ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

Date:

Advertisements

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ ನಡೆಸುವುದು ಹಾಸ್ಯಾಸ್ಪದವಾಗಿದೆ. ಬಿಜೆಪಿಯ ಈ ಆತ್ಮವಂಚನೆ ಪ್ರತಿಭಟನೆಗಳ ಅಗತ್ಯವಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

ತಮ್ಮ ʼಎಕ್ಸ್ʼ ಖಾತೆಯಲ್ಲಿ ಈ ಬಗ್ಗೆ ಅಂಕಿ ಅಂಶಗಳ ಸಹಿತ ಸುದೀರ್ಘವಾಗಿ ಬರೆದುಕೊಂಡಿರುವ ಅವರು, “ಬಿಜೆಪಿ ಆಡಳಿತಾವಧಿಯಲ್ಲಿ ಕಲಬುರಗಿ ಜಿಲ್ಲೆಗೆ ಒಂದೇ ಒಂದು ಮಂತ್ರಿ ಸ್ಥಾನವನ್ನೂ ಕೊಟ್ಟಿರಲಿಲ್ಲ. ಆಗ ಇದ್ದಂತಹ ಉಸ್ತುವಾರಿ ಮಂತ್ರಿಗಳು ಜಿಲ್ಲೆಯ ಕಡೆ ತಲೆಯನ್ನೇ ಹಾಕುತ್ತಿರಲಿಲ್ಲ. ಇಂತಹ ಬಿಜೆಪಿಗೆ ಇಂದು ನಮ್ಮ ಕಡೆ ಬೆರಳು ತೋರಿಸುವುದಕ್ಕೆ ಕನಿಷ್ಠ ನೈತಿಕತೆಯೂ ಇಲ್ಲ” ಎಂದು ಟೀಕಿಸಿದ್ದಾರೆ.

“ಕಲಬುರಗಿ ಜನರ ಸಂಕಷ್ಟದ ಬಗ್ಗೆ ಬಿಜೆಪಿ ಸರ್ಕಾರ ಹೇಗೆ ನಡೆದುಕೊಂಡಿತ್ತು ಎಂಬುದರ ಬಗ್ಗೆ ಅಂಕಿ ಅಂಶಗಳೇ ಮಾತನಾಡುತ್ತವೆ. ಜಿಲ್ಲೆಯ ರೈತರಿಗೆ ಯಾವ ಸರ್ಕಾರ ಎಷ್ಟು ಅನುಕೂಲ ಮಾಡಿಕೊಟ್ಟಿದೆ ಎನ್ನುವುದನ್ನು ನಾವು ಹೇಳುವುದು ಬೇಕಿಲ್ಲ, ಅಂಕಿ ಅಂಶಗಳೇ ಹೇಳುತ್ತವೆ. ಬಿಜೆಪಿ ಸರ್ಕಾರದ ಅವಧಿಯ ನಾಲ್ಕು ವರ್ಷಗಳಲ್ಲಿ ನೆರೆ, ಬರದ ವಿಷಯದಲ್ಲಿ ಬಿಜೆಪಿ ಪರಿಹಾರ ಒದಗಿಸಿಕೊಟ್ಟಿದ್ದು ನಗಣ್ಯ” ಎಂದಿದ್ದಾರೆ.

ಬಿಜೆಪಿ ಅವಧಿಯಲ್ಲಿ ರೈತರಿಗೆ ದೊರಕಿದ ಬೆಳೆ ವಿಮೆ ಪರಿಹಾರ

  • 2019 -20ನೇ ಸಾಲಿನಲ್ಲಿ 38,248 ರೈತರಿಗೆ ₹16.65 ಕೋಟಿ ಪರಿಹಾರ ಮಾತ್ರ.
  • 2020 – 21ನೇ ಸಾಲಿನಲ್ಲಿ 37,145 ರೈತರಿಗೆ ಕೇವಲ ₹22.97 ಕೋಟಿ ಪರಿಹಾರ ಮಾತ್ರ.
  • 2021 – 22ನೇ ಸಾಲಿನಲ್ಲಿ 66,234 ರೈತರಿಗೆ ₹57.95 ಕೋಟಿ ಪರಿಹಾರ ಮಾತ್ರ.
  • 2022 – 23ನೇ ಸಾಲಿನಲ್ಲಿ 1,88,600 ರೈತರಿಗೆ ಒದಗಿಸಿದ್ದು ₹108.6 ಕೋಟಿ ಪರಿಹಾರ ಮಾತ್ರ.
  • ನಾಲ್ಕು ವರ್ಷದಲ್ಲಿ ಒಟ್ಟು ₹206.17 ಕೋಟಿ ಪರಿಹಾರ ಮಾತ್ರ ನೀಡಲಾಗಿದೆ.

ನಮ್ಮ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಎರಡೇ ವರ್ಷದಲ್ಲಿ ಅತಿಹೆಚ್ಚು ಬೆಳೆವಿಮೆ ಪರಿಹಾರ ಒದಗಿಸುವಲ್ಲಿ ಯಶಸ್ವಿಯಾಗಿದೆ.

  • 2023-24ನೇ ಸಾಲಿನಲ್ಲಿ 1,59,622 ರೈತರಿಗೆ ₹189.40 ಕೋಟಿ ಪರಿಹಾರ ನೀಡಿದ್ದೇವೆ.
  • 2024-25ನೇ ಸಾಲಿನಲ್ಲಿ 2,03,746 ರೈತರಿಗೆ ₹656.63 ಕೋಟಿ ಪರಿಹಾರ ಒದಗಿಸಿದ್ದೇವೆ.
  • ಒಟ್ಟು 3,63,368 ರೈತರಿಗೆ ₹846.03 ಕೋಟಿ ಪರಿಹಾರವನ್ನು ಎರಡೇ ವರ್ಷದಲ್ಲಿ ಒದಗಿಸಿದ್ದೇವೆ.
  • ತೊಗರಿಯ ನೆಟೆ ರೋಗದ ಬಗ್ಗೆ ಬಿಜೆಪಿ ತಲೆ ಕೆಡಿಸಿಕೊಂಡಿರಲೇ ಇಲ್ಲ, ನಮ್ಮ ಸರ್ಕಾರವು 2023-24ನೇ ಸಾಲಿನಲ್ಲಿ 1,78,354 ರೈತರಿಗೆ ₹181.86 ಕೋಟಿ ನೆಟೆ ರೋಗದ ಪರಿಹಾರ ಒದಗಿಸಿದೆ.

ಹಾಗೆಯೇ, ಹೆಚ್ಚು ಇನ್‌ಪುಟ್ ಸಬ್ಸಿಡಿ ಒದಗಿಸಿಕೊಡುವ ಮೂಲಕ ರೈತರ ನೆರವಿಗೆ ನಿಂತಿದೆ ನಮ್ಮ ಸರ್ಕಾರ. ಎರಡು ವರ್ಷಗಳಲ್ಲಿ 3,49,555 ಮಂದಿ ರೈತರಿಗೆ ₹389.14 ಕೋಟಿ ಸಬ್ಸಿಡಿ ಒದಗಿಸಿದೆ. ಎರಡೇ ವರ್ಷದ ಅವಧಿಯಲ್ಲಿ ಒಟ್ಟು 8,91,277 ಮಂದಿ ರೈತರು ಫಲಾನುಭವಿಗಳಾಗಿದ್ದಾರೆ. ₹1,417.02 ಕೋಟಿ ಹಣ ರೈತರ ಕೈಸೇರಿದೆ.

ಈ ಸುದ್ದಿ ಓದಿದ್ದೀರಾ? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆಸ್ಪತ್ರೆಗೆ ದಾಖಲು

ಬಿಜೆಪಿ ಸರ್ಕಾರ ಕಲಬುರಗಿ ರೈತರಿಗೆ ನಾಲ್ಕು ವರ್ಷಗಳಲ್ಲಿ ಕೊಟ್ಟಿರುವ ಮೊತ್ತದ ಏಳು ಪಟ್ಟು ಹೆಚ್ಚು ಹಣವನ್ನು ನಮ್ಮ ಸರ್ಕಾರ ಎರಡೇ ವರ್ಷದಲ್ಲಿ ಒದಗಿಸಿದೆ ಎಂದು ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ.

“ಕಲಬುರಗಿಯಲ್ಲಿ ಈಗಾಗಲೇ ನೆರೆ ಪರಿಸ್ಥಿತಿ ಇದೆ. ಬಿಜೆಪಿಯವರ ನಕಲಿ, ಮೊಸಳೆ ಕಣ್ಣೀರಿನಿಂದ ಪ್ರವಾಹ ಹೆಚ್ಚಾಗಬಹುದು. ಹಾಗಾಗಿ ಅವರ ನಕಲಿ ಕಣ್ಣೀರು, ಆತ್ಮವಂಚಕತನದ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ” ಎಂದು ಸಚಿವ ಪ್ರಿಯಾಂಕ್ ಖರ್ಗೆ ಹರಿಹಾಯ್ದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NCRB report-2023 | ಹಲವು ಅಪರಾಧ ಕೃತ್ಯಗಳಲ್ಲಿ ಕರ್ನಾಟಕಕ್ಕೆ ಕುಖ್ಯಾತಿ

ಭಾರತದ ವಿವಿಧ ರಾಜ್ಯಗಳಲ್ಲಿ 2023ರಲ್ಲಿ ನಾನಾ ರೀತಿಯಲ್ಲಿ ನಡೆದಿರುವ ದಾಖಲಿತ ಅಪರಾಧ...

ಸಮಾಜದ ಅಸಮಾನತೆ ಹೋಗಲಾಡಿಸಲು ಸಮೀಕ್ಷೆ ಅಗತ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆಯಿದ್ದು, ಅದನ್ನು ಹೋಗಲಾಡಿಸಲು ಸಮೀಕ್ಷೆಯ ಅಂಕಿಅಂಶಗಳು ಅವಶ್ಯಕ. ಯಾವ ಜಾತಿಯ...

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X