ಉಡುಪಿ | ಅ-2 ಉಚ್ಚಿಲ ದಸರಾ ಶೋಭಾ ಯಾತ್ರೆ : ಸಂಚಾರ ಮಾರ್ಗ ಬದಲಾವಣೆ

Date:

Advertisements

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಆಯೋಜಿಸಿರುವ ಉಡುಪಿ-ಉಚ್ಚಿಲ ದಸರಾ 2025 ಪ್ರಯುಕ್ತ ಅ 2 ರಂದು ಬೃಹತ್ ಶೋಭಾಯತ್ರೆ ಮೆರವಣಿಗೆಯು ರಾಷ್ಟ್ರೀಯ ಹೆದ್ದಾರಿ-66 ರಲ್ಲಿ ಸಾಗಲಿರುವುದರಿಂದ ವಾಹನ ದಟ್ಟಣೆಯಾಗಿ ಸಂಚಾರ ತಡೆಯಾಗದಂತೆ ಸಾರ್ವಜನಿಕರಿಗೆ ಸುಗಮ ಸಂಚಾರ ವ್ಯವಸ್ಥೆಯನ್ನು ಒದಗಿಸುವ ದೃಷ್ಠಿಯಿಂದ ಈ ಕೆಳಕಂಡಂತೆ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

• ಉಡುಪಿ-ಮಂಗಳೂರು ಮಾರ್ಗವಾಗಿ ಬರುವ ಘನ ವಾಹನಗಳನ್ನು ಸಂಜೆ 5:00 ಗಂಟೆಯಿಂದ ರಾತ್ರಿ 9:00 ಗಂಟೆವರೆಗೆ ಬದಲಿ ಮಾರ್ಗವಾಗಿ ಕಟಪಾಡಿ -ಶಿರ್ವ- ಬೆಳ್ಮಣ್- ಪಡುಬಿದ್ರಿ ಮಾರ್ಗವಾಗಿ ಸಂಚರಿಸುವುದು.

• ಉಡುಪಿ ಕಡೆಯಿಂದ ಬಜ್ಪೆ ಏರ್‌ಪೋರ್ಟ್ ಹೋಗುವ ವಾಹನಗಳು ಕಟಪಾಡಿ-ಶಿರ್ವ-ಬೆಳ್ಮಣ್-ಮುಂಡ್ಕೂರು ಮಾರ್ಗವಾಗಿ ಸಂಚರಿಸುವುದು.

• ಟ್ರಕ್, ಲಾರಿ, ಟ್ಯಾಂಕರ್ ಮುಂತಾದ ಘನ ವಾಹನಗಳನ್ನು ರಾತ್ರಿ 9:00 ಗಂಟೆಯವರೆಗೆ ಕುಂದಾಪುರ, ಉಡುಪಿ ಕಡೆಗಳಲ್ಲಿ ಟ್ರಕ್‌ಬೇಯಲ್ಲಿ ನಿಲ್ಲಿಸಿ ನಂತರ ಸಂಚಾರ ಮುಂದುವರಿಸುವುದು.

• ಉಡುಪಿ ಯಿಂದ ಮಂಗಳೂರು ಮಾರ್ಗವಾಗಿ ಬೆಂಗಳೂರು ಸಂಚರಿಸುವ ರಾತ್ರಿ ಪ್ರಯಾಣಿಕ ಬಸ್ಸುಗಳು ರಾತ್ರಿ 9:00 ಗಂಟೆ ನಂತರ ಉಡುಪಿ ಯಿಂದ ಸಂಚರಿಸುವುದು.

• ಮಂಗಳೂರು-ಉಡುಪಿ ಮಾರ್ಗವಾಗಿ ಸಾಗುವ ಘನ ವಾಹನಗಳು ಸಂಜೆ 5:00 ರಿಂದ ರಾತ್ರಿ 10:00 ಗಂಟೆ ಗಂಟೆಯವರೆಗೆ ನಿರ್ಬಂಧಿಸಲಾಗಿದೆ.

ಈ ನಿಷೇಧವು ವಿಐಪಿ ವಾಹನ, ಸರಕಾರಿ ವಾಹನ ಮತ್ತು ಎಲ್ಲಾ ರೀತಿಯ ತುರ್ತು ಸೇವೆಯ ವಾಹನಗಳಿಗೆ ಅನ್ವಯಿಸುವುದಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X