ಕೊಡಗು | ಜನಪರ ಸೇವೆಗೆ ಒತ್ತು ನೀಡಲಾಗುವುದು : ಶಾಸಕ ಎ ಎಸ್ ಪೊನ್ನಣ್ಣ

Date:

Advertisements

ಕೊಡಗು ಜಿಲ್ಲೆ ಅಭಿವೃದ್ಧಿ, ಜನಪರ ಸೇವೆಗೆ ಒತ್ತು ನೀಡಲಾಗುವುದು ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್. ಪೊನ್ನಣ್ಣ ಮಾಹಿತಿ ನೀಡಿದ್ದಾರೆ.

ಮಡಿಕೇರಿ-ಭಾಗಮಂಡಲ, ಭಾಗಮಂಡಲ-ನಾಪೋಕ್ಲು-ವಿರಾಜಪೇಟೆ ರಸ್ತೆ ಸೇರಿದಂತೆ ಹಲವು ರಸ್ತೆಯು ಮಳೆಗೆ ಹಾನಿಯಾಗಿದ್ದು, ಮಳೆ ನಿಂತ ನಂತರ ಸರಿಪಡಿಸಲಾಗುವುದು. ಹೆಚ್ಚಿನ ಮಳೆಯಿಂದಾಗಿ ಹಾಗೂ ಇನ್ನೂ ಸಹ ಮಳೆ ಇರುವುದರಿಂದ ರಸ್ತೆ ಸರಿಪಡಿಸಲು ಸಾಧ್ಯವಾಗಿಲ್ಲ. ಮಳೆ ನಿಂತ ನಂತರ ಎಲ್ಲಾ ರಸ್ತೆಗಳನ್ನು ಸರಿಪಡಿಸಲಾಗುವುದು ಎಂದು ತಿಳಿಸಿದರು.

ಮಳೆಗಾಲದಲ್ಲಿಯೂ ಸಹ ಗುಂಡಿ ಮುಚ್ಚುವ ತಂತ್ರಜ್ಞಾನ ಇದ್ದಲ್ಲಿ ಗುಂಡಿ ಮುಚ್ಚಲಾಗುವುದು. ಜನರ ಟೀಕೆಗೆ ಸ್ಪಂದಿಸುವುದು ನಮ್ಮ ಕರ್ತವ್ಯವಾಗಿದೆ. ಈಗಾಗಲೇ, ಲೋಕೋಪಯೋಗಿ ಇಲಾಖೆ ವ್ಯಾಪ್ತಿಯಲ್ಲಿ ₹40 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಸರಿಪಡಿಸಲು ಟೆಂಡರ್ ಆಗಿದ್ದು, ಮುಖ್ಯಮಂತ್ರಿ ಅವರ ವಿಶೇಷ ಅನುದಾನದಡಿ ₹20 ಕೋಟಿ ರೂಪಾಯಿ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಿದರು.

₹155 ಕೋಟಿ ರೂಪಾಯಿ ವೆಚ್ಚದಲ್ಲಿ ಲೋಕೋಪಯೋಗಿ ಇಲಾಖೆ ವ್ಯಾಪ್ತಿಯ ರಸ್ತೆ ಸರಿಪಡಿಸಲಾಗುವುದು. ಈ ಬಗ್ಗೆ ಶ್ವೇತಪತ್ರ ಹೊರಡಿಸಲು ಸಿದ್ದ. ಕಳೆದ ಎರಡೂವರೆ ವರ್ಷದಲ್ಲಿ ಸರ್ಕಾರದಿಂದ ಎಷ್ಟು ಹಣ ತಂದಿದ್ದೇನೆ. ವರ್ಷವಾರು ಎಷ್ಟು ಹಣ ಅಭಿವೃದ್ಧಿ ಯೋಜನೆಗಳಿಗೆ ಎಂಬುದರ ಬಗ್ಗೆ ಮಾಹಿತಿ ನೀಡುವಂತಾಗಬೇಕು. ಪ್ರಜಾಪ್ರಭುತ್ವದಲ್ಲಿ ಪ್ರಬಲ ವಿರೋಧ ಪಕ್ಷ ಇರಬೇಕು. ಜೊತೆಗೆ ಪ್ರಶ್ನೆ ಮಾಡಬೇಕು. ಹಾಗೆಯೇ, ಪ್ರತಿ ಪಕ್ಷದವರು ಸಹ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು ಎಂದು ಹೇಳಿದರು.

131 ಕಿಲೋ ಮೀಟರ್ ರಸ್ತೆ ಸರಿಪಡಿಸುವ ಕಾರ್ಯ ನಡೆಯುತ್ತಿದೆ. ಕೊಡಗು ಜಿಲ್ಲೆ ಗುಡ್ಡಗಾಡು ಪ್ರದೇಶವಾಗಿದ್ದು, ಹೆಚ್ಚಿನ ಮಳೆಯಾಗುವುದರಿಂದ 3-4 ವರ್ಷಕ್ಕೆ ರಸ್ತೆಗಳು ಗುಂಡಿ ಬೀಳುತ್ತವೆ. ಸಿಮೆಂಟ್ ರಸ್ತೆ ನಿರ್ಮಾಣಕ್ಕೆ ಅವಕಾಶ ಕಡಿಮೆ ಇದೆ. ರಸ್ತೆ ಜೊತೆಗೆ ಇತರೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಬೇಕಿದೆ.

ವಿರಾಜಪೇಟೆಯ ಸರ್ಕಾರಿ ಆಸ್ಪತ್ರೆಯನ್ನು ಜಿಲ್ಲಾಸ್ಪತ್ರೆಯನ್ನಾಗಿ ಮೇಲ್ದರ್ಜೆಗೆ ಏರಿಸುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದೆ. ಆ ನಿಟ್ಟಿನಲ್ಲಿ 250 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಹಾಗೆಯೇ, ಗೋಣಿಕೊಪ್ಪದಲ್ಲಿ 30 ರಿಂದ 60 ಹಾಸಿಗೆಯ ಆಸ್ಪತ್ರೆ ನಿರ್ಮಾಣವಾಗಲಿದೆ. ಹುದಿಕೇರಿಯಲ್ಲಿ ₹30 ಕೋಟಿ ರೂಪಾಯಿ ವೆಚ್ಚದಲ್ಲಿ ಸಮುದಾಯ ಆರೋಗ್ಯ ಕೇಂದ್ರ ನಿರ್ಮಾಣವಾಗಲಿದೆ ಎಂದರು.

ವಿ.ಬಾಡಗದಲ್ಲಿ 11 ಎಕರೆ ಜಾಗದಲ್ಲಿ ‘ಕ್ರೀಡಾ ತರಬೇತಿ ಕೇಂದ್ರ’ ಆರಂಭಿಸಲು ಉದ್ದೇಶಿಸಲಾಗಿದೆ. ಆ ನಿಟ್ಟಿನಲ್ಲಿ ಸರ್ಕಾರದ ಹಂತದಲ್ಲಿ ಕೆಲಸಗಳು ನಡೆಯುತ್ತಿವೆ. ಕೊಡಗು ಜಿಲ್ಲೆಯಲ್ಲಿ ವಿದ್ಯುತ್ ಬಲವರ್ಧನೆಗೆ ₹208 ಕೋಟಿ ರೂಪಾಯಿ ಬಿಡುಗಡೆಯಾಗಿದೆ. ವಿದ್ಯುತ್ ಕಂಬ, ವಿದ್ಯುತ್ ಪರಿವರ್ತಕಗಳ ಬದಲಿಸುವ ಕೆಲಸಗಳು ನಡೆಯುತ್ತಿವೆ. ಗೋಣಿಕೊಪ್ಪದಲ್ಲಿ ಬಸ್ ನಿಲ್ದಾಣ, 14 ಹಾಡಿಗಳಿಗೆ ವಿದ್ಯುತ್‍ ಸಂಪರ್ಕ ಹಾಗೂ ಕುಡಿಯುವ ನೀರು ಪೂರೈಸಲಾಗಿದೆ ಎಂದರು.

ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ ಜಾತ್ರೆಗೆ ₹2 ಕೋಟಿ ರೂಪಾಯಿ ಮೀಸಲಿರಿಸಲಾಗಿದೆ. ದೇವಸ್ಥಾನ, ಮಸೀದಿ, ಚರ್ಚ್‍ಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ. ಮದೆನಾಡು ಗ್ರಾಮದಲ್ಲಿ 8 ಎಕರೆ ಭೂಮಿಯಲ್ಲಿ ಕೊಡಗು ಗೌಡ ಸಮಾಜ ಮಡಿಕೇರಿ ಇವರಿಗೆ ‘ಸಾಂಸ್ಕೃತಿಕ ಭವನ’ ನಿರ್ಮಾಣಕ್ಕೆ ಜಾಗ ನಿಗಧಿ ಮಾಡಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಿ : ಶಾಸಕ ಎ ಎಸ್ ಪೊನ್ನಣ್ಣ

ತಿತಿಮತಿ ಜೊತೆಗೆ ಮತ್ತೊಂದು ಕಡೆ ಮೊರಾರ್ಜಿ ದೇಸಾಯಿ ವಸತಿ ಶಾಲೆ ನಿರ್ಮಾಣಕ್ಕೆ ಕ್ರಮ, 6 ವಿದ್ಯುತ್ ಉಪ ಕೇಂದ್ರಗಳ ನಿರ್ಮಾಣ, ಶಿಕ್ಷಣ, ಆರೋಗ್ಯ, ಕ್ರೀಡೆ ಹೀಗೆ ಹಲವು ಜನಪರ ಸೇವೆ ಮಾಡಲಾಗುತ್ತಿದೆ. ಕಳೆದ ಎರಡೂವರೆ ವರ್ಷದಲ್ಲಿ 300 ರಿಂದ 400 ಜನರಿಗೆ ಉಚಿತ ಆರೋಗ್ಯ ಸೌಲಭ್ಯ ಕಲ್ಪಿಸಲಾಗಿದೆ. ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕರೆಸಿ 2000 ಹಕ್ಕುಪತ್ರ ನೀಡಲು ಉದ್ದೇಶಿಸಲಾಗಿದೆ. ಪ್ರಜಾಪ್ರಭುತ್ವದಲ್ಲಿ ಆರೋಗ್ಯಕರ ಚರ್ಚೆ ಇರಬೇಕು. ಬಡವರು ಮುಂದೆ ಬರಬೇಕು. ಸಮಗ್ರವಾದ ಅಭಿವೃದ್ಧಿ ಕಲ್ಪನೆ, ಜನತೆ ಸೇವೆಗೆ ಅವಕಾಶ ಸಿಕ್ಕಿದೆ. ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X