ಶಿವಮೊಗ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಅ.02 ರಂದು ಮಹಾತ್ಮಾ ಗಾಂಧೀಜಿಯವರ 156 ನೇ ಜಯಂತಿಯನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 09 ಗಂಟೆಗೆ ಏರ್ಪಡಿಸಲಾಗಿದೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ನೆರವೇರಿಸುವರು.
ಅಧ್ಯಕ್ಷತೆಯನ್ನು ಶಿವಮೊಗ್ಗ ನಗರ ಕ್ಷೇತ್ರದ ವಿಧಾನಸಭಾ ಶಾಸಕರಾದ ಎಸ್.ಎನ್.ಚನ್ನಬಸಪ್ಪ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದರು, ವಿಧಾನಸಭಾ, ವಿಧಾನಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರಗಳ ಅಧ್ಯಕ್ಷರು/ಪದಾಧಿಕಾರಿಗಳು, ಜಿಲ್ಲಾಧಿಕಾರಿಗಳು, ಜಿ.ಪಂ ಸಿಇಓ, ಜಿಲ್ಲಾ ಪೊಲೀಸ್ ವರಿಷ್ಟಾದಿಕಾರಿಗಳು, ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿ, ಸಿಬ್ಬಂದಿಗಳು ಪಾಲ್ಗೊಳ್ಳುವರು.
ಕಾರ್ಯಕ್ರಮದಲ್ಲಿ ಸರ್ವಧರ್ಮ ಪ್ರಾರ್ಥನೆ, ಪ್ರಹ್ಲಾದ್ ದಿಕ್ಷೀತ್ ಮತ್ತು ಸಂಗಡಿಗರಿಂದ ಗಾಂಧಿ ಸ್ಮೃತಿ ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಶ್ರೀ ಡಿ.ಮಂಜುನಾಥ್‌ರವರಿಂದ ಮಹಾತ್ಮ ಗಾಂಧೀಜಿಯವರ ಜೀವನಾದರ್ಶಗಳು ಕುರಿತು ವಿಶೇಷ ಉಪನ್ಯಾಸ ಇರಲಿದೆ.
ಹಾಗೂ ಪ್ರೌಢಶಾಲೆ, ಪದವಿಪೂರ್ವ ಮತ್ತು ಪದವಿ/ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಏರ್ಪಡಿಸಲಾಗಿದ್ದ ಬಾಪೂಜಿ ಕುರಿತು ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ಮತ್ತು ಪ್ರಶಸ್ತಿ ಪತ್ರಗಳನ್ನು ವಿತರಿಸಲಾಗುವುದು ಎಂದು ವಾರ್ತಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.