ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

Date:

Advertisements

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ. ಆದರೆ, ಪಕ್ಷದ ವರಿಷ್ಠರ ಆದೇಶದಂತೆ ಎಲ್ಲರೂ ನಡೆಯಬೇಕಿದೆ. ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಉತ್ಸವದಲ್ಲಿ ಸಿಎಂ ಆಗಿ ಪುಷ್ಪಾರ್ಚನೆ ಮಾಡುತ್ತೇನೆಂಬ ಭರವಸೆ ಇದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ದಸರಾವೇಳೆಗೆ ಮುಖ್ಯಮಂತ್ರಿಗಳು ಪುಷ್ಪಾರ್ಚನೆ ಮಾಡುವುದಿಲ್ಲ ಎಂದು ವಿಪಕ್ಷಗಳು ಭವಿಷ್ಯ ನುಡಿದಿದ್ದ ಬಗ್ಗೆ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ವಿರೋಧ ಪಕ್ಷಗಳು ನಾನು ಎರಡನೇ ಬಾರಿಗೆ ಮುಖ್ಯಮಂತ್ರಿಯಾಗುವುದು, ಬಜೆಟ್ ಮಂಡಿಸಿವುದು ಸಾಧ್ಯವಿಲ್ಲ ಎಂದಿದ್ದರು. ಆದರೂ ನಾನೇ ಎರಡನೇ ಬಾರಿಗೂ ಮುಖ್ಯಮಂತ್ರಿಯಾಗಿ ಮುಂದುವರೆದು ಬಜೆಟ್ ಮಂಡಿಸಿದೆ” ಎಂದರು.

“ಸಂವಿಧಾನದ ಬಗ್ಗೆ ಅರಿವಿಲ್ಲದವರೇ ದಸರಾ ಉದ್ಘಾಟಿಸುವವರ ಬಗ್ಗೆ ವಿರೋಧವನ್ನು ವ್ಯಕ್ತಪಡಿಸಿದವರಿಗೆ ಸುಪ್ರೀಂ ಕೋರ್ಟ್ ನಲ್ಲಿಯೂ ಛೀಮಾರಿ ಹಾಕಲಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ” ಎಂದು ಸಿದ್ದರಾಮಯ್ಯ ತಿಳಿಸಿದರು.

Advertisements

ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ

“ಮೈಸೂರು ದಸರಾಕ್ಕೆ ಈ ಬಾರಿ ಹೆಚ್ಚಿನ ಸಂಖ್ಯೆಯಲ್ಲಿ ಜನ ಆಗಮಿಸಲಿದ್ದಾರೆ. ದಸರಾದಲ್ಲಿ ಏರ್ ಶೋ, ದೀಪಾಲಂಕಾರ, ಡ್ರೋನ್ ಶೋ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಜನಪ್ರಿಯವಾಗಿದೆ. ಜನರು ಸಂತಸದಿಂದ ಪಾಲ್ಗೊಳ್ಳುವುದೇ ದಸರಾ ಉತ್ಸವ. ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರ, ವಸ್ತು ಪ್ರದರ್ಶನ ಪ್ರಾಧಿಕಾರ ಈಗಾಗಲೇ ಅಸ್ತಿತ್ವದಲ್ಲಿರುವುದರಿಂದ ದಸರಾ ಪ್ರಾಧಿಕಾರದ ಅವಶ್ಯಕತೆ ಇಲ್ಲ ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ” ಎಂದರು.

ಕರ್ನಾಟಕ ಜಾತ್ಯಾತೀತ ರಾಜ್ಯ

“ದಸರಾ ಉದ್ಘಾಟಕರ ಬಗ್ಗೆ ಬಿಜೆಪಿಯವರು ವಿರೋಧದ ಧ್ವನಿಯೆತ್ತಿದ್ದರು. ಕರ್ನಾಟಕ ಜಾತ್ಯಾತೀತ ರಾಜ್ಯವಾಗಿದ್ದು, ಸಂವಿಧಾನದ ಬಗ್ಗೆ ಅರಿವಿಲ್ಲದವರೇ ಇಂತಹ ವಿರೋಧವನ್ನು ವ್ಯಕ್ತಪಡಿಸುತ್ತಾರೆ. ಆದ್ದರಿಂದ ಸುಪ್ರೀಂ ಕೋರ್ಟ್ ನಲ್ಲಿಯೂ ಕೂಡ ವಿರೋಧಕ್ಕೆ ಛೀಮಾರಿಯಾಯಿತು. ದಸರಾ ಉತ್ಸವ ರಾಜಕೀಯದ ವಿಷಯವಲ್ಲ” ಎಂದರು.

ದಸರಾ ಉದ್ಘಾಟನೆ ಬಗ್ಗೆ ಜನರ ಪ್ರತಿಕ್ರಿಯೆ ಹೇಗಿತ್ತು ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ವರ್ಷಕ್ಕೊಮ್ಮೆ ನಡೆಯುವ ದಸರಾ ಉತ್ಸವದಲ್ಲಿ ಸಾರ್ವಜನಿಕರು, ವ್ಯಾಪಾರಸ್ಥರು ಸಂತೋಷದಿಂದ ಭಾಗವಹಿಸಿ ಸಂತಸ ವ್ಯಕ್ತಪಡಿಸಿದ್ದಾರೆ” ಎಂದರು.

ಸರ್ಕಾರಿ ನೌಕರರ ತುಟ್ಟಿಭತ್ಯೆ ಬಾಕಿಯಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, “ಕೇಂದ್ರ ಸರ್ಕಾರ ತುಟ್ಟಿಭತ್ಯೆ ನೀಡಿದ ನಂತರ ರಾಜ್ಯ ಸರ್ಕಾರವೂ ತನ್ನ ನೌಕರರಿಗೆ ತುಟ್ಟಿಭತ್ಯೆ ನೀಡುತ್ತದೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಬುಕ್‌ ಆಫ್‌ ರೆಕಾರ್ಡ್‌’ | ಶಕ್ತಿ ಪ್ರದರ್ಶಿಸಿದ ‘ಶಕ್ತಿ ಯೋಜನೆ’!

ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳು ರಾಜ್ಯದ ಜನರನ್ನು ಸೋಂಬೇರಿಗಳ್ಳಾನ್ನಾಗಿ...

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

Download Eedina App Android / iOS

X