ಮಲ್ಲಿಕಾರ್ಜುನ ಖರ್ಗೆಗೆ ಪೇಸ್‌ಮೇಕರ್‌ ಅಳವಡಿಕೆ ಯಶಸ್ವಿ; ಆಸ್ಪತ್ರೆಯಿಂದ ಡಿಸ್‌ಚಾರ್ಜ್

Date:

Advertisements

ಉಸಿರಾಟದ ಸಮಸ್ಯೆಯಿಂದ ಮಂಗಳವಾರ ರಾತ್ರಿ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಗೆ ದಾಖಲಾಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬುಧವಾರ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್‌’ನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ. ಇದೀಗ ಅವರ ಆರೋಗ್ಯ ಸ್ಥಿರವಾಗಿದ್ದು, ಗುರುವಾರ ತಡರಾತ್ರಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆಂದು ತಿಳಿದುಬಂದಿದೆ.

ಈ ಬಗ್ಗೆ ಕಾಂಗ್ರೆಸ್ ಹೇಳಿಕೆ ನೀಡಿದ್ದು, ‘ಖರ್ಗೆ ಆರೋಗ್ಯ ಸ್ಥಿರವಾಗಿದ್ದು, ಆಸ್ಪತ್ರೆಯಿಂದ ಬಿಡುಗಡೆ ಆಗಿದ್ದಾರೆ. ಶೀಘ್ರ ಕೆಲಸ ಆರಂಭಿಸುವ ನಿರೀಕ್ಷೆ ಇದೆ’ ಎಂದು ಹೇಳಿದೆ.

ದಿಢೀರ್ ಉಸಿರಾಟದ ಸಮಸ್ಯೆಗೆ ಸಿಲುಕಿದ್ದ ಖರ್ಗೆ ಅವರು ಮಂಗಳವಾರ ರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ತಪಾಸಣೆ ನಡೆಸಿದ್ದ ವೈದ್ಯರು ಹೃದಯ ಬಡಿತದಲ್ಲಿ ಏರುಪೇರಾಗಿರುವುದು ಪತ್ತೆ ಮಾಡಿದ್ದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನರಮೇಧ ನಡೆಸಿದವರೊಂದಿಗೆ ಭಾರತ ನಿಲ್ಲುವುದು ಅಕ್ಷಮ್ಯ ಅಪರಾಧ

ಬಳಿಕ ಬುಧವಾರ ಅವರನ್ನು ಶಸ್ತ್ರಚಿಕಿತ್ಸೆಗೆ ಒಳಪಡಿಸಿ, ಹೃದಯದ ಬಡಿತ ನಿಯಂತ್ರ ಣಕ್ಕೆ ತರುವಂಥ ಶಾಶ್ವತ ಪೇಸ್ ಮೇಕರ್ ಅಳವಡಿಸಲಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. ಮಲ್ಲಿಕಾರ್ಜುನ ಖರ್ಗೆ ಅವರು ಆಸ್ಪತ್ರೆಗೆ ದಾಖಲಾಗಿದ್ದ ವಿಷಯ ತಿಳಿದ ನಂತರ ಗಣ್ಯರು ರಾಮಯ್ಯ ಆಸ್ಪತ್ರೆಗೆ ಭೇಟಿ ನೀಡಿ ಅವರ ಆರೋಗ್ಯ ವಿಚಾರಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ಡಾ. ಜಿ.ಪರಮೇಶ್ವ‌ರ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೆ, ಪ್ರಧಾನಿ ಮೋದಿ ಅವರು ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ ಆರೋಗ್ಯ ವಿಚಾರಿಸಿ, ಧೀರ್ಘಾಯುಷ್ಯಕ್ಕೆ ಹಾರೈಸಿದ್ದಾರೆ.

ಈ ನಡುವೆ, ಸಚಿವ ಹಾಗೂ ಪುತ್ರ ಪ್ರಿಯಾಂಕ್ ಖರ್ಗೆ ಮಾತನಾಡಿ, ‘ಮಲ್ಲಿಕಾರ್ಜುನ ಖರ್ಗೆ ಅವರ ಆರೋಗ್ಯ ಸ್ಥಿರವಾಗಿದೆ. ವಯೋಸಹಜ ಸಮಸ್ಯೆ ಹಾಗೂ ಉಸಿರಾಟದ ತೊಂದರೆಯಿಂದಾಗಿ ಅವರಿಗೆ ಪೇಸ್‌ಮೇಕರ್‌ ಅಳವಡಿಕೆಗೆ ವೈದ್ಯರು ಸಲಹೆ ನೀಡಿದ್ದರು. ಅದರಂತೆ ಶಸ್ತ್ರಚಿಕಿತ್ಸೆ ಮೂಲಕ ಪೇಸ್‌ಮೇಕರ್ ಅಳವಡಿಸಲಾಗಿದೆ. ಅದನ್ನು ಹೊರತುಪಡಿಸಿ ಬೇರೆ ಸಮಸ್ಯೆಯಿಲ್ಲ. ವೈದ್ಯರು ಎರಡೂರು ದಿನ ವಿಶ್ರಾಂತಿಗೆ ಸೂಚಿಸಿದ್ದಾರೆ. ಯಾರೂ ಆತಂಕಪಡುವ ಅವಶ್ಯಕತೆಯಿಲ್ಲ ಎಂದು ಹೇಳಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಬೆಸ್ಕಾಂ ಉಗ್ರಾಣದಲ್ಲಿ3.85 ಕೋಟಿ ರೂ ಹಗರಣ: ಸಾಮಗ್ರಿಗಳ ದುರುಪಯೋಗ ದೂರು ದಾಖಲು

ಬೆಸ್ಕಾಂ ವಿಭಾಗೀಯ ಉಗ್ರಾಣದಲ್ಲಿ 3.85 ಕೋಟಿ ಮೌಲ್ಯದ ಸಾಮಗ್ರಿಗಳ ದುರುಪಯೋಗ ಮಾಡಿರುವ...

ಜನರ ಆಶೀರ್ವಾದದಿಂದ ಎಂಟು ಬಾರಿ ದಸರಾದಲ್ಲಿ ಪಾಲ್ಗೊಂಡಿರುವುದು ನನ್ನ ಸೌಭಾಗ್ಯ: ಸಿದ್ದರಾಮಯ್ಯ

ನಾನು ಎರಡು ಬಾರಿ ಮುಖ್ಯಮಂತ್ರಿಯಾಗಿ, ಎಲ್ಲ ದಸರಾ ಉತ್ಸವಗಳಲ್ಲಿ ಭಾಗಿಯಾಗಿದ್ದೇನೆ. ಜನರ...

ಒಳ ಮೀಸಲಾತಿ | ಎಐಸಿಸಿ ಹಸ್ತಕ್ಷೇಪಕ್ಕೆ ಹೆಚ್ಚಿದ ಆಗ್ರಹ, ದೆಹಲಿ ಬಿಡದಿರಲು ಅಲೆಮಾರಿ ಸಂಸತ್ತು ತೀರ್ಮಾನ

ಒಳ ಮೀಸಲಾತಿ ವಿತರಣೆಯಲ್ಲಿ ಕರ್ನಾಟಕದ ಅಸ್ಪೃಶ್ಯ ದಲಿತ ಅಲೆಮಾರಿ ಸಮುದಾಯಗಳಿಗೆ ಆಗಿರುವ...

ಸಂವಿಧಾನದ ಧರ್ಮನಿರಪೇಕ್ಷ ಸಿದ್ಧಾಂತ ಅವಮಾನಿಸಿದ ಮೋದಿ: ಬಿ ಕೆ ಹರಿಪ್ರಸಾದ್‌ ಕಿಡಿ

ಸಾಂವಿಧಾನಿಕ ಹುದ್ದೆಯಲ್ಲಿದ್ದೂ, ಸಂವಿಧಾನ ವಿರೋಧಿ ಸಂಘಟನೆಯ ಪ್ರಚಾರ ನಡೆಸುವುದು ಪ್ರಧಾನಿ ಹುದ್ದೆಗೆ...

Download Eedina App Android / iOS

X