ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನದಾಟ ಅಂತ್ಯವಾಗಿದೆ. ದೈತ್ಯ ವಿಂಡೀಸ್ ವಿರುದ್ಧ ಭಾರತ ಸಂಪೂರ್ಣ ಮೇಲುಗೈ ಸಾಧಿಸಿದೆ.
ಗುಜರಾತ್‌ನ ಅಹ್ಮದಾಬಾದ್‌ನಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ್ದ ವಿಂಡೀಸ್ ತಂಡ ಭಾರತದ ಮಾರಕ ಬೌಲಿಂಗ್ ಮುಂದೆ ಮಂಡಿಯೂರಿ, ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 162 ರನ್ನ್ ಗಳಿಸಿ, ತನ್ನ ಎಲ್ಲ ವಿಕೇಟ್‌ಗಳನ್ನು ಕಳೆದುಕೊಂಡಿತು.
ಇದಕ್ಕೆ ಉತ್ತರವಾಗಿ ಮೊದಲ ಇನ್ನಿಂಗ್ಸ್ ಆರಂಭಿಸಿರುವ ಭಾರತ ಮೊದಲ ದಿನದಾಟದ ಅಂತ್ಯಕ್ಕೆ 2 ವಿಕೆಟ್ ನಷ್ಟಕ್ಕೆ 121 ರನ್ ಕಲೆಹಾಕಿದೆ. ಭಾರತದ ಪರ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ 36 ರನ್ ಗಳಿಸಿ ಔಟಾದರೆ, ಸಾಯಿ ಸುದರ್ಶನ್ ಕೇವಲ 7 ರನ್ ಗಳಿಸಿ ಔಟಾಗಿ ಮತ್ತೆ ನಿರಾಶೆ ಮೂಡಿಸಿದರು. ವಿಂಡೀಸ್ ಪರ ನಾಯಕ ರೋಸ್ಟನ್ ಚೇಸ್ ಮತ್ತು ಜೇಡನ್ ಸೀಲ್ಸ್ ತಲಾ 1 ವಿಕೆಟ್ ಪಡೆದಿದ್ದಾರೆ.
ತಾಳ್ಮೆಯ ಆಟ ಮುಂದುವರೆಸಿರುವ ಕನ್ನಡಿಗ ಕೆ ಎಲ್ ರಾಹುಲ್ (53 ರನ್) ಅರ್ಧಶತಕ ಗಳಿಸಿದ್ದಾರೆ. ಅವರಿಗೆ ಉತ್ತಮ ಸಾಥ್ ನೀಡಿರುವ ನಾಯಕ ಶುಭ್ ಮನ್ ಗಿಲ್ 18 ರನ್ ಗಳಿಸಿ ಅಜೇಯರಾಗಿ 2ನೇ ದಿನಕ್ಕೆ ಕ್ರೀಸ್ ಕಾಯ್ದುಕೊಂಡಿದ್ದಾರೆ.