ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

Date:

Advertisements

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಶಕ್ತಿ ಯೋಜನೆ’ಯು ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣವನ್ನು ಒದಗಿಸಿದೆ. ಆ ಮೂಲಕ ಅಂತಾರಾಷ್ಟ್ರೀಯ ದಾಖಲೆ ಬರೆದಿದೆ. ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ನ ‘ವರ್ಲ್ಡ್‌ ರೆಕಾರ್ಡ್‌ ಆಫ್‌ ಎಕ್ಸಲೆನ್ಸ್‌’ಗೆ ಸೇರ್ಪಡೆಯಾಗಿದೆ.

ಉಚಿತ ಬಸ್‌ ಪ್ರಯಾಣ ಒದಗಿಸುವುದು ರಾಜ್ಯದ ಮಹಿಳೆಯರ ಸಬಲೀಕರಣಕ್ಕೆ ಒಂದು ಪ್ರಮುಖ ಹೆಜ್ಜೆಯಾಗಲಿದೆ ಎಂದು ಕಾಂಗ್ರೆಸ್‌ ಹೇಳಿಕೊಂಡಿತ್ತು. ಅದರಂತೆ, ಶಕ್ತಿ ಯೋಜನೆಯನ್ನು 2023ರ ಜೂನ್ 11ರಂದು ಜಾರಿಗೊಳಿಸಲಾಗಿತ್ತು. ಅಂದಿನಿಂದ ಇಂದಿನವರೆಗೆ 500 ಕೋಟಿ (ಟಿಕೆಟ್‌) ಮಹಿಳಾ ಪ್ರಯಾಣಿಕರಿಗೆ ಉಚಿತ ಪ್ರಯಾಣ ಒದಗಿಸಲಾಗಿದೆ. ಈ ಮೈಲಿಗಲ್ಲನ್ನು ಸಾಧಿಸುವ ಮೂಲಕ ‘ವರ್ಲ್ಡ್‌ ರೆಕಾರ್ಡ್‌ ಆಫ್‌ ಎಕ್ಸಲೆನ್ಸ್‌’ನಲ್ಲಿ ಸ್ಥಾನಪಡೆದುಕೊಂಡಿದೆ.

ಈ ಲೇಖನ ಓದಿದ್ದೀರಾ?: ಕರ್ನಾಟಕದ ಮಹಿಳೆಯರಿಗೆ ಶಕ್ತಿ ತುಂಬಿವೆ 5 ಗ್ಯಾರಂಟಿಗಳು: ಹೊಸ ಅಧ್ಯಯನ ವರದಿ

‘ವರ್ಲ್ಡ್‌ ರೆಕಾರ್ಡ್‌ ಆಫ್‌ ಎಕ್ಸಲೆನ್ಸ್‌’ಗೆ ಶಕ್ತಿ ಯೋಜನೆ ಸೇರ್ಪಡೆಗೊಂಡ ಬಗ್ಗೆ ಪ್ರತಿಕ್ರಿಯಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, “ರಾಜ್ಯದ ಮಹಿಳೆಯರು ಆರ್ಥಿಕ, ‌ಸಾಮಾಜಿಕ‌ ಹಾಗೂ ಔದ್ಯೋಗಿಕವಾಗಿ ಸಬಲರಾಗಲು ಶಕ್ತಿ ಯೋಜನೆ ನೆರವಾಗಿದೆ. ಕರ್ನಾಟಕದಲ್ಲಿ ಯೋಜನೆ ಯಶಸ್ವಿಯಾದ ಬಳಿಕ, ದೇಶದ ವಿವಿಧ ರಾಜ್ಯಗಳಲ್ಲಿ ಯೋಜನೆಯನ್ನು ಅಲ್ಲಿನ ಸರ್ಕಾರಗಳು ಅನುಷ್ಠನಕ್ಕೆ ತರುತ್ತಿವೆ. ಈಗಾಗಲೇ, ಯೋಜನೆಯು ‘ಗೋಲ್ಡನ್ ಬುಕ್ ಆಫ್‌ ವರ್ಡ್‌ ರೆಕಾರ್ಡ್ಸ್‌’ನಲ್ಲಿ ಸ್ಥಾನ ಪಡೆದಿದೆ. ಈಗ, ಯೋಜನೆಗೆ ಮತ್ತೊಂದು ಗರಿ ದೊರೆತಿದೆ” ಎಂದು ಹೇಳಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X