕೆಯಿಂದ ಹೃದಯಾಘಾತಗಳು ಸಂಭವಿಸುವುದು ಈವರೆಗೆ ಸಾಬೀತಾಗಿಲ್ಲ ಎಂದು ತಿಳಿಸಿದರು.

1007453015

ಹೃದಯ ದಿನಾಚರಣೆಯ ಈ ವರ್ಷದ ಥೀಮ್ -ಡೋಂಟ್ ಮಿಸ್ ಎ ಬೀಟ್(ಹೃದಯದ ಒಂದು ಬಡಿತವನ್ನು ತಪ್ಪಿಸಿಕೊಳ್ಳಬೇಡಿ) ಎಂಬು ದಾಗಿದೆ. ಪ್ರತಿವರ್ಷ ಹೃದಯದ ತಪಾಸಣೆ ಮಾಡಬೇಕು. ದಿನದ ೨೪ಗಂಟೆಗಳಲ್ಲಿ ಒಂದು ಗಂಟೆಯಾದರೂ ಆರೋಗ್ಯಕ್ಕಾಗಿ ಮೀಸಲಿಡಬೇಕು. ಇದರಲ್ಲಿ ವಾಕಿಂಗ್ ಹೆಚ್ಚು ಉತ್ತಮ. ಈ ಮೂಲಕ ಒತ್ತಡ ಕೂಡ ಕಡಿಮೆ ಮಾಡ ಬಹುದು ಎಂದು ಅವರು ಹೇಳಿದರು.

ಆಸ್ಪತ್ರೆಯ ತುರ್ತು ವೈದ್ಯಕೀಯ ಸಲಹೆಗಾರ ಡಾ.ಆಕಾಶ್ ಕಲ್ಲೂರೆ ಮತ್ತು ಅವರ ತಂಡವು ಬಿಎಲ್‌ಎಸ್ ಮತ್ತು ಸಿಪಿಆರ್‌ನ ಪ್ರಾಯೋಗಿಕ ತರಬೇತಿಯನ್ನು ನೀಡಿ, ಹೃದಯಾಘಾತ, ರಸ್ತೆ ಸಂಚಾರ ಅಪಘಾತಗಳು ಮತ್ತು ಪಾರ್ಶ್ವವಾಯುಗಳಂತಹ ವೈದ್ಯಕೀಯ ತುರ್ತು ಸಂದರ್ಭಗಳಲ್ಲಿ ತಕ್ಷಣದ ಪ್ರತಿಕ್ರಿಯೆಯ ನಿರ್ಣಾಯಕ ಪಾತ್ರದ ಕುರಿತು ಮಾತನಾಡಿದರು.

ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ಮಾರ್ಕೆಟಿಂಗ್ ವ್ಯವಸ್ಥಾಪಕ ಮೋಹನ್ ಶೆಟ್ಟಿ ಮಾತನಾಡಿ, ವಿಶ್ವ ಹೃದಯ ದಿನದ ಪ್ರಯುಕ್ತ ಆಸ್ಪತ್ರೆಯು ಪೊಲೀಸ್ ಸಿಬ್ಬಂದಿ, ಆಂಬ್ಯುಲೆನ್ಸ್ ಚಾಲಕರು, ಅಗ್ನಿಶಾಮಕ ದಳದ ಸಿಬ್ಬಂದಿ ಮತ್ತು ಮೆಸ್ಕಾಮ್ ಉದ್ಯೋಗಿಗಳು ಸೇರಿದಂತೆ ವಿವಿಧ ಸಾರ್ವಜನಿಕ ಸೇವಾನಿರತರಿಗೆ ಇದೇ ರೀತಿಯ ತರಬೇತಿಗಳನ್ನು ನಡೆಸುತ್ತಿದೆ ಎಂದು ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಜೀರ್ ಪೊಲ್ಯ, ಖಜಾಂಚಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಕಾರ್ಯದರ್ಶಿ ರಹೀಂ ಉಜಿರೆ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದ ಭಾಗವಾಗಿ ಪತ್ರಕರ್ತರಿಗೆ ಉಚಿತ ಬಿಪಿ ತಪಾಸಣೆ, ರಕ್ತ ಪರೀಕ್ಷೆ ಮತ್ತು ಇಸಿಜಿ ತಪಾಸಣೆಗಳನ್ನು ನಡೆಸಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X