ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

Date:

Advertisements

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು, ಸಬ್‍ಜೈಲ್ ಸುತ್ತಲಿನ ಗುಲಗಂಜಿಕೊಪ್ಪ ಹತ್ತಿರದ ಪ್ರದೇಶಗಳಲ್ಲಿ ಮನೆಮನೆ ಸಮೀಕ್ಷೆಗೆ ತಾಂತ್ರಿಕ ಅಡಚಣೆ ಆಗಿದೆ.

ಸಬ್‍ಜೈಲ್‍ನಲ್ಲಿ ಜಾಮರ್ ಅಳವಡಿಸಿರುವುದರಿಂದ ಸಮೀಕ್ಷೆದಾರರಿಗೆ ನೆಟವರ್ಕ್ ಸಮಸ್ಯೆಯಾಗಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಭುವನೇಶ ಪಾಟೀಲ ನೇತೃತ್ವದಲ್ಲಿ ಹಿರಿಯ ಅಧಿಕಾರಿಗಳ ತಂಡ ಈ ಪ್ರದೇಶಕ್ಕೆ ಭೇಟಿ ಪರಿಶೀಲಿಸಿತು. ನೆಟವರ್ಕ ಸಮಸ್ಯೆ ಇರುವ ಪ್ರದೇಶಗಳ ಕುಟುಂಬಗಳಿಗೆ ಕುಮಾರೇಶ್ವರ ನಗರ ಹಾಗೂ ಕಮಲಾಪುರ ಭಾಗದಲ್ಲಿ ಕೇಂದ್ರ ಗುರುತಿಸಿ, ಅಭಿಯಾನದ (Camp moda) ರೀತಿಯಲ್ಲಿ ಸಮೀಕ್ಷೆ ಮಾಡಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಈ ಸಂದರ್ಭದಲ್ಲಿ ಪ್ರೋಬೆಷನರಿ ಐಎಎಸ್ ಅಧಿಕಾರಿ ರಿತೀಕಾ ವರ್ಮಾ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ಬಾನುಮತಿ ಎಚ್., ತಹಶೀಲ್ದಾರ್ ಡಾ. ಡಿ.ಎಚ್. ಹೂಗಾರ, ತಾಲೂಕು ಪಂಚಾಯತ ಇಓ ಗಂಗಾಧರ ಕಂದಕೂರ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಸಿಂದಗಿ, ರಾಮಕೃಷ್ಣ ಸದಲಗಿ, ಮಹಾನಗರ ಪಾಲಿಕೆ ವಲಯ 12 ರ ಸಹಾಯಕ ಆಯುಕ್ತ ಶಂಕರ ಪಾಟೀಲ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನಸ್ಪಂದನ, ಸೌಲಭ್ಯಗಳ ವಿತರಣೆಯ ತಾಣವಾಗಲಿ-ಎಸ್.ಎನ್.ಸುಬ್ಬಾರೆಡ್ಡಿ

ಬಾಗೇಪಲ್ಲಿ:ಕಳೆದ ಹಲವಾರು ವರ್ಷಗಳಿಂದ ಅತ್ಯಂತ ಯಶಸ್ವಿಯಾಗಿ ಮತ್ತು ಜನಸ್ನೇಹಿಯಾಗಿ ನಡೆಯುತ್ತಿರುವ ಜನಸ್ಪಂಧನ...

ಉಡುಪಿ | ಮೈಸೂರು ದಸರಾ ಮೆರವಣಿಗೆಯಲ್ಲಿ ಬಿರ್ತಿಯ ಅಂಕದಮನೆ ತಂಡದ “ಕಂಗೀಲು ನೃತ್ಯ” ಆಯ್ಕೆ

ಅಕ್ಟೋಬರ್ 2 ರಂದು ನಡೆಯುವ ಕರ್ನಾಟಕದ ನಾಡ ಹಬ್ಬ ವಿಶ್ವವಿಖ್ಯಾತ ಮೈಸೂರು...

ಹುಬ್ಬಳ್ಳಿ | ಮಹಾನಗರ ಪಾಲಿಕೆ ಕಲಾಪಕ್ಕೆ 18 ಮಾರ್ಷಲ್‌ಗಳ ನೇಮಕ

ಸಾಮಾನ್ಯವಾಗಿ ವಿಧಾನಸಭೆ ಕಲಾಪದಲ್ಲಿ ಮಾರ್ಷಲ್‌ಗಳು ಕಾರ್ಯನಿರ್ವಹಿಸುತ್ತಾರೆ. ಆ ಮಾದರಿಯಲ್ಲಿ ಇದೀಗ ಪ್ರಥಮ‌...

ರಾಜ್ಯದಲ್ಲಿ ಬೆಳೆ ಹಾನಿ | ಪ್ರತಿ ಹೆಕ್ಟೇರ್‌ಗೆ ಹೆಚ್ಚುವರಿ ₹8,500 ಪರಿಹಾರ : ಸಿಎಂ ಸಿದ್ದರಾಮಯ್ಯ

ಕಲ್ಯಾಣ ಕರ್ನಾಟಕ ಸೇರಿ ರಾಜ್ಯಾದ್ಯಂತ ಪ್ರಾಥಮಿಕ ಅಂದಾಜಿನ ಪ್ರಕಾರ ಇದುವರೆಗೆ ಸುಮಾರು...

Download Eedina App Android / iOS

X