ಜನರ ಆಶೀರ್ವಾದದಿಂದ ಎಂಟು ಬಾರಿ ದಸರಾದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

Date:

Advertisements

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಿ ಎಂಟು ಬಾರಿ ದಸರಾದಲ್ಲಿ ಪಾಲ್ಗೊಳ್ಳುವ ಅವಕಾಶ ದೊರೆತಿದ್ದು, ಅತ್ಯಂತ ಸಂತೋಷವನ್ನು ತಂದಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ವಿಶ್ವ ಪ್ರಸಿದ್ಧ ಮೈಸೂರು ದಸರಾದ ಜಂಬೂಸವಾರಿಗೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿ, “ದಸರಾ ಜನರ ಹಬ್ಬ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಆಗಮಿಸಿದಾಗ ಮಾತ್ರ ದಸರಾ ಆಯೋಜನೆ ಯಶಸ್ವಿಯಾಗುತ್ತದೆ. ಮೈಸೂರು ದಸರಾಕ್ಕೆ ಪ್ರವಾಸಿಗರನ್ನು ಸ್ವಾಗತಿಸುತ್ತೇನೆ. ಈ ಬಾರಿ ದಸರಾ ಹಬ್ಬವು ಹನ್ನೊಂದು ದಿನಗಳ ಕಾಲ ನಡೆದಿದ್ದು, ನಾಡಿನ ಜನತೆಗೆ ದಸರಾ ಮಹೋತ್ಸವದ ಶುಭಾಶಯಗಳನ್ನು ಕೋರುತ್ತೇನೆ” ಎಂದರು.

ದಸರಾ ಉತ್ಸವವನ್ನು ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಭಿನಂದಿಸಿದ ಮುಖ್ಯಮಂತ್ರಿಗಳು, ದಸರಾ ಉತ್ಸವ ಯಾವುದೇ ಅಡಚಣೆಗಳಿಲ್ಲದೇ ಯಶಸ್ವಿಯಾಗಿ ನಡೆದಿರುವುದು ಸಂತಸ ತಂದಿದೆ. ಇದಕ್ಕಾಗಿ ಶ್ರಮಿಸಿದ ಸಚಿವರು, ಶಾಸಕರು ಹಾಗೂ ಅಧಿಕಾರಿಗಳನ್ನು ಅಭಿನಂದಿಸುತ್ತೇನೆ ಎಂದು ಹೇಳಿದರು.

Advertisements
dasara 2

ಜಂಟಿ ಸಮೀಕ್ಷೆ ನಂತರ ಬೆಳೆಪರಿಹಾರ

“ಈ ವರ್ಷ ರಾಜ್ಯದೆಲ್ಲೆಡೆ ಉತ್ತಮ ಮಳೆಯಾಗಿದ್ದು, ಎಲ್ಲ ಜಲಾಶಯಗಳು ತುಂಬಿ, ಉತ್ತಮ ಬೆಳೆಯೂ ಆಗುತ್ತಿದೆ. ಆದರೆ ಉತ್ತರಕರ್ನಾಟಕದ ಕೆಲವು ಜಿ್ಲ್ಲೆಗಳಲ್ಲಿ ಅತಿವೃಷ್ಠಿಯಿಂದ ರಾಜ್ಯದಲ್ಲಿ ಸುಮಾರು 10ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆಹಾನಿ ಸಂಭವಿಸಿದೆ. ರೈತರಿಗೆ ಸಮೀಕ್ಷೆ ನಡೆಸಿ ಬೆಳೆಪರಿಹಾರ ನೀಡುವುದಾಗಿ ಕಲ್ಬುರ್ಗಿಯ ಭೇಟಿ ಸಂದರ್ಭದಲ್ಲಿ ತಿಳಿಸಲಾಗಿದ್ದು, ಸರ್ಕಾರ ಮತ್ತು ಎನ್ ಡಿಆರ್ ಎಫ್ ಸೇರಿದಂತೆ ಖುಷ್ಕಿ ಜಮೀನಿನ ತಲಾ ಹೆಕ್ಟೇರ್ ಗೆ 17000 ರೂ ನೀರಾವರಿ ಜಮೀನಿಗೆ 17,500 ರೂ. ಮತ್ತು ಬಹುಬೆಳೆ ಬೆಳೆಯುವ ಜಮೀನಿಗೆ 31ಸಾವಿರ ರೂ.ಗಳ ಪರಿಹಾರ ನೀಡುವುದಾಗಿ ತಿಳಿಸಲಾಗಿದೆ. ಆದರೆ ಹೆಚ್ಚಿನಮಳೆಯಿರುವುದರಿಂದ ಬೆಳೆಹಾನಿಯ ಜಂಟಿಸಮೀಕ್ಷೆ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ಸಮೀಕ್ಷೆಯ ನಂತರ ಬೆಳೆಹಾನಿಯಾದ ಎಲ್ಲ 10 ಲಕ್ಷ ಹೆಕ್ಟೇರ್ ಗೂ ಪರಿಹಾರ ನೀಡಲಾಗುವುದು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಂಧೀಜಿ, ಶಾಸ್ತ್ರಿಯವರ ತ್ಯಾಗ, ಬಲಿದಾನ ಎಂದಿಗೂ ಆದರ್ಶಪ್ರಾಯ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಕ್ಟೋಬರ್ 2ರಂದು ದೇಶಾದ್ಯಂತ ಗಾಂಧಿ ಜಯಂತಿಯನ್ನು ಆಚರಿಸಲಾಗುತ್ತದೆ. ಅವರ ನೇತೃತ್ವದಲ್ಲಿ ನಡೆದ...

5 ಹುಲಿ, 20 ನವಿಲು, 19 ಕೋತಿಗಳ ಸಾವು ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ: ಈಶ್ವರ ಖಂಡ್ರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು,...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ 1% ಪ್ರತ್ಯೇಕ ಮೀಸಲಾತಿಗೆ ಆಗ್ರಹ; ದೆಹಲಿಯಲ್ಲಿ ಪ್ರತಿಭಟನೆ

ಕರ್ನಾಟಕ ಸರ್ಕಾರವು ಒಳಮೀಸಲಾತಿಯನ್ನು ಜಾರಿಗೊಳಿಸಿದೆ. ಆದರೆ, ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ 1%...

ದಾವಣಗೆರೆ | ಪರೀಕ್ಷೆ ಸಮಯ,ನಡೆಯದ ಪಾಠ; ಪರೀಕ್ಷೆ ಮುಂದೂಡಿಕೆಗೆ ಕುಲಸಚಿವರಿಗೆ ವಿದ್ಯಾರ್ಥಿಗಳ ಆಗ್ರಹ

ರಾಜ್ಯದ ಎಲ್ಲಾ ಸರ್ಕಾರಿ ಪದವಿ ಕಾಲೇಜುಗಳು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿದ್ದು...

Download Eedina App Android / iOS

X