ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

Date:

Advertisements

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು ಇಲ್ಲಿಯವರೆಗೂ ತರಗತಿಗಳು ಸರಿಯಾಗಿ ನಡೆಯದೆ ಇರುವುದರಿಂದ ವಿದ್ಯಾರ್ಥಿಗಳು ಸಾಕಷ್ಟು ಆತಂಕದಲ್ಲಿದ್ದಾರೆ. ಇದು ಅವರ ಶೈಕ್ಷಣಿಕ ಭವಿಷ್ಯವನ್ನು ಅತಂತ್ರವನ್ನಾಗಿಸಿದೆ. ಮುಂದಿನ ವಾರ ಪದವಿ ವಿದ್ಯಾರ್ಥಿಗಳ ಮೊದಲ ಆಂತರಿಕ ಪರೀಕ್ಷೆಗಳು ನಡೆಯಬೇಕಿದ್ದು, ತರಗತಿಗಳು ಸರಿಯಾಗಿ ನಡೆದಿಲ್ಲ. ಹಾಗಾಗಿ ಕೂಡಲೇ ದಾವಣಗೆರೆ ವಿಶ್ವವಿದ್ಯಾಲಯವು ಸೆಮಿಸ್ಟರ್ ಪರೀಕ್ಷೆಗಳನ್ನು ಮುಂದೂಡಬೇಕೆಂದು ಆಗ್ರಹಿಸಿದರು.‌ ನಂತರ ವಿಶ್ವವಿದ್ಯಾಲಯದ ಪರೀಕ್ಷಾಂಗ ಕುಲ ಸಚಿವರಿಗೆ ಎಐಡಿಎಸ್ಓ ನೇತೃತ್ವದಲ್ಲಿ ವಿದ್ಯಾರ್ಥಿಗಳ ನಿಯೋಗವು ಮನವಿ ಪತ್ರ ಸಲ್ಲಿಸಿತು.

ಈ ವೇಳೆ ಎಐಡಿಎಸ್ಓ ಜಿಲ್ಲಾಧ್ಯಕ್ಷೆ ಪೂಜಾ ನಂದಿಹಳ್ಳಿ  “ಸರ್ಕಾರವು ಹಿಂದಿನ ಶೈಕ್ಷಣಿಕ ವರ್ಷದ ಅತಿಥಿ ಉಪನ್ಯಾಸಕರನ್ನೇ ಮುಂದುವರಿಸುತ್ತೇವೆ ಎಂದು ಸುತ್ತೋಲೆಯನ್ನು ಹೊರಡಿಸಿದೆ. ಈ ನಿರ್ಧಾರ ಸ್ವಾಗತಿಸುತ್ತೇವೆ. ಆದರೆ ಪ್ರತಿ ವಿಷಯಕ್ಕೆ ಕನಿಷ್ಠ 30 ಗಂಟೆಗಳ ಪಾಠವಿಲ್ಲದೆ ಈಗಾಗಲೇ ಪರೀಕ್ಷೆಗಳನ್ನು ಘೋಷಿಸಿರುವುದು ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಆದ್ದರಿಂದ ದಾವಣಗೆರೆ ವಿಶ್ವವಿದ್ಯಾಲಯಕ್ಕೆ  ಪಾಠ ನಡೆಯದೆ ಪರೀಕ್ಷೆಗಳನ್ನು ನಡೆಸಬಾರದು ಎಂದು ಒತ್ತಾಯಿಸುತ್ತೆವೆ. ಸೆಮಿಸ್ಠರ್‌ ಪರೀಕ್ಷೆಗಳನ್ನು, ಪರೀಕ್ಷಾ ಶುಲ್ಕದ ಸುತ್ತೋಲೆಯನ್ನು, ಈ ಕೂಡಲೇ ಮುಂದೂಡಬೇಕು ಹಾಗೂ ಅದಕ್ಕನುಗುಣವಾಗಿ ಕಾಲೇಜಿನಲ್ಲಿಯೂ ಆಂತರಿಕ ಪರೀಕ್ಷೆಗಳನ್ನು ಮುಂದೂಡಬೇಕು” ಎಂದು ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.

WhatsApp Image 2025 10 01 at 12.30.55 PM 1
ದಾವಣಗೆರೆ ಜಯದೇವ ವೃತ್ತದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

“ವಿದ್ಯಾರ್ಥಿಗಳ ಹೋರಾಟದಿಂದ ಸರ್ಕಾರವು ಅತಿಥಿ ಉಪನ್ಯಾಸಕರನ್ನು ನೇಮಿಸುವುದಾಗಿ ಸುತ್ತೋಲೆ ಹೊರಡಿಸಿದೆ . ಇದು ವಿದ್ಯಾರ್ಥಿಗಳ ಅಭೂತಪೂರ್ವ ಜಯವಾಗಿದೆ. ಈಶ್ವರ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಪುಲೆ, ಕ್ರಾಂತಿಕಾರಿ ಭಗತ್ ಸಿಂಗ್, ನೇತಾಜಿಯವರ ಆದರ್ಶಗಳಿಂದ ಪ್ರೇರಿತರಾಗಿ ತಮ್ಮ ಶಿಕ್ಷಣದ ಹಕ್ಕನ್ನು ಕಾಪಾಡಿಕೊಳ್ಳಲು ವಿದ್ಯಾರ್ಥಿಗಳು ನಡೆಸಿದ ಹೋರಾಟಕ್ಕಿಂದು ಜಯ ದೊರೆತಿದೆ. ಹೋರಾಟದಿಂದ ಮಾತ್ರವೇ ಬದಲಾವಣೆ ಸಾಧ್ಯ ಎಂಬ ಸಂದೇಶವನ್ನು ಕರ್ನಾಟಕದ ವಿದ್ಯಾರ್ಥಿಗಳು ಈ ಮೂಲಕ ಎಲ್ಲೆಡೆ ಸಾರಿದ್ದಾರೆ” ಎಂದು ಅಭಿಪ್ರಾಯಪಟ್ಟರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸಲು ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಈ ಸಂದರ್ಭದಲ್ಲಿ ಎಐಡಿಎಸ್ಓ ಜಿಲ್ಲಾ ಕಾರ್ಯದರ್ಶಿ ಸುಮನ್ ಟಿ ಎಸ್, ಜಿಲ್ಲಾ ಸಂಘಟನಕಾರರಾದ ಎಚ್ ಡಿ ಗಂಗಾಧರ್, ಹಲವು ಕಾಲೇಜುಗಳ ವಿದ್ಯಾರ್ಥಿಗಳಾದ ಸಿದ್ದಿಕ್ ಅವರಗೆರೆ, ವಿಕಾಸ್ ಎಂ ಆರ್, ಗಂಗಾಧರ್ ಎನ್, ಪ್ರೇಮಾ, ವರಲಕ್ಷ್ಮಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಹಾಜರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿಗೆ ಜೀವ ಬೆದರಿಕೆ; ಮೋದಿ, ಶಾ ಮೌನ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ಬಿಜೆಪಿ ಮತ್ತು ಸಂಘಪರಿವಾರದ ವಿರುದ್ಧ ನಿರಂತರ ಧ್ವನಿ ಎತ್ತುತ್ತಿರುವ ಲೋಕಸಭೆಯ ವಿರೋಧ...

ಕಲಬುರಗಿ ರೈತರಿಗೆ ₹1417.02 ಕೋಟಿ ಪರಿಹಾರ, ಬಿಜೆಪಿಯಿಂದ ನಕಲಿ ಪ್ರತಿಭಟನೆ: ಪ್ರಿಯಾಂಕ್‌ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ʼಇಂಟರ್‌ನ್ಯಾಷನಲ್ ಬುಕ್ ಆಫ್ ರೆಕಾರ್ಡ್ಸ್’ಗೆ ʼಶಕ್ತಿ ಯೋಜನೆʼ ಸೇರ್ಪಡೆ

ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ ಯೋಜನೆ'ಯು...

Download Eedina App Android / iOS

X