ಮೋದಿ-ಅಮಿತ್ ಶಾ ರನ್ನು ಕತ್ತೆ ಕಾಯಲು ಬಿಜೆಪಿಗರು ಆಯ್ಕೆ‌ ಮಾಡಿದ್ದಾ: ಪ್ರಿಯಾಂಕ್ ಖರ್ಗೆ ಪ್ರಶ್ನೆ

Date:

Advertisements

ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಕತ್ತೆ ಕಾಯಲು ಬಿಜೆಪಿಗರು ಆಯ್ಕೆ ಮಾಡಿ ಕಳಿಸಿದ್ದಾರಾ? ಎಲ್ಲವನ್ನೂ ಮಲ್ಲಿಕಾರ್ಜುನ್ ಖರ್ಗೆ, ರಾಹುಲ್ ಗಾಂಧಿ ಅವರೇ ಪರಿಹಾರ ಮಾಡಲು ಆಗುತ್ತದಾ? ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಕಲಬುರಗಿ ವಿಮಾನ‌ ನಿಲ್ದಾಣಕ್ಕೆ ಆಗಮಿಸಿ, ವೈಮಾನಿಕ ಸಮೀಕ್ಷೆ ನಡೆಸುವ ಮುನ್ನ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.

“ಬಿಜೆಪಿಗರು ಮಾತು ಎತ್ತಿದರೆ ಸಾಕು ಮೋದಿ ವಿಶ್ವಗುರು, ಮಹಾನ್ ನಾಯಕ ಎಂದು ಕರೆಯುತ್ತಾರೆ. ದೇವರಂತ ಹೇಳುತ್ತಾರೆ. 12 ವರ್ಷಗಳಲ್ಲಿ ಕರ್ನಾಟಕಕ್ಕೆ ಅವರೇನು ಕೊಟ್ಟಿದ್ದಾರೆ, ಎಲ್ಲವೂ ವಿರೋಧ ಪಕ್ಷದವರೇ ಕೊಡಬೇಕಾ” ಎಂದು ಪ್ರಶ್ನಿಸಿದರು.

“ಕೇಂದ್ರ ಸರ್ಕಾರಕ್ಕೆ ಪರಿಹಾರ ಕೊಡಲು ಆಗದಿದ್ದರೆ ಕುರ್ಚಿ ಬಿಟ್ಟು ತೊಲಗಲಿ. ಪರಿಹಾರ ಘೋಷಣೆಗೆ ನಮಗೂ ಅಂಕಿ ಅಂಶಗಳು ಬೇಕಲ್ವಾ? ಸಮೀಕ್ಷೆ ಇಲ್ಲದೇ ಪರಿಹಾರ ಬಿಡುಗಡೆ ಮಾಡಲು ಆಗುತ್ತದಾ? ಜಂಟಿ ಸಮೀಕ್ಷೆ ಮುಗಿದ ಮೇಲೆ ಪರಿಹಾರ ಕೊಡುತ್ತೇವೆ” ಎಂದು ತಿಳಿಸಿದರು.

“ನಾನು ಮಂತ್ರಿ ಆದ ಮೇಲೆ ಬಿಜೆಪಿ ನಾಯಕರಿಗೆ ಕಲಬುರಗಿ ನೆನಪಾಗಿದೆ. ಬಿಜೆಪಿಗೆ ಎಷ್ಟು ಸೀಟು ಬಂದಿದೆ ಎಂಬುದನ್ನು ರಾಜ್ಯ ನೋಡಿದೆ. ಅವರಿಂದ ನಾವು ಆಡಳಿತದ ಪಾಠ ಕಲಿಯಬೇಕಿಲ್ಲ” ಎಂದು ಹರಿಹಾಯ್ದರು.

ಬಳಿಕ ಭೀಮಾ ಮತ್ತು ಕೃಷ್ಣಾ ನದಿ ಪ್ರವಾಹದಿಂದಾದ ಹಾನಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಯಲ್ಲಿ ಕುಳಿತು ವೈಮಾನಿಕ ಸಮೀಕ್ಷೆ ನಡೆಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X