ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

Date:

Advertisements

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ ಶೋಭೆಯಲ್ಲ. ಕೂಡಲೇ ಪ್ರಧಾನಿ ನರೇಂದ್ರ ಮೋದಿ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ ಆರ್‌ಎಸ್‌ಎಸ್‌ ಸಂಘಟನೆಯ ಪ್ರಚಾರ ಪ್ರಮುಖ್ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಆಗ್ರಹಿಸಿದ್ದಾರೆ.

“ಆರ್‌ಎಸ್‌ಎಸ್‌ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ನೂರು ವರ್ಷದ ನೆನಪಿಗೆ ಅಂಚೆ ಚೀಟಿ ಹಾಗೂ ನಾಣ್ಯ ಬಿಡುಗಡೆ ಮಾಡಿರುವುದು ಸಂವಿಧಾನಕ್ಕೆ ಬಗೆದ ದ್ರೋಹ ಹಾಗೂ ಇತಿಹಾಸಕ್ಕೆ ಮಾಡಿದ ಅಪಚಾರ” ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

“ಸ್ವತಂತ್ರ ಚಳುವಳಿಯ ವಿರೋಧಿಯಾಗಿದ್ದ ಆರ್‌ಎಸ್‌ಎಸ್‌ ಸಂವಿಧಾನ ವಿರೋಧಿ ಚಟುವಟಿಕೆಯಲ್ಲಿ ನೂರುವರ್ಷದಿಂದಲೂ ಸಕ್ರೀಯವಾಗಿ ತೊಡಗಿಸಿಕೊಂಡಿದೆ. ದೇಶದ ಸೌಹಾರ್ದತೆ, ಐಕ್ಯತೆ, ಪ್ರಜಾಪ್ರಭುತ್ವ ಹಾಗೂ ಜಾತ್ಯಾತೀತ ಆಶಯಗಳಿಗೆ ಸಂಘಪರಿವಾರ ಮಾಡಿರುವ ಗಾಯಗಳಿಗೆ ಲೆಕ್ಕವಿಲ್ಲ. ಭಾರತದ ಸಂವಿಧಾನದ ಬದಲು ಮನುಸ್ಮೃತಿಯನ್ನು ಜಾರಿ ಮಾಡಲು ಹೊರಟಿರುವ ಮನುವಾದಿ ಸಂಘಟನೆಯನ್ನು ಪ್ರಧಾನಿ ಹುದ್ದೆಯಲ್ಲಿದ್ದು ಪ್ರಚಾರ ನಡೆಸುವುದು ಅಕ್ಷಮ್ಯ” ಎಂದು ಟೀಕಿಸಿದ್ದಾರೆ.

Advertisements

“ಕೋಮುದ್ವೇಷ,ಕೊಲೆ,ಪಿತೂರಿ,ಸಮಾಜದ ಸ್ವಾಸ್ಥ್ಯವನ್ನೇ ಹಾಳುಗೆಡವುತ್ತಿರುವ ಸಂಘಟನೆಯ ಶತಮಾನೋತ್ಸದಲ್ಲಿ ಅಂಚೆ ಹಾಗೂ ನಾಣ್ಯ ಬಿಡುಗಡೆ ಮಾಡಿದ್ದು ಯಾವ ಪುರುಷಾರ್ಥಕ್ಕಾಗಿ? 1963ರಲ್ಲಿ ಗಣರಾಜ್ಯೋತ್ಸವದಲ್ಲಿ ಭಾಗವಹಿಸಿರುವ ಸಂಘದ ಚಿತ್ರವನ್ನು ಅಂಚೆಯಲ್ಲಿ ಹಾಕಿರುವುದು ಇತಿಹಾಸದ ವ್ಯಂಗ್ಯ, ಸಂಘ ಸುಳ್ಳನ್ನೇ ಸತ್ಯವನ್ನಾಗಿಸುವ ವ್ಯರ್ಥ ಪ್ರಯತ್ನವಷ್ಟೇ” ಎಂದಿದ್ದಾರೆ.

“ನಾಣ್ಯದಲ್ಲಿ ಆರ್.ಎಸ್.ಎಸ್.ಪ್ರತಿಪಾದಿಸುವ ಭಾಗವಧ್ವಜವನ್ನು ಸೇರಿಸುವ ಮೂಲಕ ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತವನ್ನು ಅವಮಾನಿಸಿದೆ. ಇಂತಹ ಕೃತ್ಯಗಳನ್ನ ಬಲವಾಗಿ ಖಂಡಿಸಿ, ಸಂವಿಧಾನ ವಿರೋಧಿ ಶಕ್ತಿಗಳನ್ನು ಮಟ್ಟ ಹಾಕಬೇಕಿದೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X