ಮೈಸೂರು ದಸರಾ | ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಚಾಲನೆ

Date:

Advertisements

ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗೆ ಸಿಎಂ ಸಿದ್ದರಾಮಯ್ಯ ಅಧಿಕೃತ ಚಾಲನೆ ನೀಡಿದರು.

ಕ್ಯಾಪ್ಟನ್ ಅಭಿಮನ್ಯು ಹೊತ್ತಿರುವ 750 ಕೆಜಿ ತೂಕದ ಅಂಬಾರಿಯಲ್ಲಿ ವಿರಾಜಮಾನರಾದ ತಾಯಿ ಚಾಮುಂಡೇಶ್ವರಿಗೆ ಶುಭಕುಂಭ ಲಗ್ನದಲ್ಲಿ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಿದರು.  ಈ ಮೂಲಕ 8ನೇ ಬಾರಿಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಿ ಅತಿಹೆಚ್ಚು ಬಾರಿ ಚಾಲನೆ ನೀಡಿದ ಖ್ಯಾತಿಗೆ ಪಾತ್ರರಾಗಿದ್ದಾರೆ.

ಇನ್ನು ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ರಾಜವಂಶಸ್ಥ ಹಾಗೂ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಚಿವ ಶಿವರಾಜ್ ತಂಗಡಗಿ, ಡಿಸಿ ಲಕ್ಷ್ಮೀಕಾಂತ ರೆಡ್ಡಿ, ಮೈಸೂರು ಪೊಲೀಸ್ ಆಯುಕ್ತೆ ಸೀಮಾಲಾಟ್ಕರ್ ಪುಷ್ಪಾರ್ಚನೆ ಮಾಡಿದರು.

Advertisements

ಚಿನ್ನದ ಅಂಬಾರಿ ಹೊತ್ತು ಕ್ಯಾಪ್ಟನ್ ಅಭಿಮನ್ಯು ಬನ್ನಿಮಂಟಪದವರೆಗೆ ಸುಮಾರು 5.3 ಕಿ. ಮೀ ಹೆಜ್ಜೆ ಹಾಕುತ್ತಿದ್ದಾನೆ. ಅಭಿಮನ್ಯುಗೆ ಕುಮ್ಕಿ ಆನೆಗಳಾಗಿ ಕಾವೇರಿ ಮತ್ತು ರೂಪಾ ಸಾಥ್ ನೀಡಿವೆ. ಜಂಬೂ ಸವಾರಿ ವೀಕ್ಷಣೆಗಾಗಿ ಅಂಬಾವಿಲಾಸ ಅರಮನೆ ಮುಂಭಾಗದಲ್ಲಿ ಮೈಸೂರು ಜಿಲ್ಲಾಡಳಿತದ ವತಿಯಿಂದ ಸುಮಾರು 45 ಸಾವಿರ ಮಂದಿಗೆ ಆಸನದ ವ್ಯವಸ್ಥೆ ಮಾಡಲಾಗಿದೆ. ಪಂಜಿನ ಕವಾಯತಿನ ಮೂಲಕ ಮೈಸೂರು ದಸರಾದ ಆಕರ್ಷಣೆ ಜಂಬೂ ಸವಾರಿಗೆ ಅಧಿಕೃತ ತೆರೆ ಬೀಳಲಿದೆ.

ಜಂಬೂ ಸವಾರಿ ಮೆರವಣಿಗೆಗೆ ಆಕರ್ಷಕ ಸ್ತಬ್ಧ ಚಿತ್ರಗಳು ಹಾಗೂ ಕಲಾತಂಡಗಳು ಸಾಥ್​ ನೀಡಿದ್ದು ಈ ಮೂಲಕ ಮೆರವಣಿಗೆಯನ್ನು ಮತ್ತಷ್ಟು ಮೆರುಗುಗೊಳಿಸಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಗೆ ಇತಿಹಾಸಕಾರ ರಾಮಚಂದ್ರ ಗುಹಾ ಆಯ್ಕೆ

ಪ್ರಸಿದ್ಧ ಭಾರತೀಯ ಇತಿಹಾಸಕಾರ, ಅಂಕಣಕಾರ ಹಾಗೂ ಚಿಂತಕ ಡಾ.ರಾಮಚಂದ್ರ ಗುಹಾ ಅವರನ್ನು...

ಮುಂದಿನ ವರ್ಷಗಳಲ್ಲಿಯೂ ನಾನೇ ದಸರಾ ಪುಷ್ಪಾರ್ಚನೆ ಮಾಡುವೆ: ಸಿಎಂ ಸಿದ್ದರಾಮಯ್ಯ

ವಿರೋಧಪಕ್ಷಗಳು ಭವಿಷ್ಯಕಾರರಲ್ಲ. ವಸ್ತುಸ್ಥಿತಿಯ ಬಗ್ಗೆ ಅರಿವಿಲ್ಲದೇ ಮಾತನಾಡುವ ವಿಪಕ್ಷಗಳ ಭವಿಷ್ಯ ನಿಜವಾಗುವುದಿಲ್ಲ....

ಗುಮಾನಿ ಹುಟ್ಟುಹಾಕಿದ ‘ವಿಲ್’; ‘ಕೊನೆಗಾಲದಲ್ಲಿ ಭೈರಪ್ಪ ಖಾತೆಯಿಂದ ದುಡ್ಡು ದೋಚಿದ್ದು ಯಾರು?’

"ಭೈರಪ್ಪನವರ ಉಯಿಲು (ವಿಲ್) ನೋಡುತ್ತಿದ್ದರೆ ಎಲ್ಲ ಪ್ಲ್ಯಾನ್ ಮಾಡಿ ಬರೆಸಿರುವಂತಿದೆ ಎಂದು...

Download Eedina App Android / iOS

X