ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

Date:

Advertisements

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ. ಈ ಬಗ್ಗೆ ಮಾತನಾಡುವುದು ಪಕ್ಷಕ್ಕೆ ಹಾನಿ ಮಾಡಿದಂತೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು.

ಕೆಪಿಸಿಸಿ ಕಚೇರಿಯಲ್ಲಿ ಗಾಂಧಿ ಜಯಂತಿ ಕಾರ್ಯಕ್ರಮದ ಬಳಿಕ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.

ಅಧಿಕಾರ ಹಂಚಿಕೆ ವಿಚಾರವಾಗಿ ಮತ್ತೆ ಚರ್ಚೆ ಆರಂಭವಾಗುತ್ತಿವೆ ಎಂದು ಕೇಳಿದಾಗ, “ಯಾವ ಅಧಿಕಾರ ಹಂಚಿಕೆ ವಿಚಾರ ಇಲ್ಲ. ಈ ಬಗ್ಗೆ ಯಾರಿಗೂ ಮಾತನಾಡುವ ಹಕ್ಕಿಲ್ಲ. ಶಾಸಕ ರಂಗನಾಥ್ ಸೇರಿದಂತೆ ಈ ವಿಚಾರವಾಗಿ ಯಾರೆಲ್ಲಾ ಮಾತನಾಡಿದ್ದಾರೋ ಅವರಿಗೆ ನೋಟಿಸ್ ನೀಡುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಜಿ.ಸಿ. ಚಂದ್ರಶೇಖರ್ ಅವರಿಗೆ ಸೂಚಿಸಿದ್ದೇನೆ. ಈ ವಿಚಾರವಾಗಿ ಚರ್ಚೆ ಮಾಡಬಾರದು ಎಂದು ಸ್ವತಃ ನಾನೇ ಹೇಳುತ್ತಿದ್ದೇನೆ. ನಿನ್ನೆ ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದ್ದರೂ ಕೆಲವು ಮಾಧ್ಯಮಗಳು ಬೇರೆ ರೀತಿ ಬರೆಯುತ್ತಿದ್ದಾರೆ. ಸಿದ್ದರಾಮಯ್ಯ ಅವರು ಹೇಳಿರುವ ಮಾತು ಅಂತಿಮ. ಅದರೆ ಮೇಲೆ ಈ ವಿಚಾರವಾಗಿ ಯಾರೂ ಚರ್ಚೆ ಮಾಡುವಂತಿಲ್ಲ” ಎಂದು ತಿಳಿಸಿದರು.

Advertisements

“ಯಾರು ಈ ವಿಚಾರವಾಗಿ ಚರ್ಚೆ ಮಾಡುತ್ತಾರೋ ಅವರು ಪಕ್ಷಕ್ಕೆ ಡ್ಯಾಮೇಜ್ ಮಾಡಿದಂತೆ. ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ, ನನ್ನ ಪರವಾಗಿ ಮಾತನಾಡಿದರೂ ಪಕ್ಷಕ್ಕೆ ಹಾನಿ ಮಾಡಿದಂತೆ” ಎಂದು ಕಿಡಿಕಾರಿದರು.

ಇದಕ್ಕೂ ಮುನ್ನ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಾ, “ಸರ್ಕಾರದಲ್ಲಿ ಅಧಿಕಾರ ಹಂಚಿಕೆ ವಿಚಾರವಾಗಿ ಚರ್ಚೆ ಮಾಡಿರುವ ಶಿವರಾಮೇಗೌಡ, ಶಾಸಕ ರಂಗನಾಥ್ ಅವರಿಗೂ ನೋಟೀಸ್ ನೀಡುವಂತೆ ನಿರ್ದೇಶನ ನೀಡಿದ್ದೇನೆ. ಈ ವಿಚಾರದಲ್ಲಿ ಮಾತನಾಡಿದರೆ ಜಿ.ಸಿ ಚಂದ್ರಶೇಖರ್ ಅವರಿಗೂ ನೋಟೀಸ್ ನೀಡುವಂತೆ ಹೇಳಿದ್ದೇನೆ. ನಮ್ಮಲ್ಲಿ ಶಿಸ್ತು ಇಲ್ಲವಾದರೆ ಪಕ್ಷ ಉಳಿಯುವುದಿಲ್ಲ” ಎಂದು ತಿಳಿಸಿದರು.

ಹೈಕಮಾಂಡ್ ನಿರ್ಧಾರವೇ ಅಂತಿಮವೇ ಎಂದು ಮತ್ತೆ ಕೇಳಿದಾಗ, “ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರಲ್ಲ. ಅವರ ಮಾತೇ ಅಂತಿಮ. ನಮಗೆ ಪಕ್ಷ ಮುಖ್ಯ. ಪಕ್ಷ ಹೇಳಿದಂತೆ ನಡೆಯುವ ಶಿಸ್ತಿನ ಸಿಪಾಯಿಗಳು ನಾವು” ಎಂದು ತಿಳಿಸಿದರು.

ಕಾಂಗ್ರೆಸ್ ನಲ್ಲಿ ನವೆಂಬರ್ ಕ್ರಾಂತಿ ಫಿಕ್ಸ್ ಆಗಿದೆ ಎಂದು ಬಿಜೆಪಿ ನಾಯಕರು ಹೇಳುತ್ತಿದ್ದಾರೆ ಎಂದು ಕೇಳಿದಾಗ, “ಬಿಜೆಪಿ ಪಕ್ಷದವರು ಅವರ ಪಕ್ಷದಲ್ಲಿನ ಕ್ರಾಂತಿ ಬಗ್ಗೆ ಚರ್ಚೆ ಮಾಡಿಕೊಳ್ಳಲಿ. ಅವರ ಆಂತರಿಕ ಸಮಸ್ಯೆ ಚರ್ಚೆ ಮಾಡಿ ಅವರ ಮನೆಯನ್ನು ಸರಿ ಮಾಡಿಕೊಳ್ಳಲಿ. ಅವರಿಗೆ ಅಗತ್ಯ ಸೂಜಿದಾರವನ್ನು ನಾನು ಕಳುಹಿಸಿಕೊಡುತ್ತೇನೆ. ಅವರು ತಮ್ಮ ಪಕ್ಷದ ಹರುಕುಗಳನ್ನು ಹೊಲಿದುಕೊಳ್ಳಲಿ” ಎಂದರು.

ಆ‌ರ್‌ಎಸ್ಎಸ್ ಶತಮಾನೋತ್ಸವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಗಣವೇಷಧಾರಿಗಳಾಗಿ ಕಾರ್ಯಕ್ರಮ ಮಾಡುತ್ತಿದ್ದಾರೆ ಎಂದು ಕೇಳಿದಾಗ, “ಅವರ ಪಕ್ಷದ ಕಾರ್ಯಕ್ರಮ ಅವರು ಮಾಡಿಕೊಳ್ಳಲಿ. ಆ ವಿಚಾರ ನನಗ್ಯಾಕೆ ಬೇಕು? ನಿಮಗೆ ಅದು ಬೇಕಾಗಿರಬಹುದು, ನಮಗೆ ಅದು ಬೇಡ. ನಮ್ಮ ಆಲೋಚನೆ ದೇಶ, ಸ್ವಾತಂತ್ರ್ಯ ವಿಚಾರ, ಗಾಂಧೀಜಿ ಅವರ ವಿಚಾರಧಾರೆಯಂತೆ ಈಶ್ವರ, ಅಲ್ಲಾ ತೇರೆ ನಾಮ್ ಎಂಬುದನ್ನು ನಾವು ಸ್ಮರಿಸುತ್ತೇವೆ. ಬಿಜೆಪಿಯವರು ಅಲ್ಲಾ ಎಂದು ಮಾತನಾಡುತ್ತಾರಾ? ಗಾಂಧೀಜಿ ಅವರ ಸಂದೇಶವನ್ನು ಬಿಜೆಪಿ ಪಾಲಿಸುತ್ತದೆಯೇ? ನಮ್ಮ ನಾಡಗೀತೆಯಲ್ಲೂ ಹಿಂದೂ, ಕ್ರೈಸ್ತ ಮುಸಲ್ಮಾನ, ಪಾರಸಿಕ ಜೈನರುದ್ಯಾನ ಎಂಬ ಸಾಲಿದೆ. ನಮ್ಮದು ಸರ್ವಜನಾಂಗದ ಶಾಂತಿಯ ತೋಟ ಎಂದು ಹೇಳಲಾಗಿದೆ. ಈ ಎಲ್ಲಾ ವಿಚಾರಧಾರೆಗಳನ್ನು ಸೇರಿಸಿ ಈ ದೇಶದ ಅಡಿಪಾಯ ನಿರ್ಮಾಣದ ಮಾಡಲಾಗಿದೆ. ಇವುಗಳಿಂದ ಬಿಜೆಪಿಯವರು ತಪ್ಪಿಸಿಕೊಳ್ಳಲು ಆಗುವುದಿಲ್ಲ. ಅದರಲ್ಲೇ ಅವರು ಜೀವನ ಮಾಡಬೇಕು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

ರಸ್ತೆಗುಂಡಿ ಬಗ್ಗೆ ಸಾರ್ವಜನಿಕರು ಮಾಹಿತಿ‌ ನೀಡುವ ವ್ಯವಸ್ಥೆ ರಾಜ್ಯದಲ್ಲಿ ಮಾತ್ರ: ಡಿಸಿಎಂ ಡಿ ಕೆ ಶಿವಕುಮಾರ್

ರಸ್ತೆಗುಂಡಿಗಳನ್ನು ಸಾರ್ವಜನಿಕಕರು ಗಮನಿಸಿ ಸರ್ಕಾರಕ್ಕೆ ತಿಳಿಸುವ ವ್ಯವಸ್ಥೆ ಇಡೀ ದೇಶದಲ್ಲಿ ಎಲ್ಲಾದರೂ...

Download Eedina App Android / iOS

X