ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿಗೆ ಗಡಿಪಾರು ಮಾಡಿ ಪುತ್ತೂರು ಸಹಾಯಕ ಆಯುಕ್ತರು ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿಗೆ ಗಡಿಪಾರು ಮಾಡಿ ಸೆಪ್ಟೆಂಬರ್ 18ರಂದು ಪುತ್ತೂರು ಸಹಾಯಕ ಆಯುಕ್ತೆ ಸ್ಟೆಲ್ಲಾ ವರ್ಗೀಸ್ ಹೊರಡಿಸಿರುವ ಆದೇಶ ಮಾಡಿದ್ದರು. ಈ ಆದೇಶ ಕಾನೂನು ಬಾಹಿರ ಮತ್ತು ಏಕಪಕ್ಷೀಯ ಕ್ರಮವಾಗಿದೆ. ತಮ್ಮ ಅಹವಾಲು ಆಲಿಸದೆ ಏಕಾಏಕಿ ಆದೇಶ ಹೊರಡಿಸಲಾಗಿದೆ. ಹಾಗಾಗಿ, ಗಡಿಪಾರು ಆದೇಶ ರದ್ದುಗೊಳಿಸಬೇಕು ಎಂದು ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದರು.
ಮಹೇಶ್ ಶೆಟ್ಟಿ ತಿಮರೋಡಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಸಿ ಎಂ ಪೂಣಚ್ಚ ಅವರ ರಜಾಕಾಲೀನ ಏಕಸದಸ್ಯ ಪೀಠ ಮಂಗಳವಾರ ವಿಚಾರಣೆ ನಡೆಸಿದ್ದು, ಅಕ್ಟೋಬರ್ 8ರವರೆಗೆ ಬಲವಂತದ ಕ್ರಮ ತೆಗೆದುಕೊಳ್ಳದಂತೆ ಸೂಚನೆ ನೀಡಿ,ಅ.9ಕ್ಕೆ ವಿಚಾರಣೆ ಮುಂದೂಡಿದೆ.
ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿಯಲ್ಲಿ ರಾಜ್ಯ ಗೃಹ ಇಲಾಖೆ, ಪುತ್ತೂರು ಸಹಾಯಕ ಆಯುಕ್ತರು, ಬಂಟ್ವಾಳ ಉಪ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಬೆಳ್ತಂಗಡಿ ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಅವರನ್ನು ಪ್ರತಿವಾದಿಯಾಗಿದ್ದಾರೆ.