ಧಾರವಾಡ | ನೀರು ಸರಬರಾಜು, ಒಳಚರಂಡಿ ಮಂಡಳಿ ಅಧ್ಯಕ್ಷೆಯಾಗಿ ಶಿವಲೀಲಾ ಕುಲಕರ್ಣಿ ಅಧಿಕಾರ ಸ್ವೀಕಾರ

Date:

Advertisements

ಬೆಂಗಳೂರಿನ ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಕಛೇರಿಯಲ್ಲಿ ಸೆ. 29ರಂದು ಮಂಡಳಿಯ ಅಧ್ಯಕ್ಷೆಯಾಗಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಪತ್ನಿ ಶಿವಲೀಲಾ ಕುಲಕರ್ಣಿ ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು.

ಅಧಿಕಾರ ವಹಿಸಿಕೊಂಡು ಮಾತನಾಡಿದ ಅವರು, ನಮ್ಮ ಕ್ಷೇತ್ರದ ಜನರ ಆಶಿರ್ವಾದದಿಂದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ವಿನಯ ಕುಲಕರ್ಣಿಯವರ ಪಕ್ಷದ ನಿಷ್ಠೆಯನ್ನು ಪರಿಗಣಿಸಿ ನನ್ನನ್ನು ಕರ್ನಾಟಕ ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿಯ ಅಧ್ಯಕ್ಷೆಯಾಗಿ ನಿಯುಕ್ತಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೂ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರವರಿಗೂ ಹಾಗೂ ಪಕ್ಷದ ಎಲ್ಲ ಮುಖಂಡರಿಗೂ ಧನ್ಯವಾದಗಳನ್ನು ಅರ್ಪಿಸಿದರು.

ಈ ಸಂಧರ್ಭದಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಶಾಸಕ ಎನ್ ಎಚ ಕೋನರಡ್ಡಿ, ವಿಧಾನ ಪರಿಷತ್ ಸದಸ್ಯರ ಸಲೀಮ ಅಹ್ಮದ, ಚನ್ನಗಿರಿ ಶಾಸಕರಾದರ ಬಸವರಾಜ ಶಿವಗಂಗಾ ಶುಭ ಹಾರೈಸಿದರು.

ಈಗಾಗಲೇ ಧಾರವಾಡ ಗ್ರಾಮೀಣ ವ್ಯಾಪ್ತಿಯ ಒಂಭತ್ತು ವಾರ್ಡುಗಳಿಗೆ ಒಳಚರಂಡಿ ಕಾಮಗಾರಿಗೆ 179 ಕೋಟಿ ಅನುದಾನ ನೀಡಿದ್ದು ಕರ್ನಾಟಕ ರಾಜ್ಯದ ವಿವಿದೆಡೆ ಕೂಡ ಅನುದಾನ ನೀಡಲಾಗಿದೆ. ಕಾಮಗಾರಿಗಳು ಚಾಲ್ತಯಲ್ಲಿವೆ. ಮುಂದಿನ ದಿನಗಳಲ್ಲಿ ಸಚಿವ ಭೈರತಿ ಸುರೇಶ’ರ ಹಾಗೂ ಮಾಜಿ ಅಧ್ಯಕ್ಷ ವಿನಯ ಕುಲಕರ್ಣಿಯವರ ಸಲಹೆ ಸೂಚನೆಯಂತೆ ಕಾರ್ಯನಿರ್ವಹಿಸುತ್ತೇನೆ. ನಗರ ಪ್ರದೇಶಗಳಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ ಸರಿಪಡಿಸುವ ನಿಟ್ಟಿನಲ್ಲಿ ಸದಾ ಶ್ರಮಿಸುತ್ತೇನೆ ಎಂದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಮಾಜಿ ಸೈನಿಕನ ಮೇಲೆ ಹಲ್ಲೆ ಪ್ರಕರಣ; ಇಬ್ಬರು ಪೊಲೀಸ್ ಅಧಿಕಾರಿಗಳ ಅಮಾನತು

ಈ ಸಂಧರ್ಭದಲ್ಲಿ ವನ್ಯಜೀವಿ ಮಂಡಳಿ ಸದಸ್ಯೆ ವೈಶಾಲಿ ಕುಲಕರ್ಣಿ, ದೀಪಾಲಿ ಕುಲಕರ್ಣಿ, ಹೇಮಂತ ಕುಲಕರ್ಣಿ, ಪಕ್ಷದ ಮುಖಂಡರು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X