ಪುತ್ತೂರು | ಪ್ರತಿ ಮನೆಯಲ್ಲೂ ವೃತ್ತಿಪರರ ಸೃಷ್ಟಿಸುವ ಧ್ಯೇಯ; ಅ.1ರಂದು ಕಟ್ಟತ್ತಾರಿನಲ್ಲಿ ‘ಫ್ಯೂಚರ್ ಫಸ್ಟ್’ ಕಾರ್ಯಕ್ರಮ

Date:

Advertisements

ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯ ವತಿಯಿಂದ ಪ್ರತಿಯೊಂದು ಮನೆಯಲ್ಲೂ ವೃತ್ತಿಪರರು ಎಂಬ ಧ್ಯೇಯದಡಿ ಅಕ್ಟೋಬರ್ 1ರಂದು ‘ಫ್ಯೂಚರ್ ಫಸ್ಟ್ 2025’ ಕಾರ್ಯಕ್ರಮವು ಪುತ್ತೂರು ತಾಲೂಕಿನ ಕಟ್ಟತ್ತಾರ್‌ನಲ್ಲಿ ಜರುಗಲಿದೆ.

ಈ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶೈಕ್ಷಣಿಕ ತರಬೇತುದಾರರಾದ ರಫೀಕ್ ಮಾಸ್ಟರ್ ಹಾಗೂ ಶಿಕ್ಷಕರಾದ ಅಬ್ದುಲ್ ರಝಾಕ್ ಮಾಸ್ಟರ್ ಅನಂತಾಡಿ ಭಾಗವಹಿಸಲಿದ್ದಾರೆ.

ಕಳೆದ ಆರು ವರ್ಷಗಳಿಂದ ಸಾಮಾಜಿಕ ಸೇವೆಗಳಲ್ಲಿ ತೊಡಗಿಸಿಕೊಂಡು ಹಲವಾರು ಜನರ ಜೀವನಕ್ಕೆ ಬೆಳಕಾಗಿ ಸೇವೆ ಸಲ್ಲಿಸುತ್ತಿರುವ ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯು, ಹೊಸ ಶೈಕ್ಷಣಿಕ ಯಾತ್ರೆಯ ಭಾಗವಾಗಿ ಈ ಕಾರ್ಯಕ್ರಮವನ್ನು ಆಯೋಜಿಸುತ್ತಿದೆ. ‘ಫ್ಯೂಚರ್ ಫಸ್ಟ್ 2025’ ಕಾರ್ಯಕ್ರಮವು ಒಂದು ದೀರ್ಘಕಾಲಿಕ ಯೋಜನೆಯಾಗಿದ್ದು, ಪ್ರತಿಯೊಂದು ಮನೆಯಲ್ಲೂ ವೃತ್ತಿಪರರನ್ನು ರೂಪಿಸುವ ಮಹತ್ವಾಕಾಂಕ್ಷೆಯನ್ನು ಸಮಸ್ತ ಗಲ್ಫ್ ಬ್ರದರ್ಸ್ ಸಂಸ್ಥೆಯು ಹೊಂದಿದೆ.

ಇಂದಿನ ಪರಿಸ್ಥಿತಿಯಲ್ಲಿ ಹಲವರು 8ನೇ, 9ನೇ, 10ನೇ ತರಗತಿಯಲ್ಲಿ ಶಿಕ್ಷಣವನ್ನು ನಿಲ್ಲಿಸುತ್ತಿದ್ದಾರೆ. ಮುಂದುವರಿದ ವಿದ್ಯಾರ್ಥಿಗಳಲ್ಲಿ 75% ಜನರಿಗೆ ತಮ್ಮ ಮುಂದಿನ ಶಿಕ್ಷಣದ ದಿಕ್ಕು ಸ್ಪಷ್ಟವಿಲ್ಲ. ಶಿಕ್ಷಣ ಪಡೆದವರಲ್ಲಿ ಬಹುಪಾಲು ಜನರು ತಮ್ಮ ಗುರಿಯನ್ನು ತಲುಪಲಾಗದೆ ತೊಂದರೆ ಅನುಭವಿಸುತ್ತಿದ್ದಾರೆ. ಈ ಅಂಕಿ-ಅಂಶಗಳು ನಮ್ಮ ಸಮಾಜದಲ್ಲಿ ಮಾರ್ಗದರ್ಶನದ ಕೊರತೆಯ ತೀವ್ರತೆಯನ್ನು ತೋರಿಸುತ್ತವೆ. ಇದನ್ನು ಹೋಗಲಾಡಿಸುವ ಸಲುವಾಗಿ ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

Download Eedina App Android / iOS

X