ಚಿತ್ರದುರ್ಗ | ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿ ಮಾದರಿ : ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ

Date:

Advertisements

ʼʼಸತ್ಯ ಹಾಗೂ ಅಹಿಂಸೆ ಎಂಬ ಅಸ್ತ್ರಗಳಿಂದ ಬ್ರಿಟೀಷರ ವಿರುದ್ದ ಹೋರಾಡಿದ ಮಹಾತ್ಮ ಗಾಂಧೀಜಿ, ಈ ಎರಡೂ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಂಡಿದ್ದರು. ಇವರ ಹಾದಿಯಲ್ಲೇ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರೀಯವರು ನಡೆದರು. ನೈತಿಕ ರಾಜಕಾರಣಕ್ಕೆ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರು ಮಾದರಿಯಾಗಿದ್ದರುʼʼ ಎಂದು ಚಿತ್ರದುರ್ಗದಲ್ಲಿ ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಭಿಮತ ವ್ಯಕ್ತಪಡಿಸಿದರು.

WhatsApp Image 2025 10 02 at 11.50.17 PM 2

ಚಿತ್ರದುರ್ಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ನಗರಸಭೆ ಸಹಯೋಗದಲ್ಲಿ ಏರ್ಪಡಿಸಲಾದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ಜಯಂತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರುʼʼಗಾಂಧೀಜಿಯವರ ಜೀವನವೇ ನಮಗೆಲ್ಲ ಸಂದೇಶ. ನಾವೆಲ್ಲರು ಗಾಂಧೀ ಮಾರ್ಗದಲ್ಲಿ ಸಾಗಿದರೆ ನೈತಕವಾಗಿ ಬಲವಾಗಿರುವ ಸ್ವಸ್ಥ ಸಮಾಜವನ್ನು ನಿರ್ಮಿಸಬಹುದಾಗಿದೆʼʼ ಎಂದು ತಿಳಿಸಿದರು.

WhatsApp Image 2025 10 02 at 11.50.18 PM 1

ʼʼಪ್ರಸ್ತುತ ಜಗತ್ತಿನಾದ್ಯಂತ ಹಿಂಸೆ ತಾಂಡವವಾಡುತ್ತಿದೆ. ಯುವ ಜನತೆ ಭ್ರಮಾಲೋಕದಲ್ಲಿ ಇದ್ದಾರೆ.. ಓದು ಎನ್ನುವುದು ಕೇವಲ ಕೆಲಸ ಗಿಟ್ಟಿಸಿಕೊಳ್ಳುವ ಮಾರ್ಗವಾಗಿ ಉಳಿದಿದೆ. ಯುವ ಜನತೆ ಬುದ್ದ, ಬಸವ, ಗಾಂಧಿ ಹಾಗೂ ಅಂಬೇಡ್ಕರ್ ಮಾರ್ಗದಲ್ಲಿ ಸಾಗಬೇಕು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎನ್ನುವಂತೆ ಲಾಲ್ ಬಹದ್ದೂರ್ ಶಾಸ್ತ್ರೀ ವ್ಯಕ್ತಿತ್ವ ಮಹೋನ್ನತವಾದುದು. ಶಾಸ್ತ್ರೀಜಿ ಅವರ ಪ್ರಾಮಾಣಿಕತೆ ಹಾಗೂ ಕರ್ತವ್ಯಪರತೆ ನಮಗೆಲ್ಲಾ ಮಾದರಿʼʼ ಎಂದು ಹೇಳಿದರು.

WhatsApp Image 2025 10 02 at 11.50.16 PM 1

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ್ಯ ತಾಜ್‍ಪೀರ್ ಮಾತನಾಡಿ, ʼʼತಮ್ಮ ಐಶಾರಾಮಿ ಜೀವನ ತ್ಯಜಿಸಿ ಬಡವರ ಶ್ರೇಯೋಸ್ಸಿಗಾಗಿ ದುಡಿದರು. ಅರೆ ಬಟ್ಟೆಯ ದೋತಿ ಹಾಗೂ ಖಾದಿ ವಸ್ತ್ರ ಧರಿಸಿ ಗಾಂಧೀಜಿ ದುಂಡು ಮೇಜಿನ ಸಮ್ಮೇಳನದಲ್ಲಿ ಭಾಗವಹಿಸಿದರು. ಸ್ವಾತ್ಯಂತ್ರ ಹೋರಾಟದ ಜೊತೆಗೆ ದೇಶದ ಸಾಮಾಜಿಕ ಸುಧಾರಣೆಗೂ ಗಾಂಧೀಜಿ ಕೊಡುಗೆ ನೀಡಿದ್ದಾರೆʼʼ ಎಂದರು.

WhatsApp Image 2025 10 02 at 11.50.17 PM 3

ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀಜಿ ಕುರಿತು ಉಪನ್ಯಾಸ ನೀಡಿದ ನಿವೃತ್ತ ಪ್ರಾಂಶುಪಾಲ ಡಾ.ಹೆಚ್.ಗುಡ್ಡದೇಶ್ವರಪ್ಪ. ʼʼವಾಸ್ತಾವಿಕತೆಯನ್ನು ನಾವು ಗಾಂಧೀಜಿಯವರಿಂದ ಕಲಿತುಕೊಳ್ಳಬೇಕಿದೆ. ಶೋಷಣೆ, ವರ್ಣವ್ಯವಸ್ಥೆಯಿಂದ ನಲುಗಿಹೋಗಿದ್ದ ರೈತರ ಹಾಗೂ ಶೋಷಿತರ ಅಂತರಾಳವನ್ನು ಕಂಡುಕೊಳ್ಳುವ ಪ್ರಯತ್ನಪಟ್ಟ ಅವರು, ಸತ್ಯವನ್ನೇ ದೇವರು ಎಂದು ಅರಿತು ಅಹಿಂಸಾ ಮಾರ್ಗದ ಮೂಲಕ ಸತ್ಯವನ್ನು ಕಂಡುಕೊಂಡವರು ಗಾಂಧೀಜಿ. ಕೇವಲ ಭಾರತಕ್ಕೆ ಮಾತ್ರ ಸೀಮಿತವಾಗದೇ ಜಾಗತಿಕ ಮಟ್ಟದಲ್ಲಿಯೂ ಮಾರ್ಟಿನ್ ಲೂಥರ್ ಕಿಂಗ್, ನೆಲ್ಸನ್ ಮಂಡೇಲಾ ಸೇರಿದಂತೆ ಹಲವು ನಾಯಕರು ಗಾಂಧೀಜಿಯವರ ಪ್ರಭಾವಕ್ಕೆ ಒಳಗಾಗಿದ್ದಾರೆ ಎಂದು ತಿಳಿಸಿದ ಅವರು, ಸರ್ವರ ಕಲ್ಯಾಣಕ್ಕಾಗಿ ಶ್ರಮಿಸಿದ ಗಾಂಧೀಜಿಯವರು ಸಮಾಜ ಸುಧಾರಕ, ಸಂತ, ದಾರ್ಶನಿಕರು ಹೌದುʼʼ ಎಂದು ಹೇಳಿದರು..

WhatsApp Image 2025 10 02 at 11.50.17 PM 2

ʼʼಸ್ವಾತಂತ್ರ್ಯ ಹೋರಾಟದಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡಿದ್ದ ಲಾಲ್ ಬಹದ್ದೂರ್ ಶಾಸ್ತ್ರಿ ಅವರು, ರಾಜಕೀಯ ಎನ್ನುವುದು ಸೇವೆ, ರಾಜಕೀಯ ಸೇವೆಗೆ ಪ್ರಾಮಾಣಿಕತೆಯ ಸ್ಪರ್ಶ ಬೇಕು ಎಂದು ಅರ್ಥೈಸಿದ ಮಹಾನ್ ಚೇತನ ತಾವು ಪ್ರತಿಪಾದಿಸಿದ ಆದರ್ಶಗಳಂತೆ ಬದುಕಿದವರುʼʼ ಎಂದು ಅಭಿಪ್ರಾಯಪಟ್ಟರು.

WhatsApp Image 2025 10 02 at 11.50.17 PM 1

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಮಹಾತ್ಮಾ ಗಾಂಧೀಜಿ ಜಯಂತಿ ಅಂಗವಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಜಿಲ್ಲೆಯ ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಹಾಗೂ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಏರ್ಪಡಿಸಿದ್ದ ಜಿಲ್ಲಾಮಟ್ಟದ ಬಾಪೂಜಿ ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

WhatsApp Image 2025 10 02 at 11.50.16 PM

ಪ್ರೌಢಶಾಲಾ ವಿಭಾಗದಲ್ಲಿ ಚಿತ್ರದುರ್ಗ ತಾಲ್ಲೂಕು ಚವಲಿಹಳ್ಳಿ ಗೊಲ್ಲರಹಟ್ಟಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಜೆ.ತನುಜ, ಹೊಸದುರ್ಗ ತಾಲ್ಲೂಕು ಕಂಗುವಳ್ಳಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಕೆ.ಬಿ.ದೀಕ್ಷಾ, ಹಿರಿಯೂರು ತಾಲ್ಲೂಕು ಹರಿಯಬ್ಬೆ ಕರ್ನಾಟಕ ಪಬ್ಲಿಕ್ ಶಾಲೆಯ ಅಪೂರ್ವ. ಪದವಿಪೂರ್ವ ಕಾಲೇಜು ವಿಭಾಗದಲ್ಲಿ ಹೊಸದುರ್ಗ ತಾಲ್ಲೂಕು ಶ್ರೀರಾಂಪುರ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಬಿ.ಎನ್.ಕವಿತಾ, ಹೊಳಲ್ಕೆರೆ ತಾಲ್ಲೂಕು ಚಿಕ್ಕಜಾಜೂರು ಎಸ್‍ಜೆಎಂ ಪದವಿಪೂರ್ವ ಕಾಲೇಜಿನ ಎಸ್.ಸಂಜನ, ಚಿತ್ರದುರ್ಗ ತಾಲ್ಲೂಕು ಸಿರಿಗೆರೆ ಬಿಎಲ್‍ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಕಾಳಮ್ಮ ಹಾಗೂ ಪದವಿ/ಸ್ನಾತಕೋತ್ತರ ವಿಭಾಗದಲ್ಲಿ ಚಿತ್ರದುರ್ಗ ಸರ್ಕಾರಿ ಕಲಾ ಕಾಲೇಜಿನ ವಿದ್ಯಾರ್ಥಿನಿ ಗೌತಮಿ, ಚಿತ್ರದುರ್ಗ ತಾಲ್ಲೂಕು ಸಿರಿಗೆರೆ ಎಂ.ಬಸವಯ್ಯ ವಸತಿ ವಿದ್ಯಾಲಯದ ವಿದ್ಯಾರ್ಥಿನಿ ಕೆ.ಎಂ.ಶ್ರೀರಕ್ಷ, ಚಿತ್ರದುರ್ಗ ತಾಲ್ಲೂಕು ಭರಮಸಾಗರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ಪಿ.ನಿರ್ಮಿತ ಅವರಿಗೆ ಕ್ರಮವಾಗಿ ಪ್ರಥಮ ಬಹುಮಾನ ರೂ.3000, ದ್ವಿತೀಯ-2000 ಹಾಗೂ ತೃತೀಯ-ರೂ.1000ಗಳ ಬಹುಮಾನ ವಿತರಣೆ ಪ್ರಮಾಣಪತ್ರ ವಿತರಣೆ ಮಾಡಲಾಯಿತು.

WhatsApp Image 2025 10 02 at 11.50.19 PM 1

ಕಾರ್ಯಕ್ರಮದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಶಿವಣ್ಣ, ನಗರಸಭೆ ಅಧ್ಯಕ್ಷೆ ಎಂ.ಪಿ. ಅನಿತಾ ರಮೇಶ್, ಉಪಾಧ್ಯಕ್ಷೆ ಶಕೀಲಾಬಾನು, ಉಪವಿಭಾಗಾಧಿಕಾರಿ ಮೆಹಬೂಬ್ ಜಿಲಾನಿ ಖುರೇಷಿ, ಜಿ.ಪಂ. ಉಪ ಕಾರ್ಯದರ್ಶಿ ಡಾ.ರಂಗಸ್ವಾಮಿ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಶಿವಕುಮಾರ್, ನಗರಾಭಿವೃದ್ಧಿ ಕೋಶ ಯೋಜನಾ ನಿರ್ದೇಶಕಿ ರೇಷ್ಮಾ ಹಾನಗಲ್, ಜಿಲ್ಲಾ ವಾರ್ತಾಧಿಕಾರಿ ಬಿ.ವಿ.ತುಕಾರಾಂರಾವ್, ನಗರಸಭೆ ಆಯುಕ್ತೆ ಲಕ್ಷ್ಮೀ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಬಿ.ಎಂ. ಗುರುನಾಥ್, ಡಿಡಿಪಿಐ ಮಂಜುನಾಥ್, ಡಿಡಿಪಿಯು ಕೆ. ತಿಮ್ಮಯ್ಯ, ಸಮಾಜ ಕಲ್ಯಾಣಾ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಚಂದ್ರಕಾಂತ್ ನಾಗಸಮುದ್ರ, ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ, ಮೀನಾಕ್ಷಿ ಭಟ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಧಿಕಾರ ಹಂಚಿಕೆ ಕುರಿತು ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ: ಡಿ ಕೆ ಶಿವಕುಮಾರ್

ಅಧಿಕಾರ ಹಂಚಿಕೆ ವಿಚಾರದಲ್ಲಿ ಯಾರೇ ಮಾತನಾಡಿದರೂ ಅದು ಪಕ್ಷ ವಿರೋಧಿ ಕೆಲಸ....

ಭಾರತದಲ್ಲಿ ಪ್ರತಿ ಗಂಟೆಗೆ ಓರ್ವ ರೈತ ಆತ್ಮಹತ್ಯೆ: NCRB ವರದಿ

ಭಾರತದಲ್ಲಿನ ಅಪರಾಧ ಪ್ರಕರಣಗಳ ಕುರಿತಾಗಿ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB)...

ಸರ್ಕಾರಿ ಕೆಲಸಕ್ಕಾಗಿ ಮಗುವನ್ನು ಕಾಡಿಗೆ ಎಸೆದ ಪೋಷಕರು; ಬಂಡೆ ಕೆಳಗೆ ಬದುಕುಳಿದ ಶಿಶು

ಕಾಡಿನ ತಂಪಾದ ನೆಲದಲ್ಲಿ, ತೆರೆದ ಆಕಾಶದ ಕೆಳಗೆ ಆ ಮಗು ಕೂಗುತ್ತಿತ್ತು....

Download Eedina App Android / iOS

X