ತಾಳಿಕೋಟೆ | ತೊಗರಿ ಬೆಳೆ ಜಲಾವೃತ: ಸರ್ಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದಲ್ಲಿ ತೀವ್ರ ಹೋರಾಟದ ಎಚ್ಚರಿಕೆ

Date:

Advertisements

ಮಳೆ ಹೆಚ್ಚಾದ ಕಾರಣ ತೊಗರಿ ಬೆಳೆ ಜಲಾವೃತವಾಗಿದ್ದು, ಬಂದ ಹಾಳಾಗಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತ ರೈತರಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ಸರ್ಕಾರ ರೈತರ ನೆರವಿಗೆ ನಿಲ್ಲಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ರೈತ ಸಂಘದ ಅಶೋಕ ಗೌಡ ಪಾಟೀಲ ಹಾಗೂ ರಾಷ್ಟ್ರೀಯ ರೈತ ಸಂಘದ ರಾಜ್ಯ ಮಹಿಳಾ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ ನೇತೃತ್ವದಲ್ಲಿ ವಿಜಯಪುರ ಜಿಲ್ಲೆಯ ತಾಳಿಕೋಟಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

ಸಂಘದ ಅಧ್ಯಕ್ಷ ಅಶೋಕಗೌಡ ಪಾಟೀಲ ಮಾತನಾಡಿ, “ತೊಗರಿ ಬೆಳೆ ಮಳೆಗೆ ಹಾನಿಯಾಗಿ ರೈತರು ಸಂಕಷ್ಟದಲ್ಲಿ ಜೀವನ ದೂಡುವಂತಾಗಿದೆ. ಹತ್ತಿ ಬೆಳೆ ಮಳೆಗೆ ಸಿಲುಕಿ ತಾಮ್ರ ರೋಗ ಬಂದು ಕಾಂಡ ಕೊರೆವ ಕುಲದ ಬಾಧೆಯಿಂದ ಸಂಪೂರ್ಣ ಹೂವು, ಮೊಗ್ಗುಗಳು ಸಂಪೂರ್ಣ ನಾಶವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

ರಾಜ್ಯ ಪ್ರಧಾನ ಕಾರ್ಯದರ್ಶಿ ರೇಣುಕಾ ಪಾಟೀಲ ಮಾತನಾಡಿ, “ತಾಲೂಕಿನಾದ್ಯಂತ ಈರುಳ್ಳಿ, ಅಲಸಂದಿ, ಶೇಂಗಾ, ಗೋವಿನ ಜೋಳದ ತೆನೆ ಕಾಳುಗಟ್ಟುವ ಮೊದಲೇ ಕೊಳೆತು ಹಾಳಾಗಿದೆ. ರೈತರ ಸರ್ವ ಬೆಳೆಗಳೂ ಕೂಡ ಸಂಪೂರ್ಣವಾಗಿ ನಾಶವಾಗಿವೆ. ಹೆಸರು, ಉದ್ದು, ಅಲಸಂದೆ, ಶೇಂಗಾ ಬೆಳೆಗಳು ಅನಾವೃಷ್ಟಿ ಸಂಪೂರ್ಣ ಒಣಗಿತ್ತು, ಇದೀಗ ಅತಿವೃಷ್ಟಿಯಿಂದ ರೈತನ ಒಂದು ವರ್ಷದ ಸಂಪೂರ್ಣ ಬದುಕು ಹಾಳಾಗಿ ಹೋಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ತೇಲುತ್ತಿರುವ ಉತ್ತರ ಕರ್ನಾಟಕ; ಹಾರಾಡುತ್ತಿರುವ ಅಧಿಕಾರಸ್ಥರು

“ತೋಟಗಾರಿಕೆ ಬೆಳೆಯಾದ ಕಬ್ಬು, ದ್ರಾಕ್ಷಿ, ದಾಳಿಂಬೆ, ನಿಂಬೆ, ದಾಳಿಂಬೆ, ಚಿಕ್ಕೋ ಬೆಳೆಗಳು ಮಳೆಯ ನೀರಿನ ಪ್ರಮಾಣ ಜಾಸ್ತಿಯಾಗಿ ಈ ಎಲ್ಲಾ ಬೆಳೆಗಳು ನಾಶವಾಗಿವೆ. ಸರ್ಕಾರ ಸೂಕ್ತವಾದ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಬೃಹತ್ ಮಟ್ಟದ ಹೋರಾಟ ಕೈಗೊಳ್ಳಲಾಗುವುದು” ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ರಾಷ್ಟ್ರೀಯ ರೈತ ಸಂಘದ ಮುಖಂಡರುಗಳಾದ ಹಣಮಂತ ವಡ್ಡರ, ಮೆಹಬೂಬ ಮನಗೂಳಿ, ಸಂಪತ್ ಜಮಾದಾರ, ಶರಣು ಕೌದಿ, ವಿಜಯಕುಮಾರ ಉಕ್ಕಲಿ, ಸಂಗು ಹುಣಸಗಿ, ಸುಭಾಷ್ ಸಜ್ಜನ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X