ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ ಮುಂದಾಗಿದೆ. ಈ ನಿಟ್ಟಿನಲ್ಲಿ ಸುತ್ತಮುತ್ತಲಿನ ಗ್ರಾಮಗಳನ್ನು ನಗರ ಪಾಲಿಕೆ ವ್ಯಾಪ್ತಿಗೆ ಸೇರಿಸಿಕೊಳ್ಳುವ ಪ್ರಕ್ರಿಯೆಯನ್ನು ಜಿಲ್ಲಾಡಳಿತವು ಪ್ರಾರಂಭಿಸಿದೆ.
ತುಮಕೂರು ನಗರ ಪಾಲಿಕೆಗೆ ಒಟ್ಟು 14 ಗ್ರಾಮ ಪಂಚಾಯತ್ಗಳಿಗೆ ಸೇರಿದ 54 ಗ್ರಾಮಗಳನ್ನು ಸೇರ್ಪಡೆಗೊಳಿಸಲಾಗುತ್ತಿದೆ ಈ ಬಗ್ಗೆ ಸ್ವತಃ ಜಿಲ್ಲಾ ಉಸ್ತುವಾರಿ ಸಚಿವರಾದ ಜಿ. ಪರಮೇಶ್ವರ ಸ್ಪಷ್ಟನೆ ನೀಡಿದ್ದಾರೆ.
ಇತ್ತ ಶಿವಮೊಗ್ಗ ನಗರ ಪಾಲಿಕೆಯ ವಿಸ್ತರಣೆಗೂ ಇದೇ ರೀತಿಯ ಪ್ರಯತ್ನಗಳು ನಡೆಯುತ್ತಿವೆ.ಈ ಯೋಜನೆ ಅಡಿಯಲ್ಲಿ ನಗರದ ಸುತ್ತಮುತ್ತಲಿನ ಒಂಬತ್ತು ಗ್ರಾಮ ಪಂಚಾಯತ್ಗಳ 19 ಗ್ರಾಮಗಳನ್ನು ಪಾಲಿಕೆ ವ್ಯಾಪ್ತಿಗೆ ಸೇರಿಸಲು ಸಿದ್ಧತೆ ನಡೆದಿದೆ.
ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು, ವಿವರವಾದ ಪ್ರಸ್ತಾವನೆಯನ್ನು ಸಿದ್ಧಪಡಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ. ಗ್ರಾಮದ ಗ್ರಾಮೀಣ ಸ್ವರೂಪವನ್ನು ಕಳೆದುಕೊಂಡಿರುವ, ಕೃಷಿಯೇತರ ಚಟುವಟಿಕೆಗಳು ಹಾಗೂ ಆದಾಯ ಉತ್ಪಾದನೆ ಹೆಚ್ಚಿರುವ ಗ್ರಾಮಗಳನ್ನು ಪರಿಗಣಿಸಲು ಡಿಸಿ ಸೂಚನೆ ನೀಡಿದ್ದು, ಶೀಘ್ರದಲ್ಲೇ ಪ್ರಸ್ತಾವನೆಯನ್ನು ಅಂತಿಮಗೊಳಿಸಿ ಸರ್ಕಾರದ ಅನುಮೋದನೆಗೆ ಸಲ್ಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.