ದಾವಣಗೆರೆ | ಜಾತಿ ಧರ್ಮ ಭಾಷೆಗಳ ಸಂಘರ್ಷ ತಡೆಗೆ ಗಾಂಧೀಜಿ ದಾರಿ ಮುಖ್ಯ: ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ

Date:

Advertisements

ʼʼಜಾತಿ,ಧರ್ಮಗಳ, ಮಧ್ಯೆ, ಭಾಷೆ ಮತ್ತು ಪ್ರದೇಶಗಳ ಮಧ್ಯೆ ವೈಷಮ್ಯ ಮಾಡಿಕೊಂಡು ಸಂಘರ್ಷ ಉಂಟು ಮಾಡಿಕೊಳ್ಳುತ್ತಿದ್ದೇವೆ. ಇದನ್ನು ತಡೆಗಟ್ಟಲು ಗಾಂಧೀಜಿಯ ದಾರಿಯಲ್ಲಿ ಸಾಗಬೇಕಾಗಿದೆʼʼ ಎಂದು ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರ ಸ್ವಾಮಿ ಜಿ.ಎಂ ಅಭಿಪ್ರಾಯಪಟ್ಟರು.

ದಾವಣಗೆರೆಯಲ್ಲಿ ಶ್ರೀರಾಮನಗರದ ಗಾಂಧೀ ಭವನದಲ್ಲಿ  ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ  ಆಯೊಜಿಸಿದ್ದ  ʼʼರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್  ಶಾಸ್ತ್ರೀʼʼ ಯವರ ಜಯಂತಿ ಕಾರ್ಯಕ್ರಮದಲ್ಲಿ ಗಾಂಧಿ ಮತ್ತು ಶಾಸ್ತ್ರೀಜಿಯವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು ʼʼದೇವನೊಬ್ಬ ನಾಮ ಹಲವು ಎಂದು ಗಾಂಧೀಜಿ ಮತ್ತು ಲಾಲ್ ಬಹದ್ದೂರು ಶಾಸ್ತ್ರಿಗಳು ತಿಳಿಸಿದ್ದರು. ಗಾಂಧೀಜಿಯವರ ಯಶಸ್ಸು ಏನೆಂದರೆ ಬೇರೆಯವರು ನಿಮ್ಮನ್ನು ನಿರ್ಲಕ್ಷಿಸುತ್ತಾರೆ. ನಂತರ ನೀವು ಮಾಡುವಂತಹ ಕೆಲಸಗಳನ್ನು ನೋಡಿ ನಗುತ್ತಾರೆ. ನಂತರ  ನಿಮ್ಮ ವಿರುದ್ಧ ಹೋರಾಟ ಮಾಡುತ್ತಾರೆ. ಕೊನೆಗೆ ನಾವೇ ಗೆಲ್ಲುತ್ತೇವೆ. ಆಗ ನಾವು ಎದೆ ಗುಂದಬಾರದು ಎಂಬುದು ಗಾಂಧಿಯವರ ನಂಬಿಕೆಯಾಗಿತ್ತು. ನಾವು ಮಹಿಳೆಯರಿಗೆ ದೊಡ್ಡ ಗೌರವವನ್ನು ಕೊಡುತ್ತೇವೆ, ಕಾರಣ ತಾಯಿ ಹೃದಯ ತ್ಯಾಗಮಹಿಯಾಗಿದ್ದಾಳೆ. ಹೀಗಾಗಿ ನಾವು ಭಾರತಾಂಬೆ ಮಕ್ಕಳುʼʼ  ಎಂದು ತಿಳಿಯಬೇಕಾಗಿದೆ ಎಂದರು.

 ʼʼಪ್ರಪಂಚದ ಹಲವು ದೇಶಗಳಲ್ಲಿ ಗಾಂಧಿ ಪ್ರತಿಮೆ ಇದೆ. ಕಾರಣ ಅವರು ಕಲಿಸಿದಂತಹ ಸತ್ಯ, ಅಹಿಂಸೆ, ಸರಳತೆ ಇದು ನಮಗೆಲ್ಲರಿಗೂ ನೀಡಿದಂತಹ ಶಾಂತಿ ಸಂದೇಶ ನಮಗೆ ಆದರ್ಶ ಮಾರ್ಗವಾಗಿದೆʼʼ ಎಂದರು.

ಚರಕವನ್ನು ನೇಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್, ʼʼಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀ ಯವರು ನಮ್ಮೆಲ್ಲರಿಗೂ ಆದರ್ಶಪ್ರಾಯರು, ಅವರ  ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡಾಗ ಯಶಸ್ಸು ಕಾಣಲು ಸಾಧ್ಯ. ಸಮಾಜದಲ್ಲಿ ಬದಲಾವಣೆ ತರಲು ನಮ್ಮಿಂದಲೇ ಬದಲಾವಣೆ ಪ್ರಾರಂಭವಾಗಬೇಕು ಎಂದು ಕರೆ ನೀಡಿದವರು ಗಾಂಧೀಜಿ. ಅವರು ತಮ್ಮ ಜೀವನದುದ್ದಕ್ಕೂ ನಡೆ ನುಡಿ, ಆಚಾರ ವಿಚಾರ ಸಮಾನತೆ ಯನ್ನು ಅಳವಡಿಸಿಕೊಂಡಿದ್ದರು. ಅವರ ಸರಳತೆಯನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು. ಸರ್ವೋದಯ ಮತ್ತು ಗ್ರಾಮ ಸ್ವರಾಜ್ ಅಭಿವೃದ್ಧಿಯನ್ನು ನಾವು ಅಳವಡಿಸಿಕೊಳ್ಳುತ್ತಿದ್ದೇವೆ, ರೈತರು ನಮ್ಮ ದೇಶದ ಬೆನ್ನಲುಬು , ನಮ್ಮ ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಭಾರತ ಅಭಿವೃದ್ಧಿ ಹೊಂದುತ್ತದೆ  ಎಂದು ತಿಳಿಸಿದರು. ಹಳ್ಳಿಗಳು ಅಭಿವೃದ್ಧಿ ಹೊಂದಲು ಗ್ರಾಮರಾಜ್ಯವಾಗಬೇಕೆಂದು ಗಾಂಧೀಜಿಯವರು ಪ್ರತಿಪಾದಿಸಿದ್ದರುʼʼ ಎಂದು ತಿಳಿಸಿದರು.

52dcda22c48442b794160ca050d1f4ab
ಚರಕವನ್ನು ನೇಯುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್

ʼʼಸ್ವಾತಂತ್ರ್ಯ ನಂತರದಲ್ಲಿ ದೇಶ ಆಹಾರದ ಕೊರತೆ ಎದುರಿಸುತ್ತಿತ್ತು, ಇದಕ್ಕಾಗಿ  ವಿದೇಶಗಳಿಂದ ಆಹಾರಗಳನ್ನು ಆಮದು ಮಾಡಿಕೊಳ್ಳುತ್ತಿದ್ದೆವು. ಇದನ್ನು ಮನಗಂಡ ಶಾಸ್ತ್ರೀಜಿ ದೇಶದಲ್ಲಿ ಹಸಿರು ಕ್ರಾಂತಿಯನ್ನು ನಡೆಸಿದರು. ಶಾಸ್ತ್ರೀಜಿ ಜೈ ಜವಾನ್ ಜೈ ಕಿಸಾನ್ ಎಂಬ ಕರೆ ನೀಡಿ ಕೃಷಿ ಉತ್ಪಾದಕತೆ ಹೆಚ್ಚಿಸಲು ಕ್ರಮ ಕೈಗೊಂಡರು. ಇವರು ಪಡೆಯುತ್ತಿದ್ದ ನಲವತ್ತು ರೂ.ಗಳ ಸಂಬಳದಲ್ಲಿ ಹತ್ತು ರೂಪಾಯಿಗಳನ್ನು ಉಳಿಸಿ ಬಡವರಿಗೆ ದಾನ ಮಾಡುತ್ತಿದ್ದರು. ಅಂತಹ ಸರಳ ವ್ಯಕ್ತಿತ್ವ ಅವರದ್ದಾಗಿತ್ತು. ತಮ್ಮ ಅಧಿಕಾರವನ್ನು ಸಮಾಜದ ಅಭಿವೃದ್ಧಿಗೆ ಬಳಸುತ್ತಿದ್ದರು. ಆಹಾರ ಸಮಸ್ಯೆ ನೀಗಲು ಒಂದು ಹೊತ್ತಿನ ಊಟವನ್ನು ತ್ಯಾಗ ಮಾಡುವಂತೆ ತಿಳಿಸಿದ ಮ‌ಹಾನ್ ಪ್ರಾಮಾಣಿಕರು ಲಾಲ್ ಬಹದ್ದೂರ್ ಶಾಸ್ತ್ರೀಜಿ ಅವರಾಗಿದ್ದರುʼʼ ಎಂದು ತಿಳಿಸಿದರು. 

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಮಾತನಾಡಿ ʼʼವಿದ್ಯಾರ್ಥಿಗಳು ಗಾಂಧೀಜಿಯವರ ಸತ್ಯದೊಂದಿಗೆ ನನ್ನ ಪ್ರಯೋಗಗಳು ಎಂಬ ಆತ್ಮಕಥನವನ್ನು ಕಡ್ಡಾಯವಾಗಿ ಓದಬೇಕು,ಇದರಿಂದ ವಿದ್ಯಾರ್ಥಿಗಳ ಜೀವನವೇ ಬದಲಾಗಲಿದ್ದು ಆತ್ಮಸ್ಥೈರ್ಯ ಬರಲಿದೆʼʼ ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ರೈತರ ದಾರಿಗೆ ಪ್ರಭಾವಿಗಳ ಅಡ್ಡಿ: ಸೂಕ್ತ ದಾರಿ ಗುರುತಿಸಲು ಕಂದಾಯ ಇಲಾಖೆಗೆ ರೈತ ಸಂಘ ಒತ್ತಾಯ

ಧೂಡಾ ಅಧ್ಯಕ್ಷ ದಿನೇಶ್ ಕೆ. ಶೆಟ್ಟಿ , ಅಪರ ಜಿಲ್ಲಾಧಿಕಾರಿ ಎಸ್ .ಶಿವಕುಮಾರ್, ಮುಖಂಡರುಗಳಾದ ರವಿಕುಮಾರ್, ಅವರೆಗೆರೆ ರುದ್ರಮುನಿ, ಎ.ನಾಗರಾಜ್ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ,ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಧನಂಜಯ, ಸೇರಿದಂತೆ ಜಿಲ್ಲಾ ಮತ್ತು ತಾಲ್ಲುಕು ಮಟ್ಟದ ಅಧಿಕಾರಿಗಳು ,  ವಿದ್ಯಾರ್ಥಿನಿ ಐಶ್ವರ್ಯ ಮತ್ತು ವಿಶಾಲ್ ಗಾಂಧಿ ಸೇರಿದಂತೆ ಅಜಯ್‌ ನಾರಾಯಣ್, ಸಿದ್ದಗಂಗಾ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ನನ್ನ ಗಂಡನನ್ನು ಭೇಟಿಯಾಗುವ ಅರ್ಹತೆ ನನಗಿಲ್ಲವೇ?’: ರಾಷ್ಟ್ರಪತಿ, ಮೋದಿಗೆ ಪತ್ರ ಬರೆದ ವಾಂಗ್ಚುಕ್ ಪತ್ನಿ

ಲಡಾಖ್‌ಗೆ ರಾಜ್ಯ ಸ್ಥಾನಮಾನ ನೀಡಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಇಟ್ಟುಕೊಂಡು...

ಯುವಜನರಿಗಾಗಿ ಪ್ರಾಣವನ್ನೇ ತ್ಯಾಗ ಮಾಡುತ್ತೇನೆ: ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ

ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ....

ದೆಹಲಿ ಶಾಲೆಗಳಲ್ಲಿ RSS ಬೋಧನೆ: ಮಕ್ಕಳ ಎಳೆ ಮನಸ್ಸಲ್ಲಿ ಕೋಮುದ್ವೇಷ ಬಿತ್ತುವ ಹುನ್ನಾರ!

ಕೋಮುವಾದಿ, ಕೋಮುದ್ವೇಷಿ, ಸಮಾಜಘಾತುಕ ಸಂಘಟನೆಯ ಬಗ್ಗೆ ಶಾಲೆಗಳಲ್ಲಿ ಬೋಧಿಸುವುದು ಎಳೆ ಮನಸ್ಸುಗಳಲ್ಲಿ...

ಆರ್‌ಎಸ್‌ಎಸ್‌ನ ಕೈಗಳಿಗೆ ಮಹಾತ್ಮ ಗಾಂಧಿಯ ರಕ್ತದ ಕಲೆ ಅಂಟಿದೆ: ಕಾಂಗ್ರೆಸ್‌

ಆರ್‌ಎಸ್‌ಎಸ್ ಮಹಾತ್ಮ ಗಾಂಧಿ, ಭಗತ್ ಸಿಂಗ್ ಮತ್ತು ಚಂದ್ರಶೇಖರ್ ಆಜಾದ್ ಅವರಂತಹ...

Download Eedina App Android / iOS

X